ಆರೋಗ್ಯ ಮೇಳ ಲಾಭ ಪಡೆಯಿರಿ
Team Udayavani, Apr 23, 2022, 12:49 PM IST
ಅಫಜಲಪುರ: ರಾಜ್ಯ ಸರ್ಕಾರ ಬಡವರು, ಮಧ್ಯಮ ವರ್ಗದ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಆಯೋಜನೆ ಮಾಡುತ್ತಿರುವ ಆರೋಗ್ಯ ಮೇಳದ ಲಾಭವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಶಾಸಕ ಎಂ.ವೈ. ಪಾಟೀಲ ಹೇಳಿದರು.
ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಡವರು, ಮಧ್ಯಮ ವರ್ಗದ ಜನರಿಗೆ ಉತ್ತಮ ರೀತಿಯ ಆರೋಗ್ಯ ಸೌಲಭ್ಯಗಳು ಸಿಗುತ್ತಿಲ್ಲ. ಹೀಗಾಗಿ ಸರ್ಕಾರ ಆರೋಗ್ಯ ಇಲಾಖೆಗೆ ಇನ್ನಷ್ಟು ಬಲ ತುಂಬುವ ಕೆಲಸ ಮಾಡಬೇಕು ಎಂದರು.
ಆರೋಗ್ಯ ಇಲಾಖೆ ನಿಂತ ನೀರಾಗಬಾರದು, ಚಲನಶೀಲ ವಾಗಿರಬೇಕು. ಸರ್ಕಾರದಿಂದ ಬರುವ ಆರೋಗ್ಯ ಸೇವೆಗಳನ್ನು ಬಡ ಜನರಿಗೆ ತಲುಪಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ವೈದ್ಯರು, ಆರೋಗ್ಯ ಇಲಾಖೆಯವರು ತಮ್ಮ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಬೇಕೆಂದು ತಾಕೀತು ಮಾಡಿದರು.
ತಾಲೂಕು ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಯಂತ್ರ ಕೆಟ್ಟು ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಡಯಾಲಿಸಿಸ್ ಯಂತ್ರ ದುರಸ್ತಿ ಮಾಡುವಂತೆ ಸಂಬಂಧಪಟ್ಟವರಿಗೆ ಅನೇಕ ಬಾರಿ ಹೇಳಿದರೂ ಪ್ರಯೋಜನವಾಗಿಲ್ಲ. ಸರ್ಕಾರ ಕೂಡಲೇ ಈ ಕುರಿತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ತಹಶೀಲ್ದಾರ್ ಸಂಜೀವಕುಮಾರ ದಾಸರ್ ಮಾತನಾಡಿ, ಸರ್ಕಾರದ ಆದೇಶದ ಪ್ರಕಾರ ಆರೋಗ್ಯ ಮೇಳ ಆಯೋಜಿಸಲಾಗಿದೆ. ಜನಸಾಮಾನ್ಯರು ಇಂತಹ ಮೇಳಗಳ ಸದುಪಯೋಗ ಪಡೆದುಕೊಂಡು ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದರು.
ಡಿಎಚ್‌ಒ ಡಾ| ಶರಣಬಸಪ್ಪ ಗಣಜಲಖೇಡ ಮಾತನಾಡಿ, ಜನರಲ್ಲಿ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಕೆಲಸವನ್ನು ನಾವು ನಿರಂತರವಾಗಿ ಮಾಡುತ್ತಿದ್ದೇವೆ. ಸಾರ್ವಜನಿಕರು ಆರೋಗ್ಯ ಇಲಾಖೆ ಯೋಜನೆಗಳ ಲಾಭ ಪಡೆದುಕೊಳ್ಳಬೇಕು. ಮುಖ್ಯವಾಗಿ ಆಯುಷ್ಮಾನ್ ಕಾರ್ಡ್ ಲಾಭ ಪಡೆದುಕೊಳ್ಳಬೇಕು. ಆರೋಗ್ಯ ಸಮಸ್ಯೆ ಇದ್ದಾಗ ದೊಡ್ಡ ಆಸ್ಪತ್ರೆಗಳಿಗೆ ಹೋದರೆ ಈ ಕಾರ್ಡ್‍ನಿಂದ ಬಹಳಷ್ಟು ಅನುಕೂಲವಾಗಲಿದೆ. “ಇ ಸಂಜೀವಿನಿ’ ಒಪಿಡಿಗೂ ಉಪಯೋಗವಾಗಲಿದೆ ಎಂದು ತಿಳಿಸಿದರು.
ಪುರಸಭೆ ಅಧ್ಯಕ್ಷೆ ರೇಣುಕಾ ರಾಜಶೇಖರ ಪಾಟೀಲ, ಡಾ| ರತ್ನಾಕರ ತೋರಣ, ಡಾ| ಅಭಯಕುಮಾರ, ಡಾ| ಚೇತನ, ಡಾ| ರಾಜಕುಮಾರ, ಡಾ| ರತ್ನಶೀಲ, ಡಾ| ಶಿವಕುಮಾರ, ಡಾ| ಪ್ರಸನ್ನ ಕಟ್ಟಿ, ಡಾ| ಇರ್ಫಾನ್, ಡಾ| ಎಚ್. ಎಸ್ ದೇಶಮುಖ, ಡಾ| ಗಿರಿಜಾ, ಡಾ| ಚಂದ್ರಕಾಂತ, ಡಾ| ಶಾಂತಕುಮಾರ, ಸಿಡಿಪಿಒ ಮೀನಾಕ್ಷಮ್ಮ ಪಾಟೀಲ, ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.