ಕ್ವಾರಂಟೈನ್‌ ಕೇಂದ್ರಗಳಿಗೆ ಸೌಲಭ್ಯ ಕೊರತೆಯಾಗದಿರಲಿ

ಅಧಿಕಾರಿಗಳ ಮಧ್ಯೆ ಸಮನ್ವಯತೆ ಇರಲಿ |ಗ್ರಾಮೀಣ ಸಾಂಸ್ಥಿಕ ಕ್ವಾರಂಟೈನ್‌ಗಳ ಸೂಕ್ತ ನಿರ್ವಹಣೆಗೆ ಸೂಚನೆ

Team Udayavani, May 28, 2020, 11:49 AM IST

28-May-05

ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರ ಅಧ್ಯಕ್ಷತೆಯಲ್ಲಿ ಶಾಸಕರು- ಅಧಿಕಾರಿಗಳ ಸಭೆ ಜರುಗಿತು.

ವಿಜಯಪುರ: ಗ್ರಾಮೀಣ ಪ್ರದೇಶದ ಸಾಂಸ್ಥಿಕ ಕ್ವಾರಂಟೈನ್‌ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವ ಮೂಲಕ ವ್ಯವಸ್ಥಿತವಾಗಿ ಕೇಂದ್ರಗಳನ್ನು ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚಿಸಿದರು.

ಬುಧವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಕೋವಿಡ್‌-19 ಮುನ್ನೆಚ್ಚರಿಕಾ ಕ್ರಮಗಳು ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಉದ್ಯೋಗ ಅರಸಿ ವಿವಿಧ ರಾಜ್ಯಗಳಿಗೆ ಹೋಗಿ ಜಿಲ್ಲೆಗೆ ಮರಳಿದವರಿಗೆ ಕಲ್ಪಿಸಿರುವ ಸಾಂಸ್ಥಿಕ ಕ್ವಾರಂಟೈನ್‌ ಕೇಂದ್ರಗಳಲ್ಲಿ ಲೋಪಗಳಾಗದಂತೆ ಅಗತ್ಯ ಸೌಲಭ್ಯಗಳೊಂದಿಗೆ ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಹೇಳಿದರು.

ಕಾನೂನು ಉಲ್ಲಂಘನೆ ಗಂಭೀರವಾಗಿ ಪರಿಗಣಿಸಿ: ಕೋವಿಡ್‌-19 ಹಿನ್ನೆಲೆಯಲ್ಲಿ ಕ್ವಾರಂಟೈನ್‌ ಕೇಂದ್ರಗಳಲ್ಲಿರುವ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಕ್ವಾರಂಟೈನ್‌ ನಿಗಾದಲ್ಲಿರುವ ಜನರಿಗೆ ಆಯಾ ತಹಶೀಲ್ದಾರ್‌ ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು. ಅದರಂತೆ ಕೋವಿಡ್‌-19 ಸಂಕಷ್ಟದ ಪರಿಸ್ಥಿತಿಯಲ್ಲಿ ಕೆಲವು ಕಾನೂನು ಉಲ್ಲಂಘನೆ ಪ್ರಕರಣಗಳ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ಸೂಚಿಸಿದರು.

ಸಂಪುಟ ಸಭೆಯಲ್ಲಿ ಚರ್ಚಿಸುವ ಭರವಸೆ: ಜಿಲ್ಲೆಯಲ್ಲಿ ಯಾವುದೇ ಪ್ರಮುಖ ಘಟನೆ ಸಂಭವಿಸಿದರೂ ತಕ್ಷಣ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ತಮ್ಮ ಗಮನಕ್ಕೆ ತರಬೇಕು. ಅಕಾಲಿಕ ಮಳೆಯಿಂದಾಗಿ ಇಂಡಿ, ಸಿಂದಗಿ ಸೇರಿದಂತೆ ಜಿಲ್ಲೆಯಲ್ಲಿ ಹಾನಿಗೀಡಾದ ಬೆಳೆಗಳ ಬಗ್ಗೆ ತಕ್ಷಣ ಸಮೀಕ್ಷೆ ನಡೆಸಿ, ವರದಿ ಸಲ್ಲಿಸಬೇಕು. ಆಲಿಕಲ್ಲು ಮಳೆಯಿಂದ ಆಗಿರುವ ಬೆಳೆ ಹಾನಿಗೆ ಪರಿಹಾರ ಕಲ್ಪಿಸುವುದು ಹಾಗೂ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ ಸೇರಿದಂತೆ ಜಿಲ್ಲೆಯ ಗಂಭಿರ ಸಮಸ್ಯೆಗಳ ಪರಿಹಾರಕ್ಕೆ ಬರುವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು. ಮಹಾರಾಷ್ಟ್ರಕ್ಕೆ ಮನವಿ ಮಾಡಿಕೊಂಡು ಆ ರಾಜ್ಯದ ಜಲಾಶಯಗಳಿಂದ ನದಿಗಳಿಗೆ ನೀರು ಹರಿಸುವ ಮೂಲಕ ವಿಜಯಪುರ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವಂತೆ ಶಾಸಕ ಯಶವಂತರಾಯಗೌಡ ಆಗ್ರಹಿಸಿದರು.

ನೀರು ಸಮರ್ಪಕ ಪೂರೈಕೆಗೆ ಕ್ರಮ: ಜಿಲ್ಲೆಯ ನದಿಪಾತ್ರದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ, ಸಾಗಾಣಿಕೆ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ ಅವರು, ಆಲಮಟ್ಟಿ ಲಾಲಬಹದ್ದೂರ ಶಾಸ್ತ್ರಿ ಜಲಾಶಯ ಸೇರಿದಂತೆ ಇತರೆ ಜಲ ಸಂಪನ್ಮೂಲಗಳಿಂದ ಕಾಲುವೆ ಮೂಲಕ ಹರಿಸುವ ನೀರು ಸಮರ್ಪಕವಾಗಿ ಪೂರೈಸಲು ಕ್ರಮ ಕೈಗೊಳ್ಳಬೇಕು. ನಗರ ಮತ್ತು ಪಟ್ಟಣ ವ್ಯಾಪ್ತಿಯಲ್ಲಿ ಜಾರಿಯಾಗಿರುವ 24×7 ಕುಡಿಯುವ ನೀರಿನ ಯೋಜನೆಯ ಸಮರ್ಪಕ ಅನುಷ್ಠಾನ ಮತ್ತು ನಿಗದಿತ ಸಮಯಕ್ಕೆ ನೀರು ಬಿಡಲು ಕ್ರಮ ಕೈಗೊಳ್ಳಬೇಕು ಎಂದರು.

ಜೂ.15ರ ವರೆಗೆ ನೀರಿನ ಕೊರತೆ ಇಲ್ಲ: ಜಿಪಂ ಸಿಇಒ ಗೋವಿಂದರಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ಕೇವಲ 11 ಗ್ರಾಮಗಳಿಗೆ 35 ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಕಳೆದ ಬಾರಿ ಇದೇ ಅವಧಿಯಲ್ಲಿ 122 ಗ್ರಾಮಗಳಿಗೆ 2 ಸಾವಿರ ಟ್ಯಾಂಕರಗಳ ಮೂಲಕ ನೀರು ಪೂರೈಸಲಾಗಿತ್ತು. ಸದ್ಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮತ್ತು ಏತ ನೀರಾವರಿ ಯೋಜನೆಗಳ ಮೂಲಕ 16 ಕೆರೆಗಳನ್ನು ತುಂಬಿರುವ ಫಲವಾಗಿ 296 ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಸ್ಥಗಿತ ಮಾಡಲಾಗಿದೆ. ಜೂನ್‌ 15ರ ವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆ ಇಲ್ಲ ಎಂದು ವಿವರಿಸಿದರು.

ಸಭೆಯಲ್ಲಿ ಶಾಸಕರಾದ ಯಶವಂತರಾಯಗೌಡ ಪಾಟೀಲ, ಎಂ.ಸಿ. ಮನಗೂಳಿ ಇಂಡಿ ಮತ್ತು ಸಿಂದಗಿ ಭಾಗದಲ್ಲಿ ಉಂಟಾಗಿರುವ ವಿವಿಧ ಸಮಸ್ಯೆಗಳ ಬಗ್ಗೆ ಸಚಿವರ ಗಮನಕ್ಕೆ ತಂದರು. ಜಿಲ್ಲಾಧಿಕಾರಿ ವೈ.ಎಸ್‌ ಪಾಟೀಲ, ಎಸ್ಪಿ ಅನುಪಮ್‌ ಅಗರವಾಲ್‌, ಜಿಪಂ ಸಿಇಒ ಗೋವಿಂದರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.