ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಸಕಾಲ
ಯಾವುದೇ ಸೌಲಭ್ಯಗಳೂ ಇಲ್ಲದಿರುವಾಗ ನಾವು ಕೊರೊನಾ ರೋಗಿಗಳಿಗೆ ಚಿಕಿತ್ಸೆ ಹೇಗೆ ಕೊಡಲು ಸಾಧ್ಯ
Team Udayavani, May 22, 2021, 7:04 PM IST
ಯಡ್ರಾಮಿ: ಸುಮಾರು 70ರ ದಶಕದಲ್ಲಿ ನಿರ್ಮಾಣವಾದ ಪಟ್ಟಣದಲ್ಲಿನ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಸಾರ್ವಜನಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಇದು ಸಕಾಲವಾಗಿದೆ. ತಜ್ಞ ವೈದ್ಯರು, ಆರೋಗ್ಯ ಸಿಬ್ಬಂದಿ ಕೊರತೆ ಈ ಕೇಂದ್ರದಲ್ಲಿದೆ. ಕೊರೊನಾ ಸೋಂಕು ಹರಡುತ್ತಿರುವ ಇಂತಹ ವಿಷಮ ಸ್ಥಿತಿಯಲ್ಲಿ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಿಂದ ಕೋವಿಡ್ ರೋಗಿಗಳು ತುರ್ತು ಚಿಕಿತ್ಸೆಗೆಂದು ತಾಲೂಕಿನ ಆರೋಗ್ಯ ಕೇಂದ್ರಕ್ಕೆ ಆಗಮಿಸಿದರೂ ಯಾವುದೇ ಪ್ರಯೋಜನ ಇಲ್ಲದಂತಾಗಿದೆ.
60 ಗ್ರಾಮಗಳ ವ್ಯಾಪ್ತಿಯನ್ನು ಒಳಗೊಂಡ ಯಡ್ರಾಮಿ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ಬೇಕು ಎನ್ನುವಂತಾಗಿದೆ. ಈ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೈಪ್ ಲೈನ್ ಅಪೂರ್ಣವಾಗಿವೆ. ಮೂವರು ತಜ್ಞ ವೈದ್ಯರ ಅವಶ್ಯಕತೆ (ಮಕ್ಕಳ ತಜ್ಞ, ಹೆರಿಗೆ ತಜ್ಞ, ಅರವಳಿಕೆ ತಜ್ಞ) ಇದೆ. ಎಫ್‌ಡಿಸಿ ಹುದ್ದೆ ಖಾಲಿಯಿದೆ. ಕೇವಲ 15 ಬೆಡ್ ಸೌಲಭ್ಯಗಳಿವೆ. ಹೈವೋಲ್ಟ್ ವಿದ್ಯುತ್ ಸಂಪರ್ಕದ ಅಗತ್ಯವಿದೆ.
ಶಾಸಕರ ಗಮನಕ್ಕೆ: ಆಸ್ಪತ್ರೆಗೆ ಅಗತ್ಯವಿರುವ ತುರ್ತು ಸೌಲಭ್ಯ ಕುರಿತು ಶಾಸಕರ ಗಮನಕ್ಕೆ ತಂದಿದ್ದೇನೆ. ಆರೋಗ್ಯ ತಜ್ಞರು, ಎಫ್‌ಡಿಸಿ, ವಿಶೇಷವಾಗಿ ಹೈವೋಲ್ಟ್ ವಿದ್ಯುತ್ ಸೌಲಭ್ಯ ಸೇರಿದಂತೆ ವಿವಿಧ ಸಿಬ್ಬಂದಿ ಕೊರತೆ ಇದೆ. ಯಾವುದೇ ಸೌಲಭ್ಯಗಳೂ ಇಲ್ಲದಿರುವಾಗ ನಾವು ಕೊರೊನಾ ರೋಗಿಗಳಿಗೆ ಚಿಕಿತ್ಸೆ ಹೇಗೆ ಕೊಡಲು ಸಾಧ್ಯ. ಕೆಲವು ದಿನಗಳಲ್ಲಿ ಇವೆಲ್ಲವುಗಳಿಗೂ ಪರಿಹಾರ ಸಿಗಬಹುದು ಎಂದು ಪ್ರಭಾರಿ ತಾಲೂಕು ವೈದ್ಯಾಧಿಕಾರಿ ಡಾ| ಉಮೇಶ ಶರ್ಮಾ ತಿಳಿಸಿದ್ದಾರೆ.
ಅಸಹಾಯಕ ಸ್ಥಿತಿ: ಆರೋಗ್ಯ ಕೇಂದ್ರ ಇಷ್ಟೊತ್ತಿಗೆ ತಾಲೂಕು ಆಸ್ಪತ್ರೆ ಆಗಬೇಕಿತ್ತು. ಸದ್ಯ ಕೊರೊನಾ ರೋಗಿಗಳಿಗೆ ಆರೈಕೆ, ಚಿಕಿತ್ಸೆ ನೀಡುವಲ್ಲಿ ಅಸಹಾಯಕ ಸ್ಥಿತಿಯಲ್ಲಿದೆ. ತುರ್ತು ಚಿಕಿತ್ಸೆಗೆಂದು ಜೇವರ್ಗಿಗೆ ಹೋಗುವುದು ಅನಿವಾರ್ಯವಾಗಿದೆ. ಈ ಕುರಿತು ಶಾಸಕ ಡಾ| ಅಜಯಸಿಂಗ್ ಗಮನಕ್ಕೂ ತಂದಿದ್ದೇನೆ ಎಂದು ಮುಖಂಡ ಅಬ್ದುಲ್‌ರಜಾಕ್ ಮನಿಯಾರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ರಚನೆಯಾದ ಹೊಸ ತಾಲೂಕುಗಳ ಯಾವ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಿಲ್ಲ. ಈ ಕಾರ್ಯಯೋಜನೆ ಸರ್ಕಾರದ ಹಂತದಲ್ಲಿ ನಡೆಯುವಂತದ್ದು. ಈ ಕುರಿತು ನಾನು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೂ ತಂದಿದ್ದೇನೆ. ಮುಂಬರುವ ದಿನಗಳಲ್ಲಿ ಈ ಕಾರ್ಯ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
ಡಾ| ಶರಣಬಸಪ್ಪ ಗಣಜಲಖೇಡ,
ಜಿಲ್ಲಾ ಆರೋಗ್ಯಾಧಿಕಾರಿ
*ಸಂತೋಷ ಬಿ. ನವಲಗುಂದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.