ಹರನೂರ ಕೂಲಿ ಕಾರ್ಮಿಕರ ಧರಣಿ ಅಂತ್ಯ
Team Udayavani, Mar 17, 2022, 3:19 PM IST
ಜೇವರ್ಗಿ: ಉದ್ಯೋಗ ಖಾತ್ರಿ ಸಂಪೂರ್ಣ ಜಾರಿಗೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ತಾಲೂಕಿನ ಹರನೂರ ಗ್ರಾಮ ಪಂಚಾಯಿತಿ ಕಚೇರಿ ಎದುರು ಕಳೆದ ಶುಕ್ರವಾರದಿಂದ ನಡೆಸಲಾಗುತ್ತಿದ್ದ ಧರಣಿಯನ್ನು ಬುಧವಾರ ಅಧಿಕಾರಿಗಳ ಭರವಸೆ ಮೇರೆಗೆ ಅಂತ್ಯಗೊಳಿಸಲಾಯಿತು.
60 ವರ್ಷ ದಾಟಿದ ರೈತರು ಹಾಗೂ ಕೂಲಿ ಕಾರ್ಮಿಕರಿಗೆ ಪ್ರತಿ ತಿಂಗಳು ಕನಿಷ್ಟ 7,500ರೂ. ಮಾಸಾಶನ ಮಂಜೂರಿ ಮಾಡಬೇಕು. ರೈತರು ಬೆಳೆಯುವ ಎಲ್ಲ ಬೆಳೆಗಳಿಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ನಿಗದಿ ಪಡಿಸಬೇಕು. ಬೆಳಗ್ಗೆ 9ರಿಂದ ಸಂಜೆ 4 ಗಂಟೆ ವರೆಗೆ ಉದ್ಯೋಗ ಖಾತ್ರಿ ಕೆಲಸ ನಿರ್ವಹಿಸಬೇಕು ಎಂಬ ಸರ್ಕಾರದ ಆದೇಶ ರದ್ದುಪಡಿಸಬೇಕು. ಅರ್ಜಿ ಸಲ್ಲಿಸಿದ ಎಲ್ಲರಿಗೂ ನಿಗದಿ ಪಡಿಸಿದ 150 ದಿನಗಳ ಕಾಲ ನಿರಂತರ ಕೆಲಸ ನೀಡಬೇಕು. ಡಾ| ಸ್ವಾಮಿನಾಥನ್ ವರದಿ ಜಾರಿ ಮಾಡಬೇಕು. ಸಕ್ಕರೆ ಕಾರ್ಖಾನೆಗಳು ಕಬ್ಬನ್ನು ಕೂಡಲೇ ಕಟಾವು ಮಾಡಿ ಬೆಂಬಲ ಬೆಲೆಯಲ್ಲಿ ಖರೀದಿಸಿ, ರೈತರ ಖಾತೆಗಳಿಗೆ ನೇರವಾಗಿ ಹಣ ಸಂದಾಯ ಮಾಡಬೇಕು ಸೇರಿದಂತೆ ಸ್ಥಳಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಆರು ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿತ್ತು.
ಬುಧವಾರ ಧರಣಿ ಸ್ಥಳಕ್ಕೆ ಭೇಟಿ ನೀಡಿದ ತಾಪಂ ಇಒ ಅಬ್ದುಲ್ ನಬಿ, ಧರಣಿ ನಿರತರ ಸಮಸ್ಯೆ ಆಲಿಸಿ ಸ್ಥಳೀಯ ಬೇಡಿಕೆಗಳನ್ನು ತಕ್ಷಣ ಈಡೇರಿಸಿ, ರೈತರ, ಕೂಲಿಕಾರ್ಮಿಕರ ಕೆಲವು ಬೇಡಿಕೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದರು.
ರೈತ ಮುಖಂಡರಾದ ಪರಶುರಾಮ ಬಡಿಗೇರ, ಮಲ್ಕಪ್ಪ ಹರನೂರ, ಸಕ್ರೆಪ್ಪ ಹರನೂರ, ರೇವು ಜಾಧವ ರೇವನೂರ, ಶಂಕರಲಿಂಗ ಹನ್ನೂರ, ಯಲ್ಲಾಲಿಂಗ ತಳವಾರ, ರಸೂಲಬೀ ಹರನೂರ, ತಾರಾಬಾಯಿ ರಾಠೊಡ, ಬಸಮ್ಮ ಮ್ಯಾಗೇರಿ, ಸುನಂದಾ ಬಳಗಾರ, ಶಾರದಾ ರಾಠೊಡ, ಭೀಮಬಾಯಿ ರೇವನೂರ, ಚಂದ್ರಬಾಯಿ ಇಜೇರಿ, ರಾಜು ಸಾಥಖೇಡ ರೇವನೂರ, ಶ್ರೀನಿವಾಸ ದಾಸರ ಹಾಗೂ ರೇವನೂರ, ಹರನೂರಿನ ರೈತರು, ಕೂಲಿಕಾರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.