ಹೊನಗುಂಟಾ ಗ್ರಾಮಕ್ಕೆ ರಸ್ತೆ ನಿರ್ಮಿಸಲು ಆಗ್ರಹ
Team Udayavani, Jan 1, 2022, 11:48 AM IST
ಶಹಾಬಾದ: ತಾಲೂಕಿನಿಂದ ಹೊನಗುಂಟಾ ಗ್ರಾಮಕ್ಕೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ನಿರ್ಮಿಸಬೇಕು ಎಂದು ಆಗ್ರಹಿಸಿ ಎಐಡಿವೈಒ ಯುವಜನ ಸಂಘಟನೆ ಹಾಗೂ ರೈತ ಕೃಷಿ ಕಾರ್ಮಿಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿ, ಉಪ ತಹಶೀಲ್ದಾರ್ ಗುರುರಾಜ ಸಂಗಾವಿಗೆ ಮನವಿ ಸಲ್ಲಿಸಲಾಯಿತು.
ಹೊನಗುಂಟಾ ಹಾಗೂ ವಡ್ಡರ ವಾಡಿ ಗ್ರಾಮಗಳಿಂದ ದಿನನಿತ್ಯ ಶಹಾಬಾದ ನಗರಕ್ಕೆ ನೂರಾರು ಸಂಖ್ಯೆಯಲ್ಲಿ ಸಾರ್ವಾಜನಿಕರು, ವಿದ್ಯಾರ್ಥಿಗಳು ಪ್ರಯಾಣ ಮಾಡುತ್ತಾರೆ. ಆದರೆ ರಸ್ತೆಯು ಸಂಪೂರ್ಣ ಹದಗೆಟ್ಟಿರುವುದರಿಂದ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಹದಗೆಟ್ಟ ರಸ್ತೆಗಳಲ್ಲಿ ವಾಹನ ಮುಂದೆ ಹೋದಾಗ ಧೂಳಿನಿಂದ ಬಹಳಷ್ಟು ತೊಂದರೆ ಅನುಭವಿಸಬೇಕಾಗಿದೆ. ಪ್ರಯಾಣಿಕರಿಗೆ ತೊಂದರೆ ಅಗುತ್ತಿರುವುದಲ್ಲದೇ ಅಪಘಾತಗಳು ಹೆಚ್ಚು ಆಗುತ್ತಿವೆ. ಹೀಗಾಗಿ ಕೂಡಲೇ ಗುಣಮಟ್ಟದ ರಸ್ತೆ ನಿರ್ಮಿಸಬೇಕು. ಹೊನಗುಂಟಾ ಹಾಗೂ ವಡ್ಡರ ವಾಡಿ ಗ್ರಾಮಗಳಲ್ಲಿ ಶೌಚಾಲಯಗಳ ಸಮಸ್ಯೆಯಿದ್ದು, ಕೂಡಲೇ ಶೌಚಾಲಯ ನಿರ್ಮಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಜಿಲ್ಲಾ ಉಪಾದ್ಯಾಕ್ಷರಾದ ಸಿದ್ಧು ಚೌದ್ರಿ ಮಾತನಾಡಿ, ಹದಗೆಟ್ಟ ರಸ್ತೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರ ಜನಪರವಾದ ಯೋಜನೆಗಳನ್ನು ತರದೇ, ಸಮಸ್ಯೆಗಳನ್ನು ಬಗೆಹರಿಸದೇ ಕಾಲಹರಣ ಮಾಡುತ್ತಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವುದು ಸರಕಾರದ ಕರ್ತವ್ಯ. ಆದರೆ ಇವೆಲ್ಲವನ್ನೂ ಸರಕಾರ ಮರೆತು ಹೋಗಿದೆ. ಕೂಡಲೇ ಹೊಸ ರಸ್ತೆ ನಿರ್ಮಾಣ ಮಾಡುವುದರ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಕಾರ್ಯದರ್ಶಿಗಳಾದ ರಮೇಶ ದೇವಕರ್, ರಾಜೇಂದ್ರ ಅತನೂರ ಮಾತನಾಡಿದರು. ರಘು ಪವಾರ, ದೇವರಾಜ, ತಿರುಪತಿ, ಶ್ರೀಶೈಲ ಬುರ್ಲಿ, ಮೌನೇಶ ರಾಜವಾಳ, ಸಿದ್ಧು, ಅಂಬ್ರೇಶ ಪ್ರವೀಣ, ತೇಜಶ. ಆರ್. ಇಂಬ್ರಾಹಿಮ್‌ಪುರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.