ಸೋಂಕಿಗೆ ಶಿಕ್ಷಕರು ಬಲಿ: ಸರ್ಕಾರ ದೂಷಣೆ ಸರಿಯಲ್ಲ
Team Udayavani, May 17, 2021, 6:55 PM IST
ಕಲಬುರಗಿ: ಚುನಾವಣೆಯಲ್ಲಿ ಶಿಕ್ಷಕರು ತಮ್ಮ ಕರ್ತವ್ಯ ಪ್ರಜ್ಞೆ ಮೆರೆದು ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸಿದ್ದು, ಇದರಲ್ಲಿ ಕೆಲವರು ತಮ್ಮ ಜೀವವನ್ನೇ ಬಲಿ ಕೊಟ್ಟಿದ್ದರಿಂದ ಅವರ ಕುಟುಂಬ ವರ್ಗಕ್ಕೆ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಕಳವಳ ವ್ಯಕ್ತಪಡಿಸಿದ್ದಾರೆ.
ಉಪ ಚುನಾವಣೆ ಮತ್ತು ಚುನಾವಣೆಗಳನ್ನು ನಡೆಸುವುದು ಚುನಾವಣೆ ಆಯೋಗದ ನಿರ್ಧಾರವಾಗಿರುತ್ತದೆ. ಇದರಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಸ್ತಕ್ಷೇಪ ಇರುವುದಿಲ್ಲ. ಆದರೆ ಚುನಾವಣೆ ಸಂದರ್ಭದಲ್ಲಿ ಕೊರೊನಾ ಇಷ್ಟೊಂದು ಪರಿಣಾಮ ಬೀರಿರಲಿಲ್ಲ. ಈ ಸಂದರ್ಭದಲ್ಲಿ ವಿಶೇಷವಾಗಿ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಕೆಲವು ಶಿಕ್ಷಕರು ಕೊರೊನಾವನ್ನು ಲೆಕ್ಕಿಸದೇ ಕರ್ತವ್ಯ ನಿರ್ವಹಿಸಿ, ತಮ್ಮ ಜೀವವನ್ನೇ ಬಲಿ ಕೊಟ್ಟಿದ್ದಾರೆ.
ಇತಂಹ ಸ್ಥಿತಿಯಲ್ಲಿ ಸರ್ಕಾರವನ್ನು ದೋಷಿಸುವುದು ಸರಿಯಲ್ಲ. ಕೊರೊನಾ ಯಾವುದೇ ಪಕ್ಷ ಮತ್ತು ಜಾತಿ, ಶ್ರೀಮಂತ, ಬಡವ ಎಲ್ಲರಿಗೂ ಬರುವಂತಹದ್ದು. ಇದನ್ನು ದೂರವಿರಿಸಲು ತಜ್ಞರು ಮಾಸ್ಕಹಾಕುವುದು, ಸಾಮಾಜಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್ ಬಳಸಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನು ಪಾಲಿಸಬೇಕು ಎಂದು ಹೇಳಿದರು. ಕೊರೊನಾಕ್ಕೆ ಬಲಿಯಾದ ಶಿಕ್ಷಕರ ಕುಟುಂಬಕ್ಕೆ ಸರ್ಕಾರದಿಂದ ಬರುವಂತ ಹಣಕಾಸಿನ ಸೌಲಭ್ಯ, ಅನುಕಂಪದ ನೌಕರಿ ಶೀಘ್ರ ದೊರೆಯುವಂತೆ ಮಾಡಲು ಪ್ರಯತ್ನಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್-19 ಮಹಾಮಾರಿ ಸಂದಿಗ್ಧ ಪರಿಸ್ಥಿತಿಯಲ್ಲಿ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ದೇಶದಲ್ಲಿ ಆರ್ಥಿಕ ಸಂಕಷ್ಟ ಪರಿಸ್ಥಿತಿ ಉಂಟಾಗಿದ್ದು, ಜನರಿಗೆ ಚಿಕಿತ್ಸೆ, ಲಸಿಕೆ ಹಾಕುವ ಕಾರ್ಯಮಗಳಿಗಾಗಿ ಹಗಲಿರುಳು ಶ್ರಮಿಸಲಾಗುತ್ತಿದೆ. ಇದೇ ರೀತಿಯಾಗಿ ಕೋವಿಡ್-19 ನಿಯಂತ್ರಣಕ್ಕೆ ಸರ್ಕಾರವು ತೆಗೆದುಕೊಳ್ಳುವ ಕ್ರಮವನ್ನು ಸ್ವಾಗತಿಸಿ, ಅವುಗಳನ್ನು ಕಟ್ಟುನಿಟ್ಟಾಗಿ ಜನರು ಪಾಲಿಸಬೇಕೆಂದು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.