ಕೈಗೆ ಬಲ ತುಂಬಿದ ಉಪ ಚುನಾವಣೆ
Team Udayavani, Jan 3, 2022, 10:56 AM IST
ಸೇಡಂ: ಗ್ರಾಮ ಪಂಚಾಯಿತಿ ಮತ್ತು ಪುರಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಗಿಂತಲೂ ಡಬಲ್ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೇಡಂ ವಿಧಾನಸಭೆ ವ್ಯಾಪ್ತಿಯಲ್ಲಿ 32 ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಇದರಲ್ಲಿ ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದ್ದು, ಇನ್ನುಳಿದ 31ರಲ್ಲಿ ಕಾಂಗ್ರೆಸ್ 20 ಸ್ಥಾನಗಳಲ್ಲಿ ಗೆದ್ದಿದೆ. ಒಂದು ಪಕ್ಷೇತರ ಅಭ್ಯರ್ಥಿ ಹಾಗೂ ಬಿಜೆಪಿ 10 ಸ್ಥಾನ ಗೆದ್ದಿದೆ ಎಂದರು.
ಅಲ್ಲದೇ 425 ಭಾರಿ ಅಂತರದಿಂದ ಪುರಸಭೆಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದೆ. ಇದು ಮುಂದಿನ ವಿಧಾನಸಭೆ ಚುನಾವಣೆ ದಿಕ್ಸೂಚಿಯಾಗಿದೆ. ವಿಧಾನಸಭೆ ವ್ಯಾಪ್ತಿಯ ಕರ್ಚಖೇಡ್ ಗ್ರಾಪಂನ 13 ಸ್ಥಾನಗಳಲ್ಲಿ ಕಾಂಗ್ರೆಸ್ ಗೆ 7 ಸ್ಥಾನ, ಗರಗಪಳ್ಳಿಯ 16ರ ಪೈಕಿ 12ರಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಮೂಲಕ ಎರಡೂ ಗ್ರಾಮ ಪಂಚಾಯಿತಿಗಳಲ್ಲಿ ಬಹುಮತ ಸಾಧಿಸಿದೆ ಎಂದು ಹೇಳಿದರು.
ಅಭಿವೃದ್ಧಿ ಮರೆಮಾಚಿ ಭ್ರಷ್ಟಾಚಾರದಲ್ಲಿ ತೊಡಗಿರುವ ಬಿಜೆಪಿಗೆ ಜನತೆ ಸರಿಯಾದ ಉತ್ತರ ನೀಡಿದ್ದಾರೆ. ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ಸಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಆಡಳಿತ ದುರುಪಯೋಗ ಮಾಡಿಕೊಂಡು ಜನರಿಗೆ ಮಂಕು ಬೂದಿ ಎರಚಲಾಗುತ್ತಿದೆ ಎಂದು ಆರೋಪಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ, ಎಪಿಎಂಸಿ ಅಧ್ಯಕ್ಷ ಹೇಮರೆಡ್ಡಿ ಪಾಟೀಲ, ಹಿರಿಯ ಮುಖಂಡ ವಿಶ್ವನಾಥ ಪಾಟೀಲ ಬೊಮ್ನಳ್ಳಿ, ಅಬ್ದುಲ್ ಗಫೂರ ಹಾಗೂ ಇತರರು ಇದ್ದರು.
15 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ನಿಟ್ಟಿನಲ್ಲಿ ಸರ್ಕಾರ ಘೋಷಿಸಿದೆ. ಈ ವಯಸ್ಸಿನ ಮಿತಿಯೊಳಗೆ ಇರುವವರು ಲಸಿಕೆ ಪಡೆದುಕೊಳ್ಳಬೇಕು. ಶಾಲೆ-ಕಾಲೇಜುಗಳಲ್ಲಿನ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ನಿಟ್ಟಿನಲ್ಲಿ ಶಾಲೆ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಗಮನಹರಿಸಬೇಕು. ಜೊತೆಗೆ 60 ವರ್ಷ ಮೇಲ್ಪಟ್ಟವರು ಬೂಸ್ಟರ್ ಡೋಸ್ ಪಡೆಯಬೇಕು. ಮುಂದಿನ ದಿನಗಳಲ್ಲಿ ಕೋವಿಡ್ ದೊಡ್ಡ ಪ್ರಮಾಣದಲ್ಲಿ ಉಲ್ಬಣಿಸುವ ಮುನ್ಸೂಚನೆ ಇದ್ದು, ಬೆಡ್, ಆಕ್ಸಿಜನ್, ಔಷಧಗಳ ಶೇಖರಣೆ ಬಗ್ಗೆ ಜಿಲ್ಲಾಡಳಿತಕ್ಕೆ ಸಲಹೆ ನೀಡಿದ್ದೇನೆ. -ಡಾ| ಶರಣಪ್ರಕಾಶ ಪಾಟೀಲ, ಮಾಜಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.