ಪರರ ದುಃಖದಲ್ಲಿ ಪಾಲ್ಗೊಂಡವರೇ ನಿಜವಾದ ಬುದ್ದ
Team Udayavani, Nov 7, 2021, 9:56 AM IST
ವಾಡಿ: ಮಾನವನ ದುಃಖದ ಮೂಲ ಪತ್ತೆಹಚ್ಚಿದ ಸಿದ್ಧಾರ್ಥನನ್ನು ಇಡೀ ವಿಶ್ವವೇ ಬುದ್ಧ ಎಂದು ಕರೆಯಿತು. ಅಂಬೇಡ್ಕರ್ ಮತ್ತು ಬುದ್ಧನ ಅನುಯಾಯಿಗಳು ಪರರ ದುಃಖದಲ್ಲಿ ಪಾಲ್ಗೊಳ್ಳುವ ಮೂಲಕ ಬುದ್ಧನಾಗಿ ಹೊರ ಹೊಮ್ಮಬೇಕು ಎಂದು ಬೌದ್ಧ ಭಿಕ್ಷು, ಮಹಾಥೇರೊ ಬೋದಿಧಮ್ಮ ಜಪಾನ್ ಹೇಳಿದರು.
ಅಂತಾರಾಷ್ಟ್ರೀಯ ಬೌದ್ಧ ಯುವ ಸಂಘಟನೆ, ಡಾ| ಬಿ.ಆರ್.ಅಂಬೇಡ್ಕರ್ ತರುಣ ಸಂಘದ ವತಿಯಿಂದ ಶುಕ್ರವಾರ ನಗರದ ಅಂಬೇಡ್ಕರ್ ಕಾಲೋನಿಯ ಸಿದ್ಧಾರ್ಥ ಬುದ್ಧ ವಿಹಾರದಲ್ಲಿ ಏರ್ಪಡಿಸಲಾಗಿದ್ದ ಆರು ದಿನಗಳ ಜಪಾನೀಸ್ ಜೆನ್ ಧ್ಯಾನ ಶಿಬಿರ ಉದ್ದೇಶಿಸಿ ಅವರು ಮಾತನಾಡಿದರು.
ಪ್ರಬುದ್ಧ ಭಾರತ ನಿರ್ಮಿಸಲು ಅಂಬೇಡ್ಕರ್ ಆಶಯದಂತೆ ಬುದ್ಧನ ಮಾರ್ಗದಲ್ಲಿ ನಡೆಯಬೇಕು ಎನ್ನುವವರು ಕೊಲ್ಲುವ ಪವೃತ್ತಿಯಿಂದ ಹೊರಬರಬೇಕು. ಮೋಸ, ವಂಚನೆ, ಮಾನಭಂಗ, ಅತ್ಯಾಚಾರ, ದೌರ್ಜನ್ಯಗಳಂತ ಅಮಾನವೀಯ ಕೃತ್ಯಗಳಿಗೆ ಕೈಹಾಕಬಾರದು. ಇತರರ ದುಃಖವನ್ನು ತನ್ನ ದುಃಖವಾಗಿ ಸ್ವೀಕರಿಸುವ ಜತೆಗೆ ನರರ ಪ್ರಾಣ ರಕ್ಷಣೆ ಬೌದ್ಧನ ಕರ್ತವ್ಯವಾಗಿದೆ ಎಂಬುದನ್ನು ಮನನ ಮಾಡಿಕೊಳ್ಳಬೇಕು. ಅಂದಾಗ ಮಾತ್ರ ಬುದ್ಧತ್ವ ಪ್ರಾಪ್ತಿಯಾಗುತ್ತದೆ ಎಂದರು.
ಮೈತ್ರಿ ಮಾರ್ಗದಲ್ಲಿ ಸಾಗುವವರು ಬೌದ್ಧ ಧಮ್ಮವನ್ನು ಹೆಚ್ಚು ಜನರಿಗೆ ತಲುಪಿಸಬಲ್ಲರು. ಕಷ್ಟದಲ್ಲಿರುವವರಿಗೆ ಹಣದಿಂದ ಸಹಾಯ ಮಾಡಲಾಗದಿದ್ದರೂ ಆತ್ಮಸ್ತೈರ್ಯ ತುಂಬುವ ಸರಳ ಕೆಲಸ ಮಾಡಿದರೆ ಇತರರ ಬದುಕಿನಲ್ಲಿ ಹೊಸ ಬದಲಾವಣೆ ತರಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಅಂಬೇಡ್ಕರ್ ತರುಣ ಸಂಘದ ಅಧ್ಯಕ್ಷ ಸಂದೀಪ ಕಟ್ಟಿ, ಮುಖಂಡರಾದ ಸಂತೋಷ ಜೋಗೂರ, ಕಿಶೋರಕುಮಾರ ಸಿಂಗೆ ಹಾಗೂ ಬೌದ್ಧ ಉಪಾಸಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.