ವಿದೇಶಕ್ಕೆ ಹೋಗೋವರಿಗೆ ತರಬೇತಿ
Team Udayavani, Mar 25, 2022, 9:48 AM IST
ಕಲಬುರಗಿ: ಉದ್ಯೋಗ ಅರಸಿ ವಿದೇಶಕ್ಕೆ ವಲಸೆ ಹೋಗುವವರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಸೂಕ್ತ ತರಬೇತಿ ಹಾಗೂ ವ್ಯಾಪಕ ಮಾಹಿತಿ ದೊರಕುವಂತೆ ಆಗಬೇಕು ಎಂದು ಜಿಲ್ಲಾಧಿಕಾರಿ ಯಶವಂತ ಗುರುಕರ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೌಶಲ್ಯಾಭಿವೃದ್ಧಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದಿಂದ ಐಎಂಸಿಕೆ (ಇಂಟರ್‌ನ್ಯಾಷನಲ್ ಮೈಗ್ರೇಷನ್ ಸೆಂಟರ್ ಕರ್ನಾಟಕ) ಸೂಕ್ತ ತರಬೇತಿ ನೀಡಬೇಕೆಂದು ಕೌಶಲ್ಯಾಭಿವೃದ್ದಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಾನೂನುಬದ್ಧ ಮತ್ತು ಮಾನವೀಯ ವಲಸಗೆ ಹೆಚ್ಚಿನ ಆದ್ಯತೆ ನೀಡಬೇಕಿದ್ದು, ವಲಸೆ ಹೋಗುವವರ ಸುರಕ್ಷತೆ ಬಗ್ಗೆಯೂ ನಿಗಾ ವಹಿಸಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಜಿಲ್ಲೆಯಿಂದ ವಿದೇಶಕ್ಕೆ ವಲಸೆ ಹೋಗುವರು ಐಎಂಸಿಕೆ ಮೂಲಕ ತೆರಳಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.
ವಿದೇಶಕ್ಕೆ ವಲಸೆ ಹೋಗುವವರಿಗೆ ಉದ್ಯೋಗ, ಅಲ್ಲಿನ ಕಂಪನಿ, ಆಚಾರ-ವಿಚಾರ, ವೀಸಾ ಕುರಿತ ಎಲ್ಲ ಮಾಹಿತಿ ನೀಡಲು ಶೀಘ್ರದಲ್ಲಿಯೇ ಜಿಲ್ಲೆಯಲ್ಲಿ ಎಂಆರ್‌ಸಿ (ಮೈಗ್ರೇಷನ್ ರಿಜಿನಲ್ ಸೆಂಟರ್) ತೆರೆಯಲಾಗುತ್ತಿದೆ. ವಲಸೆ ಹೋಗುವರು ಇದರ ಸೌಲಭ್ಯ ಪಡೆದುಕೊಳ್ಳಬೇಕು. ವಿಶೇಷವಾಗಿ ಮಹಿಳಾ ವಲಸಿಗರ ಬಗ್ಗೆ ಸರ್ಕಾರ ವಿಶೇಷ ಕಾಳಜಿ ವಹಿಸುತ್ತಿದೆ ಎಂದು ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
ಐಎಂಸಿಕೆ ಮೂಲಕ ನೀಡಲಾಗುವ ಈ ಸೇವೆಗಳನ್ನು ಪಡೆಯಲು ಜಿಲ್ಲಾ ಕೌಶಲ್ಯಭಿವೃದ್ಧಿ ಕಚೇರಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು. ಅಂತರ್ಜಾಲದ ವಿಳಾಸ http://imck.online/session/signin ಇಲ್ಲಿ ನೋಂದಾಯಿಸಿ ಸೇವೆ ಪಡೆಯಬಹುದು. ದೂರವಾಣಿ ಸಂಖ್ಯೆ: 08472-225569ಕ್ಕೆ ಸಂಪರ್ಕಿಸಬಹುದು ಎಂದು ಸಭೆಯಲ್ಲಿದ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಸಭೆಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.