ಅಭಿವೃದ್ಧಿಗೆ ಪ್ರಥಮ ಆದ್ಯತೆಯ ಭರವಸೆ
ಜಿಪಂ ನೂತನ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಪದಗ್ರಹಣ
Team Udayavani, Jul 4, 2020, 11:32 AM IST
ವಿಜಯಪುರ: ಜಿಲ್ಲಾ ಪಂಚಾಯತ್ ಅಧ್ಯಕ್ಷೆಯಾಗಿ ಸುಜಾತಾ ಕಳ್ಳಿಮನಿ ಅಧಿಕಾರ ಸ್ವೀಕರಿಸಿದರು.
ವಿಜಯಪುರ: ಸಮಾನತೆ ಹರಿಕಾರರಾದ ಬುದ್ಧ-ಬಸವ-ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸುವ ಮೂಲಕ ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಶುಕ್ರವಾರ ಅಧಿಕಾರದ ಪದಗ್ರಹಣ ಮಾಡಿದರು.
ಜಿಪಂ ಅಧ್ಯಕ್ಷರ ಕಚೇರಿಯಲ್ಲಿ ಏರ್ಪಡಿಸಿದ್ದ ಅಧಿಕಾರ ಸ್ವೀಕಾರ ಸಮಾರಂಭ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಸುಜಾತಾ, ಜಿಲ್ಲೆಯ ಜನತೆಯ ಆಶೀರ್ವಾದ, ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರ ಪ್ರಯತ್ನ, ಜಿಪಂ ಸದಸ್ಯರ ಬೆಂಬಲದಿಂದ ನನಗೆ ಅಧಿಕಾರ ಸಿಕ್ಕಿದೆ. ಆಡಳಿತದ ಅವಧಿ ಕಡಿಮೆ ಇದ್ದರೂ ಸಿಕ್ಕ ಅವಕಾಶ ಸದ್ಬಳಕೆ ಮಾಡಿಕೊಂಡು ಸಾಮಾಜಿಕ ನ್ಯಾಯದ ಅಡಿಯಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡುವ ಭರವಸೆ ನೀಡಿದರು.
ಈ ವೇಳೆ ಮಾತನಾಡಿದ ಭಂತೆ ವರಜ್ಯೋತಿ, ಅಧಿಕಾರ ಶಾಶ್ವತವಲ್ಲ, ಆದರೆ ನಾವು ಮಾಡುವ ಒಳ್ಳೆ ಕೆಲಸಗಳು ಶಾಶ್ವತವಾಗಿರುತ್ತವೆ. ಅಧಿಕಾರ ಬಂದಾಗ ಸಮಾಜದ ಎಲ್ಲ ವರ್ಗಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಏಳ್ಗೆಗೆ ಶ್ರಮಿಸುವುದು ಅಗತ್ಯ ಎಂದು ಸಲಹೆ ನೀಡಿದರು. ಹಿಂದುಳಿದ ವರ್ಗದಿಂದ ಬಂದಿರುವ ಸುಜಾತಾ ಕಳ್ಳಿಮನಿಗೆ ಕೆಳ ವರ್ಗಗಳ ಸಮಸ್ಯೆ ಅರಿವಿದೆ. ಅಹಿಂದ ಹೋರಾಟದ ಹಿನ್ನೆಲೆಯ ಸುಜಾತಾ, ಜಿಪಂ ಅಧ್ಯಕ್ಷ ಪದವಿಗೆ ಏರಿದ್ದು ಸಂತಸ ಮೂಡಿಸಿದೆ. ಅ ಧಿಕಾರ ಸಿಕ್ಕಿರುವ ಈ ಹಂತದಲ್ಲಿ ತಾವು ಪ್ರತಿನಿಧಿಸುವ ವರ್ಗಗಳಿಗೆ ನ್ಯಾಯ ದೊರಕಿಸಿಕೊಡುವ ಜೊತೆಗೆ ಸಾಮಾಜಿಕ ನ್ಯಾಯದ ತಳಹದಿಯಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ತಮ್ಮ ಅಧಿಕಾರ ಅವಧಿ ಯಲ್ಲಿ ವಿಜಯಪುರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವ ಮೂಲಕ ಜಿಲ್ಲೆಯ ಇತಿಹಾಸದಲ್ಲಿ ಹೆಸರು ಉಳಿಯುವಂತೆ ಮಾಡಬೇಕು ಎಂದರು.
ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಸದಸ್ಯರಾದ ಅಪ್ಪಣ್ಣ ಐಹೊಳ್ಳಿ, ಕಲ್ಲಪ್ಪ ಮಟ್ಟಿ, ಬಸವರಾಜ ಅಸ್ಕಿ, ರಾಮು ರಾಠೊಡ, ಮಹಾದೇವ ಪೂಜಾರಿ ಗಡ್ಡದ, ಅಣ್ಣಾಸಾಹೇಬ ಪಾಟೀಲ, ಸಂತೋಷ ಚವ್ಹಾಣ, ಪ್ರಸಾದ ಚವ್ಹಾಣ, ಹನುಮಂತ ಖಂಡೇಕರ, ಮೋಹನ ಮೇಟಿ, ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ, ನಾಗರಾಜ ಲಂಬು, ಅನಿಲ ಹೊಸಮನಿ, ವೆಂಕಟೇಶ ವಗ್ಯಾನವರ, ಸಂತೋಷ ಶಹಾಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
Waqf Issue: ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವಾಗಬೇಕು: ಶೋಭಾ ಕರಂದ್ಲಾಜೆ
Waqf Property: ಬೊಮ್ಮಾಯಿ ಕಾಲದಲ್ಲೂ ವಕ್ಫ್ ಆಸ್ತಿ ತೆರವಿಗೆ ಹೇಳಿದ್ರು: ಸಚಿವ ಜಮೀರ್
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.