ಕೆಂಭಾವಿ ಪುರಸಭೆಗೆ ತಹಶೀಲ್ದಾರ್ ಭೇಟಿ-ಪರಿಶೀಲನೆ
Team Udayavani, Dec 9, 2021, 11:02 AM IST
ಕೆಂಭಾವಿ: ಪುರಸಭೆ ಚುನಾವಣಾ ಪ್ರಕ್ರಿಯೆ ಪ್ರಾರಂಭವಾದ ಹಿನ್ನೆಲೆಯಲ್ಲಿ ಪಟ್ಟಣದ ಪುರಸಭೆಗೆ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು, ಜಿಲ್ಲಾಧಿ ಕಾರಿಗಳು ಇಂದಿನಿಂದ ಚುನಾವಣಾ ನೀತಿ ಸಂಹಿತೆ ಜಾರಿ ಮಾಡಿ ಆದೇಶ ನೀಡಿದ್ದು, ನಾಮಪತ್ರ ಸಲ್ಲಿಕೆಯೂ ಇಂದಿನಿಂದಲೇ ಪ್ರಾರಂಭವಾಗಲಿದೆ. ಈಗಾಗಲೇ ಚುನಾವಣೆಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ವಾರ್ಡ್ ನ.1ರಿಂದ 12ರ ವರೆಗೆ ಓರ್ವ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಮತ್ತು ವಾರ್ಡ್ ನಂ.13ರಿಂದ 23ರ ವರೆಗೆ ಓರ್ವ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ಜಿಲ್ಲಾಧಿಕಾರಿಗಳು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಚುನಾವಣೆ ಮುಗಿಯುವವರೆಗೂ ಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸನ್ನದ್ಧವಾಗಿದ್ದು, ಯಾವುದೇ ಅಹಿತಕರ ಘಟನೆ ಜರುಗದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪುರಸಭೆ ವ್ಯಾಪ್ತಿಯ ಎಲ್ಲ ವಾರ್ಡ್‌ಗಳ ಮತಕೇಂದ್ರಗಳ ಪರಿಶೀಲನೆ ಕಾರ್ಯ ನಮ್ಮ ಅಧಿಕಾರಿಗಳು ಈಗಾಗಲೇ ನಡೆಸಿದ್ದು, ಎಲ್ಲ ಮತಕೇಂದ್ರಗಳ ಸ್ವತ್ಛತೆ ಕಾಪಾಡಲು ಪುರಸಭೆಗೆ ಸೂಚನೆ ನೀಡಲಾಗಿದೆ ಎಂದರು.
ನಂತರ ಚುನಾವಣೆಗೆ ಸಂಬಂದ ಪ್ರಕಟಣೆಗಳು, ಮತದಾರ ಯಾದಿ, ನಾಮಪತ್ರ ಸಲ್ಲಿಸುವ ಸ್ಥಳಗಳನ್ನು ಪರಿಶೀಲನೆ ಮಾಡಿದರು. ಚುನಾವಣಾಧಿಕಾರಿಗಳಾದ ಮಹಾದೇವಪ್ಪಗೌಡ ಬಿರಾದಾರ, ಪ್ರಕಾಶ ಹೊಸಮನಿ, ಉಪತಹಶೀಲ್ದಾರ್ ಮಲ್ಲಿಕಾರ್ಜುನ ಪಾಟೀಲ, ಕಂದಾಯ ನಿರೀಕ್ಷಕ ಲಕ್ಷ್ಮಣ ತಳವಾರ, ಗ್ರಾಮ ಲೇಖಪಾಲಕ ರಾಜೇಸಾಬ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.