ಬಿಜೆಪಿ ಸರ್ಕಾರದ ಸಾಧನೆಯಿಂದ ಗೆಲುವು: ನರಿಬೋಳ
Team Udayavani, Dec 6, 2021, 11:32 AM IST
ಜೇವರ್ಗಿ: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಸಾಧನೆಗಳೇ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಹೇಳಿದರು.
ತಾಲೂಕಿನ ಅಂಕಲಗಾ, ಇಟಗಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಸದಸ್ಯರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡುವ ಮೂಲಕ ಈ ಭಾಗದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸುತ್ತಿದೆ ಎಂದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ನೀಡಿರುವ 1500 ಕೋಟಿ ರೂ. ಅನುದಾನ ಖರ್ಚು ಮಾಡಿದರೆ, ಹೆಚ್ಚುವರಿಯಾಗಿ 1500 ಕೋಟಿ ರೂ. ಅನುದಾನ ನೀಡುವ ಭರವಸೆ ನೀಡಿದ್ದಾರೆ. ಕಳೆದ 60 ವರ್ಷ ಕಾಲ ಕಾಂಗ್ರೆಸ್ ಸರ್ಕಾರ ನೀಡಿದ ಆಡಳಿತ ನೋಡಿ ಜನತೆ ಬೇಸತ್ತು ಹೋಗಿದ್ದಾರೆ. ಆದ್ದರಿಂದ ಸರಳ ಸಜ್ಜನಿಕೆಗೆ ಹೆಸರಾದ ಬಿ.ಜಿ.ಪಾಟೀಲ ಗೆಲುವಿಗೆ ಮುಖಂಡರು ಶ್ರಮಿಸಬೇಕು ಎಂದರು.
ಕಳೆದ ಆರು ವರ್ಷ ವಿಧಾನ ಪರಿಷತ್ ಸದಸ್ಯರಾಗಿ ಬಿ.ಜಿ.ಪಾಟೀಲ ಸಾಕಷ್ಟು ಕೆಲಸ ನಿರ್ವಹಿಸಿದ್ದು, ಅವರ ಗೆಲುವು ನಿಶ್ಚಿತ ಎಂದು ಹೇಳಿದರು. ಮುಖಂಡರಾದ ರಮೇಶ ಬಾಬು ವಕೀಲ, ಶರಣಪ್ಪ ತಳವಾರ, ಧರ್ಮಣ್ಣ ದೊಡ್ಡಮನಿ, ತಾಲೂಕು ಅಧ್ಯಕ್ಷ ಭೀಮರಾವ್ ಗುಜಗೊಂಡ, ಮಲ್ಲಿನಾಥಗೌಡ ಯಲಗೋಡ, ಎಂ.ಬಿ.ಪಾಟೀಲ ಹರವಾಳ, ಶೋಭಾ ಬಾಣಿ, ಧರ್ಮಣ್ಣ ಇಟಗಾ, ಭಾಗೇಶ ಹೋತಿನಮಡು ಹಾಗೂ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.