ಮಸೀದಿ ನಿರ್ಮಾಣಕ್ಕೆ ಗ್ರಾಮಸ್ಥರ ಆಕ್ಷೇಪ
Team Udayavani, Feb 18, 2022, 3:08 PM IST
ಚಿತ್ತಾಪುರ: ತಾಲೂಕಿನ ದಂಡೋತಿ ಗ್ರಾಮದಲ್ಲಿ ಹಿಂದೂಗಳ ಮನೆ ಇರುವೆಡೆ ಮಸೀದಿ ನಿರ್ಮಿಸುತ್ತಿರುವುದನ್ನು ಆಕ್ಷೇಪಿಸಿ ಗ್ರಾಮದ ಮುಖಂಡರು ಗ್ರಾಪಂ ಎದುರು ಪ್ರತಿಭಟನೆ ನಡೆಸಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು.
ವಾರ್ಡ್ ನಂ. 4ರಲ್ಲಿ ಕಟ್ಟಡ ನಿರ್ಮಾಣಕ್ಕೆ ನೀಡಿರುವ ಪರವಾನಗಿ ಹಿಂತೆಗೆದುಕೊಳ್ಳಬೇಕು. ಕಾಮಗಾರಿ ಸ್ಥಗಿತಗೊಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಗ್ರಾಮದಲ್ಲಿ ಈಗಾಗಲೇ ಐದು ಮಸೀದಿಗಳಿವೆ. ಆದರೆ ಇಬ್ರಾಹಿಂ ಮುಲ್ಲಾ ಎನ್ನುವರು ಯಾತ್ರಿಕರಿಗೆ ಉಳಿದುಕೊಳ್ಳಲು ಸಮುದಾಯ ಭವನ ನಿರ್ಮಿಸುತ್ತೇವೆಂದು ಗ್ರಾಪಂ ಪಂಚಾಯಿತಿಗೆ ತಿಳಿಸಿ ಮಸೀದಿ ಕಟ್ಟುತ್ತಿದ್ದಾರೆ. ಆದ್ದರಿಂದ ಪಂಚಾಯಿತಿ ಪರವಾನಗಿ ರದ್ದುಪಡಿಸಬೇಕೆಂದು ಕೋಲಿ ಸಮಾಜದ ಯುವ ಅಧ್ಯಕ್ಷ ಸಾಬಣ್ಣ ಭರಾಟೆ ಆಗ್ರಹಿಸಿದರು.
ಗ್ರಾಮದ ಮುಖಂಡರಾದ ಹಣಮಂತ ಭರಾಟೆ, ವೀರಣ್ಣ ಕುರಕುಂಟಿ, ಶರಣು ತೊಟನಳ್ಳಿ, ರಮೇಶ ಕವಡೆ, ಶಿವಶರಣಪ್ಪ ದೌಲಮನಿ, ಸೂರ್ಯಕಾಂತ ಕೊಂಕನಳ್ಳಿ, ಹಣಮಂತ ಮಡಿಕಿ, ಸಿದ್ಧಪ್ಪ ಕೊಳ್ಳಿ, ಸಂತೋಷ ಕೊಂಕನಳ್ಳಿ, ಈರಣ್ಣ ಕೊಳ್ಳಿ, ಪ್ರಕಾಶ ಯಾದಗಿರ, ಶಿವಯೋಗಿ ತೊಟನಳ್ಳಿ, ರವಿ ಕೊಂಕನಳ್ಳಿ ಇತರರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.