ಕ್ವಾರಂಟೈನ್ ಕಟ್ಟುನಿಟ್ಟಾಗಿ ಪಾಲನೆಯಾಗಲಿ
27,384 ಜನರ ಮೇಲೆ ತೀವ್ರ ನಿಗಾ 4,121 ಜನರ ವರದಿ ನಿರೀಕ್ಷೆ 61 ಜನ ಗುಣಮುಖ-67 ರೋಗಿಗಳಿಗೆ ಚಿಕಿತ್ಸೆ
Team Udayavani, Jun 4, 2020, 11:40 AM IST
ಸಾಂದರ್ಭಿಕ ಚಿತ್ರ
ವಿಜಯಪುರ: ಹೊರ ರಾಜ್ಯಗಳಿಂದ ಆಗಮಿಸಿದವರನ್ನು ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಸಾಂಸ್ಥಿಕ ಹಾಗೂ ಹೋಂ ಕ್ವಾರಂಟೈನ್ ನಿಗಾದಲ್ಲಿ ಇರುವವರು ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕು. ಈ ಕುರಿತು ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬುಧವಾರ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ನೆರೆ ರಾಜ್ಯದ ಜಿಲ್ಲೆಯ ಗಡಿಭಾಗದಲ್ಲಿ ಜನರು ನಿಯಮ ಬಾಹಿರವಾಗಿ ಜಿಲ್ಲೆಗೆ ನುಸುಳಿ ಬಾರದಂತೆ ಚೆಕ್ ಪೋಸ್ಟ್ ಮತ್ತಷ್ಟು ಬಿಗಿಗೊಳಿಸಬೇಕು. ಸಾಂಸ್ಥಿಕ ಹಾಗೂ ಹೋಂ ಕ್ವಾರಂಟೈನ್ ಹಾಗೂ ಕಂಟೇನ್ಮೆಂಟ್ ವಲಯಗಳಲ್ಲಿ ಯಾವುದೇ ಲೋಪ ಆಗದಂತೆ ಕಟ್ಟುಟ್ಟಿನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.
ಹೊರ ರಾಜ್ಯದಿಂದ ಜಿಲ್ಲೆಗೆ ಆಗಮಿಸಿದ ಕಾರ್ಮಿಕರಿಗೆ ನರೇಗಾ ಯೋಜನೆಯಲ್ಲಿ ಉದ್ಯೋಗ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಮುಂಗಾರು ಸಂದರ್ಭದಲ್ಲಿ ಬಿತ್ತನೆ ಬೀಜ, ರಸಗೊಬ್ಬರದ ಕೊರತೆಯಾಗದಂತೆ ರೈತ ಸಂಪರ್ಕ ಕೇಂದ್ರಗಳ ಮೂಲಕ ಸಮರ್ಪಕ ವಿತರಣೆಗೆ ಕ್ರಮ ಕೈಗೊಳ್ಳಬೇಕು. ತೋಟಗಾರಿಕೆಯ ಹೂವು ಬೆಳೆಗಾರರು, ಹಣ್ಣು ತರಕಾರಿ ಬೆಳೆಗಾರರಿಗೆ ಸರ್ಕಾರಿ ಮಾರ್ಗಸೂಚಿಯಂತೆ ಬೆಳೆಹಾನಿ ಪರಿಹಾರ ಧನ ಕಲ್ಪಿಸಬೇಕು. ಮದುವೆಗಳಿಗೆ ಮಂಗಲ ಕಾರ್ಯಾಲಯ ಕಾಯ್ದಿರಿಸಿ, ಲಾಕ್‌ಡೌನ್‌ದಿಂದ ಮದುವೆ ಮಾಡಿಕೊಳ್ಳಲಾಗದ ಪ್ರಕರಣದಲ್ಲಿ ಮುಂಗಡ ಹಣ ಪಾವತಿಸಿದ ಎಲ್ಲರಿಗೂ ಹಣ ಮರು ಪಾವತಿಸಬೇಕು. ಈ ಕುರಿತು ದೂರುಗಳು ಬಂದಿದ್ದು, ಅಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ಸಭೆಗೆ ವಿವರ ನೀಡಿದ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲೆಯಲ್ಲಿ 22 ಕಂಟೇನ್ಮೆಂಟ್ ವಲಯಗಳನ್ನು ಗುರುತಿಸಿದ್ದು, 5 ಕಂಟೇನ್ಮೆಂಟ್ ವಲಯಗಳಲ್ಲಿ ನಿರ್ಬಂಧ ಮುಕ್ತವಾಗಿದೆ. ಚಾಲ್ತಿಯಲ್ಲಿರುವ 17 ಕಂಟೇನ್ಮೆಂಟ್ ವಲಯಗಳ ಮೇಲೆ ತೀವ್ರ ನಿಗಾ ಇಡಲಾಗಿದೆ. ಹೊರ ರಾಜ್ಯಗಳಿಂದ ಜಿಲ್ಲೆಗೆ ಮರಳಿದ ಕಾರ್ಮಿಕರನ್ನು ಜಿಲ್ಲೆಯ 576 ಸಾಂಸ್ಥಿಕ ಕ್ವಾರಂಟೈನ್ ಇರಿಸಲಾಗಿದೆ. 26,324 ಜನರನ್ನು ಕ್ವಾರಂಟೈನ್ ಮಾಡಿದ್ದು ಸಾಂಸ್ಥಿಕ ಕ್ವಾರಂಟೈನ್ ಅವಧಿ ಮುಗಿಸಿದ 23,834 ಜನರನ್ನು ಹೋಂ ಕ್ವಾರಂಟೈನ್ ಮಾಡಿ ನಿಗಾ ಇಡಲಾಗಿದೆ. ಸದ್ಯಕ್ಕೆ 133 ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳು ಚಾಲ್ತಿಯಲ್ಲಿದ್ದು, 2503 ಜನರು ಈ ಕೇಂದ್ರಗಳಲ್ಲಿ ನಿಗಾದಲ್ಲಿದ್ದಾರೆ ಎಂದರು.
ಸಭೆಯಲ್ಲಿ ಸಂಸದ ರಮೇಶ ಜಿಗಜಿಣಗಿ, ಶಾಸಕ ಸೋಮನಗೌಡ ಸಾಸನೂರ, ಎಸ್ಪಿ ಅನುಪಮ್ ಅಗರವಾಲ್, ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ಡಿಎಚ್‌ಒ ಡಾ| ಮಹೇಂದ್ರ ಕಾಪ್ಸೆ, ಕೃಷಿ ಜಂಟಿ ನಿರ್ದೇಶಕ ಶಿವಕುಮಾರ, ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ, ತಹಶೀಲ್ದಾರ್ ಮೋಹನಕುಮಾರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.