ತೊಗರಿ ಆಮದಿಗೆ ಅಸಮಾಧಾನ
Team Udayavani, Dec 26, 2021, 10:32 AM IST
ಚಿಂಚೋಳಿ: ಬರ್ಮಾ ದೇಶದಿಂದ ತೊಗರಿ ಆಮದು ಮಾಡಿಕೊಂಡಿದ್ದರಿಂದ ಸ್ಥಳೀಯ ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗುತ್ತಿಲ್ಲ ಎಂದು ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು.
ಸೇಡಂ ಮತಕ್ಷೇತ್ರಕ್ಕೆ ಒಳಪಟ್ಟಿರುವ ತಾಲೂಕಿನ ಕರ್ಚಖೇಡ, ಗರಗಪಳ್ಳಿ ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧಿಸಿದ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಕರ್ಚಖೇಡ ಮತ್ತು ಚತ್ರಸಾಲ ಗ್ರಾಮದಲ್ಲಿ ಏರ್ಪಡಿಸಿದ ಬಹಿರಂಗ ಚುನಾವಣೆ ಪ್ರಚಾರದಲ್ಲಿ ಅವರು ಮಾತನಾಡಿದರು.
ಬಿಜೆಪಿ ಮುಖಂಡರಿಗೆ ರೈತರ ಕಾಳಜಿ ಇಲ್ಲ. ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ 70 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದಾಗ ಒಂದು ಲಕ್ಷ ರೂ., ಸಮ್ಮಿಶ್ರ ಸರ್ಕಾರದಲ್ಲಿ 50 ಸಾವಿರ ರೂ. ಸಾಲ ಮನ್ನಾ ಮಾಡಲಾಗಿತ್ತು. ಈಗಿನ ಸರ್ಕಾರ ರೈತರ ಯಾವುದೇ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದರು.
ಕರ್ಚಖೇಡ ಮತ್ತುಗರಗಪಳ್ಳಿ ಗ್ರಾಪಂಗಳಿಗೆ ಕಳೆದ ಏಳು ವರ್ಷಗಳಿಂದ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದ ಚುನಾವಣೆ ನಡೆದಿರಲಿಲ್ಲ ಎಂದು ಹೇಳಿದರು.
ಮುಖಂಡರಾದ ಬಸವರಾಜ ಸಜ್ಜನಶೆಟ್ಟಿ. ಭೀಮರೆಡ್ಡಿ ಬುರುಗಪಳ್ಳಿ, ಬಸವರಾಜ ಸುಲೇಪೇಟ, ತಾಹೇರ ಪಟೇಲ, ಮೇಘರಾಜ ರಾಠೊಡ, ಸಂತೋಷ ರುದನೂರ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.