ಅನ್ನದಾತರ ಕೈ ಹಿಡಿದ ರೈತ ಕಂಪನಿಗಳು

ಇಂಡಿ ರೈತ ಕಂಪನಿಯಿಂದ ಲಿಂಬೆ -ಬಿಜಾಪುರ ಕಂಪನಿಯಿಂದ ದ್ರಾಕ್ಷಿ ಖರೀದಿ ಗ್ರಾಹಕರ ಮನೆ ಬಾಗಿಲಿಗೆ ತೆರಳಿ ಮಾರಾಟ

Team Udayavani, May 1, 2020, 12:00 PM IST

1-May–06

ವಿಜಯಪುರ: ಲಾಕ್‌ಡೌನ್‌ ಸಂದರ್ಭದಲ್ಲಿ ರೈತರಿಂದ ಹಣ್ಣು-ತರಕಾರಿ ಖರೀದಿಸಿ ಮಾರಾಟಕ್ಕೆ ವೇದಿಕೆ ಕಲ್ಪಿಸಿರುವ ರೈತ ಕಂಪನಿಗಳು

ವಿಜಯಪುರ: ಕೋವಿಡ್ ಲಾಕ್‌ಡೌನ್‌ ಬಳಿಕ ಏಕಾಏಕಿ ದೇಶವೇ ಸ್ತಬ್ದಗೊಂಡಿದ್ದು ರೈತರು ತಮ್ಮ ಕೃಷಿ ಉತ್ಪನ್ನ ಮಾರಲಾಗದೇ ಸಂಕಷ್ಟಕ್ಕೆ ಸಿಲುಕಿ ಕಣ್ಣೀರು ಹಾಕುತ್ತಿದ್ದರು. ಈ ಮಧ್ಯೆ ವಿಜಯಪುರ ಜಿಲ್ಲೆಯ ರೈತರಿಂದಲೇ ಅಸ್ತಿತ್ವಕ್ಕೆ ಬಂದ ರೈತ ಕಂಪನಿಗಳು ಮಾತ್ರ ಸಂಕಷ್ಟದಲ್ಲಿರುವ ಅನ್ನದಾತರ ನೆರವಿಗೆ ಧಾವಿಸಿವೆ.

ರಾಷ್ಟ್ರ ಮಟ್ಟದಲ್ಲಿರುವ ಸಣ್ಣ ರೈತರ ಕೃಷಿ ವ್ಯವಹಾರ ಒಕ್ಕೂಟ (ಎಸ್‌ಎಫ್‌ ಎಸಿ) ಮಾರ್ಗದರ್ಶನದಲ್ಲಿ ಜಿಲ್ಲೆಯ 5 ತಾಲೂಕುಗಳಲ್ಲಿ 4 ತಾಲೂಕುಗಳ ರೈತರು 2017ರಲ್ಲಿ ತಾವೇ ಮಾಲೀಕರಾಗಿರುವ ಕಂಪನಿಗಳನ್ನು ಕಟ್ಟಿಕೊಂಡಿದ್ದಾರೆ. ಕೊಲ್ಹಾರ ಪಟ್ಟಣದಲ್ಲಿ ಬಸವನಬಾಗೇವಾಡಿ ತೋಟಗಾರಿಕೆ ರೈತ ಉತ್ಪಾದಕರ ಕಂಪನಿ, ತಿಕೋಟಾ ತಾಲೂಕಿನ ಟಕ್ಕಳಕಿ ಗ್ರಾಮದಲ್ಲಿ ಬಿಜಾಪುರ ತೋಟಗಾರಿಕೆ ಉತ್ಪಾದಕರ ಕಂಪನಿ, ಇಂಡಿ ತಾಲೂಕಿನ ಶಾಂತೇಶ್ವರ ಹಾರ್ಟಿಕಲ್ಚರ್‌ ಪ್ರೊಡ್ನೂಸರ್‌ ಕಂಪನಿ ಹಾಗೂ ಸಿಂದಗಿ ತಾಲೂಕಿನಲ್ಲಿ ಸಿಂದಗಿ ತಾಲೂಕು
ಹಾರ್ಟಿಕಲ್ಚರ್‌ ಫಾರ¾ರ್‌ ಪ್ರೊಡ್ನೂಸರ್‌ ಕಂಪನಿಗಳಿವೆ. ಈ ಕಂಪನಿಗಳು ಕೋವಿಡ್‌ ಸಂಕಷ್ಟದ ಸಂದರ್ಭದಲ್ಲಿ ರೈತರಿಗೆ ತೋಟಗಾರಿಕೆ ಬೆಳೆ ಮಾರಾಟ ಮಾಡಲು ನೆರವಾಗಿವೆ.

ತೋಟಗಾರಿಕೆ ಇಲಾಖೆ ಮಾರ್ಗದರ್ಶನದಲ್ಲಿ ಪ್ರತಿ ರೈತ ಕಂಪನಿಗಳು ತಲಾ 1000 ಸದಸ್ಯರನ್ನು ಹೊಂದಿದ್ದು, ರಾಜ್ಯ ಮಟ್ಟದಲ್ಲಿ ಹೊಂದಿರುವ ತಮ್ಮದೇ
ಕಂಪನಿಗಳಿಗೆ ಸ್ಥಾನಿಕ ರೈತರ ಉತ್ಪನ್ನಗಳನ್ನು ಖರೀದಿಸಿ, ಲಾಭದ ನಿರೀಕ್ಷೆ ಇಲ್ಲದೇ ಮಾರುವ ಕೆಲಸ ಮಾಡುತ್ತಿವೆ. ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ
ಬಹುತೇಕ ಎಲ್ಲೆಡೆ ರೈತರು ಅದರಲ್ಲೂ ಬಹುಬೇಗ ಹಾಳಾಗುವ ಹಾಗೂ ಕೊಯ್ಲಿಗೆ ಬಂದಿದ್ದ ಹಣ್ಣು-ತರಕಾರಿ ತೋಟಗಾರಿಕೆ ಬೆಳೆಗಳಿಗೆ ಮಾರುಕಟ್ಟೆ ಸಿಗದೇ ಕಂಗಾಲಾಗಿದ್ದರು. ಈ ಹಂತದಲ್ಲಿ
ಮಧ್ಯ ಪ್ರವೇಶಿಸಿದ್ದೇ ರೈತ ಕಂಪನಿಗಳು.

ಸಾಮಾನ್ಯ ದಿನಗಳಲ್ಲೇ ರೈತರ ಪಾಲಿಗೆ ಶೋಷಣೆ ಕೇಂದ್ರಗಳೆಂದೇ ಕರೆಯಲ್ಪಡುವ ಎಪಿಎಂಸಿ ಹಂಗು ಈ ರೈತರಿಗೆ ಇಲ್ಲ. ಬಸವನಬಾಗೇವಾಡಿ ರೈತ ಕಂಪನಿ ಲಾಕ್‌
ಡೌನ್‌ ಇದ್ದರೂ ನಿತ್ಯವೂ ನೂರಾರು ರೈತರಿಂದ ಈರುಳ್ಳಿ ಖರೀದಿಸಿದೆ. ಸುಮಾರು 400 ಟನ್‌ ಈರುಳ್ಳಿ, 50 ಟನ್‌ ಕಲ್ಲಂಗಡಿ, ಬಾಳೆಯನ್ನೂ ಮಾರಾಟ ಮಾಡಿದೆ.
ಬೆಂಗಳೂರು, ದಾವಣಗೆರೆ, ಆನೇಕಲ್‌, ಶಿರಾ ಸೇರಿದಂತೆ ವಿವಿಧೆಡೆ ಕಳಿಸುವ ಮೂಲಕ ರೈತರ ನೆರವಿಗೆ ಧಾವಿಸಿದೆ. ಇಂಡಿ ರೈತರ ಕಂಪನಿ ಸುಮಾರು 50 ರೈತರಿಂದ ಖರೀದಿಸಿದ 100 ಟನ್‌ ಲಿಂಬೆಹಣ್ಣು ಉತ್ಪನ್ನವನ್ನು ಬೆಂಗಳೂರಿಗೆ ಕಳಿಸಿದೆ. ತಿಕೋಟಾ ತಾಲೂಕಿನ ಟಕ್ಕಳಕಿ ಕಂಪನಿ ಹಸಿ ದ್ರಾಕ್ಷಿ, ಅದರಲ್ಲೂ ವಿವಿಧ ತರಕಾರಿ ಖರೀದಿಸಿ ಹಾಪ್‌ಕಾಮ್ಸ್‌ ಮೂಲಕ
ಮಾರಾಟಕ್ಕೆ ವೇದಿಕೆ ಕಲ್ಪಿಸಿದೆ.

ಇದಲ್ಲದೇ ಈ ನಾಲ್ಕು ರೈತ ಕಂಪನಿಗಳು ರೈತರಿಂದ ನೇರವಾಗಿ ಗ್ರಾಹಕನ ಮನೆ ಬಾಗಿಲಿಗೆ ತರಕಾರಿ ಮುಟ್ಟಿಸಲು ಸಂಚಾರಿ ಮಾರಾಟಕ್ಕೆ ಮುಂದಾಗಿವೆ. ಇದರಲ್ಲಿ ಸ್ವಂತ
ವಾಹನ ಇಲ್ಲದ ಇಂಡಿ ಹಾಗೂ ಸಿಂದಗಿ ಕಂಪನಿಗಳು ಬಾಡಿಗೆ ವಾಹನದಲ್ಲಿ ತರಕಾರಿ ಮಾರುತ್ತಿವೆ. ಬಸವನಬಾಗೇವಾಡಿ, ತಿಕೋಟಾ ತಾಲೂಕಿನ ಕಂಪನಿಗಳು ಅತ್ಯಂತ
ಲಾಭದಲ್ಲಿದ್ದು ಆರ್ಥಿಕವಾಗಿ ಸುಸ್ಥಿತಿಯಲ್ಲಿವೆ. ಇಂಡಿ, ಸಿಂದಗಿ ರೈತ ಕಂಪನಿಗಳು ಸ್ವಾವಲಂಬನೆಗಾಗಿ ಹೆಣಗುತ್ತಿದ್ದರೂ ಕಷ್ಟ ಕಾಲದಲ್ಲಿ ರೈತರ ನೆರವಿಗೆ ಧಾವಿಸುತ್ತಲೇ ಇವೆ. ಇದಕ್ಕೆ ಸಾಕ್ಷಿ ಎಂಬಂತೆ ಲಾಕ್‌ಡೌನ್‌ ಸಂದರ್ಭದಲ್ಲಿ ತಲೆ ಮೇಲೆ ಕೈ ಹೊತ್ತು ಕುಳಿತಿದ್ದ ಅನ್ನದಾತರತ್ತ ಚಾಚಿದ ಸಹಾಯ ಹಸ್ತವೇ ಸಾಕ್ಷಿಯಾಗಿದೆ.

ಜಿ.ಎಸ್‌. ಕಮತರ

ಟಾಪ್ ನ್ಯೂಸ್

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Delhi-Cong

Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard spotted in Vijayapura city: CCTV footage captured

Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

cyber crime

MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ

1anna

Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.