ಬಾಲಕಿ ಮೇಲೆ ಬಲಾತ್ಕಾರಕ್ಕೆ ಯತ್ನ: ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ-ದಂಡ
Team Udayavani, Feb 8, 2022, 10:13 AM IST
ಕಲಬುರಗಿ: ತಾಯಿ ಜತೆಗೆ ಮಲಗಿಕೊಂಡಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಆಕೆ ಮೇಲೆ ಬಲಾತ್ಕಾರಕ್ಕೆ ಯತ್ನಿಸಿದ ಆರೋಪಿಗೆ 3 ವರ್ಷ ಜೈಲು ಶಿಕ್ಷೆ ಮತ್ತು 45 ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಎರಡನೇ ಅಪರ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ಚಿಂಚೋಳಿ ತಾಲೂಕಿನ ಮಿರಿಯಾಣ ಗ್ರಾಮದ ಪ್ರವೀಣ್ ಹಿರೇಮಠ ಎಂಬಾತನೇ ಶಿಕ್ಷೆ ಗುರಿಯಾದ ಅಪರಾಧಿ. ನಗರದ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ 2020ರ ಫೆ.25ರಂದು ಬೆಳಗಿನ ಜಾವ ತನ್ನ ತಾಯಿಯೊಂದಿಗೆ ಮಲಗಿದ್ದ 4 ವರ್ಷದ ಬಾಲಕಿಯನ್ನು ಅಪಹರಿಸಿ ಗೋವಾ ಹೋಟೆಲ್ ಸಮೀಪ ತಂದು ಬಲಾತ್ಕಾರಕ್ಕೆ ಮುಂದಾಗಿದ್ದ. ಇದರಿಂದ ಬಾಲಕಿ ಅಳುವ ಶಬ್ದ ಕೇಳಿ ರಕ್ಷಣೆ ಮಾಡಲಾಗಿತ್ತು. ಈ ಸಂಬಂಧ ಬಾಲಕಿಯ ತಂದೆ ಬ್ರಹ್ಮಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆಗಿನ ಸಿಪಿಐ ಕಪಿಲ್‌ದೇವ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ಮಾಡಿದ ನ್ಯಾಯಾಧೀಶರಾದ ಹೇಮಾವತಿ ಅವರು ಪೋಕ್ಸೊ ಕಾಯ್ದೆಯಡಿ 3 ವರ್ಷ ಜೈಲು ಶಿಕ್ಷೆ ಮತ್ತು 45 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೇ, ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 1 ಲಕ್ಷ ರೂ. ಪರಿಹಾರ ಹಾಗೂ ದಂಡದ ಹಣದಲ್ಲಿ 40 ಸಾವಿರ ರೂ. ನೀಡಬೇಕೆಂದು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಶಾಂತವೀರ ತುಪ್ಪದ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.