ಇಬ್ಬರು ಮನೆಗಳ್ಳರ ಸೆರೆ; ಆಭರಣ-ನಗದು ವಶಕ್ಕೆ
Team Udayavani, Jan 13, 2022, 12:57 PM IST
ಆಳಂದ: ಕಳೆದ ಸಾಲಿನಲ್ಲಿ ಉಂಟಾಗಿದ್ದ ಮನೆಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿತರನ್ನು ಬಂಧಿಸಿದ್ದು ಅಂದಾಜು 4.70 ಲಕ್ಷ ಮೌಲ್ಯದ ಆಭರಣ, ನಗದನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಕುಮಸೂರ ನಾಯಕ ತಾಂಡಾದ ಗುಲಾಬ ಗಂಗಾರಾಮ ಚವ್ಹಾಣ, ಜೈನ್‌ಗಲ್ಲಿಯ ಹೀರಾಚಂದ ಪ್ರಕಾಶ ಪಾಟೀಲ ಅವರನ್ನು ವಶಕ್ಕೆ ಪಡೆದುಕೊಂಡ ಬಗ್ಗೆ ಮಂಗಳವಾರ ಖಚಿತಪಡಿಸಿದ್ದಾರೆ.
ಬಂಧಿತರಿಂದ 101ಗ್ರಾಂ ಚಿನ್ನದ ಆಭರಣ, 150ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಒಟ್ಟು 4.76 ಲಕ್ಷ ಸಾಮಗ್ರಿ ವಶಕ್ಕೆ ಪಡಿಸಿಕೊಂಡು ಬಂಧಿತರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಬಂಧಿತರು ಆಳಂದ ಮತ್ತು ನಿಂಬರ್ಗಾ ಠಾಣೆಯ ಒಟ್ಟು ನಾಲ್ಕು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ, ಹೆಚ್ಚುವರಿ ಪೊಲೀಸ್ ಅಧಿಧೀಕ್ಷಕ ಪ್ರಸನ್ನಕುಮಾರ ದೇಸಾಯಿ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಮಲ್ಲಿಕಾರ್ಜುನ ಸಾಲಿ ನೇತೃತ್ವದಲ್ಲಿ ಸಿಪಿಐ ಮಂಜುನಾಥ ಎಸ್., ಪಿಎಸ್‌ಐ ಮಹಾಂತೇಶ ಪಾಟೀಲ ಹಾಗೂ ಸಿಬ್ಬಂದಿಗಳಾದ ರವೀಂದ್ರ ವರ್ಮಾ, ಶಿವಾಜಿ ಚವ್ಹಾಣ, ಸುಧಾಕರ ಪಾಟೀಲ, ಗೀತಾ, ಮಲ್ಲಿಕಾರ್ಜುನ ಗುಟ್ಟೂರ, ಗುರುರಾಜ, ಸಿದ್ಧರಾಮ ಬಿರಾದಾರ ವಿಶೇಷ ತಂಡವು ಈ ಕಾರ್ಯಾಚರಣೆ ಕೈಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.