ಕಂಟ್ರೋಲ್ ತಪ್ಪಿದ ಕೋವಿಡ್: ಫೀಲ್ಡಿಗಿಳಿದ ಖಾಕಿ
21 ಬೈಕ್, ಒಂದು ಕಾರು, ಎರಡು ಕ್ರೂಸರ್‌ಗಳನ್ನು ಪೊಲೀಸರು ಜಪ್ತಿಮಾಡಿಕೊಂಡರು.
Team Udayavani, May 21, 2021, 8:08 PM IST
ವಾಡಿ: ಕಂಟ್ರೋಲ್ ತಪ್ಪಿದ ಕೋವಿಡ್ ಸೋಂಕು ನಿಯಂತ್ರಣಕ್ಕೆ ತರಲು ಜಿಲ್ಲಾಡಳಿತ ಘೋಷಿಸಿದ ಮೂರು ದಿನಗಳ ಸಂಪೂರ್ಣ ಲಾಕ್‌ಡೌನ್ ಯಶಸ್ವಿಗೊಳಿಸಲು ಗುರುವಾರ ಪಟ್ಟಣದಲ್ಲಿ ಕಾರ್ಯಾಚರಣೆಗೆ ಇಳಿದ ಪೊಲೀಸರು, ಸಾಮೂಹಿಕವಾಗಿ ಲಾಠಿ ಪ್ರದರ್ಶಿಸುವ ಮೂಲಕ ಸಿಮೆಂಟ್ ನಗರಿಯನ್ನು ಪೂರ್ತಿ ಸ್ತಬ್ಧ ಮಾಡುವಲ್ಲಿ ಸಫಲರಾದರು.
ಬೆಳ್ಳಂಬೆಳಗ್ಗೆ ಸೈರನ್ ಸದ್ದಿನೊಂದಿಗೆ ಪಿಎಸ್‌ಐ ವಿಜಯಕುಮಾರ ಭಾವಗಿ ನೇತೃತ್ವದಲ್ಲಿ ಕೋವಿಡ್ ಕರ್ತವ್ಯಕ್ಕೆ ಹಾಜರಾದ ಪೊಲೀಸರು, ಮೌಲಾನಾ ಅಬ್ದುಲ್ ಕಲಾಂ ಆಜಾದ್ ಚೌಕ್, ಬಳಿರಾಮ ಚೌಕ್, ಶ್ರೀನಿವಾಸಗುಡಿ, ಬಸವೇಶ್ವರ ಚೌಕ್ ಸೇರಿದಂತೆ ವಿವಿಧೆಡೆ ಭದ್ರತೆಗಾಗಿ ನಿಯೋಜನೆಗೊಂಡರು.
ಹಾಲು, ಆಸ್ಪತ್ರೆ, ಮೆಡಿಕಲ್ ಸೇವೆ ಹೊರತುಪಡಿಸಿ ತರಕಾರಿ, ಕಿರಾಣಿ ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳ ಅಂಗಡಿ ಮುಗ್ಗಟ್ಟುಗಳಿಗೆ ಸಂಪೂ ರ್ಣ ಬೀಗ ಬಿದ್ದಿತ್ತು. ಕೆಲ ಖಾಸಗಿ ಕ್ಲಿನಿಕ್ ಮತ್ತು ಔಷಧ ಅಂಗಡಿಗಳು ಮುಚ್ಚಿದ್ದವು.ರೈಲು ಮೂಲಕ ಪಟ್ಟಣಕ್ಕೆ ಆಗಮಿಸಿ ವಿವಿಧ ಗ್ರಾಮಗಳಿಗೆ ಹೋಗಬೇಕಿದ್ದ ಪ್ರಯಾಣಿಕರು, ವಾಹನ ಸೌಲಭ್ಯವಿಲ್ಲದೇ ಪರದಾಡಿದರು.
ಸಿದ್ಧ ಕಾರಣಗಳನ್ನು ಒಪ್ಪಿಸಿ ಪೊಲೀಸ ರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ವಾಹನ ಚಾಲಕರು ಮತ್ತು ಬೈಕ್ ಸವಾರರು ಲಾಠಿ ರುಚಿ ಉಂಡರು. 21 ಬೈಕ್, ಒಂದು ಕಾರು, ಎರಡು ಕ್ರೂಸರ್‌ಗಳನ್ನು ಪೊಲೀಸರು ಜಪ್ತಿಮಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.