ಶೆಡ್‌ನಲ್ಲಿ ವಾಸಿಸುವ ನಿರಾಶ್ರಿತರ ಬದುಕು ನರಕ
Team Udayavani, Jul 13, 2022, 12:56 PM IST
ಚಿಂಚೋಳಿ: ತಾಲೂಕಿನಲ್ಲಿ ಸುರಿಯುತ್ತಿರುದ ಧಾರಾಕಾರ ಮಳೆಯಿಂದಾಗಿ ಕೆಳದಂಡೆ ಮುಲ್ಲಾಮಾರಿ ಯೋಜನೆ ಅಡಿಯಲ್ಲಿ ಮನೆ ಮತ್ತು ಆಸ್ತಿ ಕಳೆದುಕೊಂಡು ಕಳೆದ ಮೂರು ದಶಕಗಳಿಂದ ತಗಡಿನ ಶೆಡ್‌ಗಳಲ್ಲಿ ವಾಸಿಸುತ್ತಿದ್ದ ನಿರಾಶ್ರಿತರ ಬದುಕು ಕಷ್ಟಮಯವಾಗಿದೆ ಎಂದು ನಿರಾಶ್ರಿತ ವಾಸುದೇವ ಆಕ್ರಿ ತಿಳಿಸಿದ್ದಾರೆ.
ತಾಲೂಕಿನ ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆಯಲ್ಲಿ ಸಂಪೂರ್ಣವಾಗಿ ಮುಳುಗಡೆಯಾದ ಎಲ್ಮಾಡಗಿ ಗ್ರಾಮಸ್ಥರಿಗೆ 30ವರ್ಷಗಳ ಹಿಂದೆ ವಾಸಿಸುವುದಕ್ಕಾಗಿ ತಗಡುಗಳಿಂದ ಶೆಡ್‌ಗಳನ್ನು ನಿರ್ಮಿಸಲಾಗಿದೆ. ಆದರೆ ಈ ತಗಡುಗಳಲ್ಲಿ ತೂತುಗಳು ಬಿದ್ದಿವೆ. ಮಳೆ ನೀರು ಮನೆಯಲ್ಲಿ ಸೋರಿಕೆಯಾಗಿ ನಿರಾಶ್ರಿತರು ಹಗಲು ರಾತ್ರಿ ಎನ್ನದೇ ಎಚ್ಚರಿಕೆಯಿಂದ ಜೀವನ ಕಳೆಯಬೇಕಾಗಿದೆ. ಕೆಲವು ಕಡೆಗಳಲ್ಲಿ ಬಿರುಗಾಳಿಗೆ ತಗಡುಗಳು ಹಾರಿ ಹೋಗಿವೆ. ಕಬ್ಬಿಣ ಸಲಾಕೆಗಳು (ರಾಡ) ಮುರಿದು ಹೋಗಿವೆ. ಮಳೆಗಾಲದಲ್ಲಿ ಮನೆಯಲ್ಲಿ ಮಲಗಲು ಆಗುತ್ತಿಲ್ಲವೆಂದು ಎಂದು ಅಳಲು ತೋಡಿಕೊಂಡಿದ್ದಾರೆ.
ಎಲ್ಮಡಗಿ ಪುನರ್ವಸತಿ ಕೇಂದ್ರಗಳಲ್ಲಿ ಪ್ರತಿಯೊಬ್ಬರಿಗೂ ಶೆಡ್ ನಿರ್ಮಿಸಿಕೊಡಲಾಗಿದೆ. ಆದರೆ ಅವುಗಳಲ್ಲಿ ಕೆಲವು ಕಡೆ ಗಾಳಿಗೆ ಅರ್ಧಂಬರ್ಧ ಬಿದ್ದಿವೆ. ಈ ವೇಳೆ ಅನೇಕರಿಗೆ ಗಾಯಗಳಾಗಿವೆ. ಈ ಕುರಿತು ಶಾಸಕರಿಗೆ ಮತ್ತು ಸಂಸದರಿಗೆ, ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳ ಗಮನಕ್ಕೆ ಮನವಿ ಪತ್ರ ಸಲ್ಲಿಸಿ ಪುನರ್ವಸತಿ ಕೇಂದ್ರದ ನಿರಾಶ್ರಿತರಿಗೆ ಮನೆ ನಿರ್ಮಿಸಿಕೊಡಬೇಕೆಂದು ಮನವಿ ಸಲ್ಲಿಸಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಗಡಿಲಿಂಗದಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಸಂಸದರು ಗ್ರಾಮ ಸಭೆ ನಡೆಸಿದಾಗ ಅಧಿಕಾರಿಗಳು ನಿರಾಶ್ರಿತರಿಗೆ ಪುನರ್ವಸತಿ ಕೇಂದ್ರಗಳಿಗೆ ಮನೆ ಹಕ್ಕು ಪತ್ರ ಕೊಡುತ್ತೇವೆಂದು ಭರವಸೆ ನೀಡಿದ್ದರು. ಆದರೆ ಇದುವರೆಗೆ ಒಬ್ಬರಿಗೂ ಹಕ್ಕು ಪತ್ರ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮನೆಗಳನ್ನು ಕಟ್ಟಿಕೊಳ್ಳುವುದಕ್ಕಾಗಿ ಗ್ರಾಪಂಗಳಿಂದ ಮನೆಗಳು ಕೊಡುತ್ತಿಲ್ಲ, ನೀರು, ವಿದ್ಯುತ್ ಸಂಪರ್ಕ, ಶಾಲೆ, ಚರಂಡಿ, ಸಮುದಾಯ ಭವನಗಳು, ದೇವಾಲಯಗಳು ನಿರ್ಮಿಸಲಾಗಿದೆ. ಆದರೆ ಕಳಪೆಮಟ್ಟದಿಂದ ಕೂಡಿದ್ದರಿಂದ ಹಾಳಾಗಿ ಹೋಗಿವೆ ಎಂದು ವಾಸುದೇವ ಅಕ್ರಿ ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.