ಸರ್ಕಾರಿ ಯೋಜನೆ ಸದುಪಯೋಗ ಮಾಡಿಕೊಳ್ಳಿ: ಪಾಟೀಲ
Team Udayavani, Jan 21, 2022, 12:27 PM IST
ಶಹಾಬಾದ: ಸರ್ಕಾರ ಅನೇಕ ಯೋಜನೆಗಳ ಮೂಲಕ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಂಡು ಸರಿಯಾಗಿ ಅಧ್ಯಯನ ಮಾಡಿ, ಉನ್ನತ ಸಾಧನೆ ಮಾಡಬೇಕು ಎಂದು ಉಪನ್ಯಾಸಕ ಎಚ್.ಬಿ. ಪಾಟೀಲ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಸಮೀಪದ ಝಾಪೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಮವಸ್ತ್ರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಸಂವಿಧಾನದ ಆಶಯವಾಗಿದ್ದು, ಅದನ್ನು ಕಾರ್ಯರೂಪದಲ್ಲಿ ತರಲು ಸರ್ಕಾರವು ಎಲ್ಲೆಡೆ ಶಾಲೆಗಳನ್ನು ತೆರೆಯುವುದು, ಉಚಿತವಾಗಿ ಬಟ್ಟೆ, ಪುಸ್ತಕ, ಸೈಕಲ್, ಊಟ, ವಿದ್ಯಾರ್ಥಿವೇತನ ಸೇರಿದಂತೆ ಅನೇಕ ಒದಗಿಸಿಕೊಡುತ್ತಿದೆ. ವಿದ್ಯಾರ್ಥಿಗಳು ಇವುಗಳನ್ನು ಪಡೆದುಕೊಂಡು ಉತ್ತಮ ರೀತಿಯಲ್ಲಿ ಅಭ್ಯಾಸ ಮಾಡಬೇಕು. ಕಲಿತ ಶಾಲೆ, ಕಲಿಸಿದ ಗುರುಗಳು, ಹೆತ್ತ ತಂದೆ-ತಾಯಿಗೆ ಕೀರ್ತಿ ತರುವ ಕೆಲಸ ತಮ್ಮಿಂದಾಗಬೇಕು ಎಂದು ಹೇಳಿದರು.
ಶಾಲೆ ಮುಖ್ಯ ಶಿಕ್ಷಕ ದೇವೇಂದ್ರಪ್ಪ ಗಣಮುಖೀ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಬುದ್ಧಿ, ಕೌಶಲ್ಯಗಳನ್ನು ಕಲಿಯಬೇಕು. ಬಾಲ್ಯದಿಂದಲೇ ಕೆಟ್ಟ ಚಟಗಳಿಂದ ದೂರವಿರಬೇಕು. ತಂದೆ-ತಾಯಿ, ಗುರು-ಹಿರಿಯರಿಗೆ ಗೌರವ ನೀಡಬೇಕು. ಪಾಲಕರು ತಮ್ಮ ಮಕ್ಕಳಿಗೆ ಶೈಕ್ಷಣಿಕ ವಾತಾವರಣ ಕಲ್ಪಿಸಿಕೊಡಬೇಕು. ಶೈಕ್ಷಣಿಕ ಅಭಿವೃದ್ಧಿಯಲ್ಲಿ ಸಮುದಾಯ ಭಾಗವಹಿಸುವದರಿಂದ ಕಲಿಕೆ-ಬೋಧನೆ ಪರಿಣಾಮಕಾರಿಯಾಗಲು ಸಾಧ್ಯವಾಗುತ್ತದೆ ಎಂದರು.
ನಿವೃತ್ತ ಮುಖ್ಯ ಶಿಕ್ಷಕ ಬಸಯ್ಯಸ್ವಾಮಿ ಹೊದಲೂರ, ಎಸ್ ಡಿಎಂಸಿ ಅಧ್ಯಕ್ಷ ಸುರೇಶ ಮಾಂಗ್, ಗ್ರಾ.ಪಂ ಸದಸ್ಯರಾದ ಪೀರಪ್ಪ ದೊಡ್ಡಮನಿ, ಪರಮೇಶ್ವರ ಪೂಜಾರಿ, ಸಹ ಶಿಕ್ಷಕರಾದ ಶಾಂತಾಬಾಯಿ ವಿ. ಹಿರೇಮಠ, ಲಕ್ಕುನಾಯಕ್, ವೀರವ್ವ ಕಿಣ್ಣನವರ್, ಗ್ರಾಮಸ್ಥರಾದ ಅರುಣಕುಮಾರ ಕಟ್ಟಿಮನಿ, ಶರಣಪ್ಪ ಪೂಜಾರಿ, ಪರಶುರಾಮ ದೊಡ್ಡಮನಿ, ಶಿವರಾಜ ವಡ್ಡರ್, ಶಿಕ್ಷಕಿ ಮಂಜುಳಾ ಮೇಲಿನಮನಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.