![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 26, 2021, 4:32 PM IST
ಕಲಬುರಗಿ: ಭಾರತದ ಪ್ರಜೆಗಳಾದ ನಾವು ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸದೊಂದಿಗೆ ಪ್ರಜಾಸತ್ತಾತ್ಮಕ ಸಂಪ್ರದಾಯ ಮತ್ತು ಮುಕ್ತ ನ್ಯಾಯ ಸಮ್ಮತ ಹಾಗೂ ಶಾಂತಿಯುತವಾಗಿ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯ ಬೇಕೆಂದು ಪ್ರಾದೇಶಿಕ ಆಯುಕ್ತ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯ
ದರ್ಶಿ ಡಾ| ಎನ್.ವಿ.ಪ್ರಸಾದ್ ತಿಳಿಸಿದರು.
ನಗರದ ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣದಲ್ಲಿ ಸೋಮವಾರ ನಡೆದ 11ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಮತದಾರರ ಅಭಿಯಾನದ
ಫಲಕಕ್ಕೆ ಸಹಿ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಮತದಾರರನ್ನು ಜಾಗೃತಿ, ಸುರಕ್ಷಿತ ಮತ್ತು ಮಾಹಿತಿಯುಕ್ತರನ್ನಾಗಿ ಮಾಡುವುದೇ ನಮ್ಮ ಗುರಿ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿ ಕಾರಿ ವಿ.ವಿ. ಜೋತ್ಸಾ ಮಾತನಾಡಿ, ಸಂವಿಧಾನದ ಮೌಲ್ಯಗಳನ್ನು ಪ್ರತಿದಿನ ನಾವೂ ನಮ್ಮ ಜೀವನದಲ್ಲಿ ಅಳವಡಿಸಿಕೊಂಡು,
ಪ್ರಜಾಪ್ರಭುತ್ವವನ್ನು ಸದೃಢಗೊಳಿಸಲು ಮತದಾನದಲ್ಲಿ ಭಾಗವಹಿಸುವುದು ಮಾತ್ರವಲ್ಲ, ಅದರೊಂದಿಗೆ ಸರಿಯಾದ ನಿರ್ಣಯಗಳನ್ನು ತೆಗೆದುಕೊಳ್ಳುವುದು ಅಗತ್ಯವೆಂದರು.
ಇದೇ ಸಂದರ್ಭದಲ್ಲಿ ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಿ, ಚುನಾವಣೆ ಕುರಿತು ಜಾಗೃತಿ ಹಾಗೂ ಉತ್ತಮವಾಗಿ ಕಾರ್ಯನಿರ್ವಹಿಸಿದ ಮತಗಟ್ಟೆ ಅಧಿಕಾರಿಗಳಿಗೆ ಪ್ರಶಸ್ತಿ ಪ್ರಮಾಣ ಪತ್ರವನ್ನು ಪ್ರಾದೇಶಿಕ ಆಯುಕ್ತ ಡಾ| ಪ್ರಸಾದ್ ವಿತರಿಸಿದರು. ಅಲ್ಲದೇ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ವಿವಿಧ ಪ್ರಬಂಧ, ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೆರವಾಗುವ ಪುಸ್ತಕಗಳನ್ನು ಬಹುಮಾನವಾಗಿ ವಿತರಿಸಲಾಯಿತು.
ಜಿಪಂ ಸಿಇಒ ಡಾ| ಪಿ.ರಾಜಾ, ಅಪರ ಜಿಲ್ಲಾಧಿಕಾರಿ ಡಾ| ಶಂಕರ ವಣಿಕ್ಯಾಳ, ಸಹಾಯಕ ಆಯುಕ್ತ ಬಲರಾಮ ಲಮಾಣಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಂಟಿ, ಶಿಕ್ಷಣ ಇಲಾಖೆಯ ಅ ಧಿಕಾರಿ ಮಾರುತಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ದೈಹಿಕ ಶಿಕ್ಷಕರು ಇದ್ದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್

You seem to have an Ad Blocker on.
To continue reading, please turn it off or whitelist Udayavani.