ನಾಲ್ಕು ದಶಕದ ಮನವಿಗೆ ಸ್ಪಂದನೆ
40 ವರ್ಷಗಳಿಂದ ಸಲ್ಲಿಸಲಾಗಿತ್ತು ಮನವಿಸಿಸಿ ಚರಂಡಿ ಕಾಮಗಾರಿಗೆ ಚಾಲನೆ
Team Udayavani, Feb 17, 2020, 4:16 PM IST
ವಾಡಿ: ಸಣ್ಣ ಗಲ್ಲಿಯೊಂದರಲ್ಲಿ ಸಿಸಿ ಚರಂಡಿ ನಿರ್ಮಿಸಬೇಕು ಎಂದು ಒತ್ತಾಯಿಸಿ ಒಂದಲ್ಲ ಎರಡಲ್ಲ ಬರೋಬ್ಬರಿ 40 ವರ್ಷಗಳಿಂದ ನಿರಂತರವಾಗಿ ಸಲ್ಲಿಸಲಾಗುತ್ತಿರುವ ಮನವಿ ಪತ್ರಗಳಿಗೆ ಕೊನೆಗೂ ಪುರಸಭೆ ಅಧಿಕಾರಿಗಳು ಸ್ಪಂದಿಸಿದ್ದು, ಚರ್ಚ್ ಬಡಾವಣೆ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಪಟ್ಟಣದ ಪುರಸಭೆ ವ್ಯಾಪ್ತಿಯ ವಾರ್ಡ್ 12ರಲ್ಲಿನ ಕ್ಯಾಥೋಲಿಕ್ ಚರ್ಚ್ ಸುತ್ತಲೂ ಬಚ್ಚಲು ನೀರು ಸುತ್ತುವರಿದು ನೈರ್ಮಲ್ಯ ವ್ಯವಸ್ಥೆ ಹದಗೆಟ್ಟಿತ್ತು. ಚರ್ಚ್ ಆವರಣದ ವರೆಗೂ ಹರಿಯುತ್ತಿದ್ದ ಮಲ ಮೂತ್ರಗಳ ಚರಂಡಿ ನೀರು, ಪ್ರತಿ ರವಿವಾರ ಪ್ರಾರ್ಥನೆಗೆ ಬರುವ ಕ್ರೆ„ಸ್ತರಿಗೆ ಕಿರಿಕಿರಿ ಆಗಿತ್ತು. ಚರ್ಚ್ ಸುತ್ತಲಿನ ಬಡಾವಣೆ ಜನರಿಗಾಗಿ ಚರಂಡಿ ನಿರ್ಮಿಸಿದರೆ ಸಮಸ್ಯೆ ಬಗೆಹರಿಯುತ್ತದೆ ಎನ್ನುವ ಕಾರಣಕ್ಕೆ ಸರಕಾರಿ ಕಚೇರಿಗಳ ಭೇಟಿ ಆರಂಭಿಸಿದ ಕ್ಯಾಥೋಲಿಕ್ ಚರ್ಚ್‌ನ ಅಂದಿನ ಫಾದರ್ 1978ರಲ್ಲಿ ಸ್ಥಳೀಯ ಗ್ರಾ.ಪಂಗೆ ಮನವಿ ಪತ್ರ ಸಲ್ಲಿಸಿದ್ದರು. ಅಂದಿನಿಂದ ಪ್ರತಿ ವರ್ಷ ಸುಮಾರು 40 ವರ್ಷಗಳ ವರೆಗೆ ನಿರಂತರವಾಗಿ ಮನವಿ ಪತ್ರಗಳನ್ನು ಸಲ್ಲಿಸುತ್ತಾ ಬಂದಿರುವ ಕುರಿತು ಚರ್ಚ್‌ನಲ್ಲಿ ದಾಖಲೆಗಳಿವೆ. ಈ ವೇಳೆ ಕೇವಲ ಭರವಸೆ ಮಾತ್ರ ನೀಡಲಾಗುತ್ತಿತ್ತು.
ವಾಡಿಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಗ್ರಾ.ಪಂ ಆಡಳಿತಕ್ಕೆ, ಮಂಡಲ ಪಂಚಾಯತಿ ಆಡಳಿತಕ್ಕೆ ಹಾಗೂ 20 ವರ್ಷಗಳ ಹಿಂದೆ ಜಾರಿಗೆ ಬಂದ ಪುರಸಭೆ ಆಡಳಿತಕ್ಕೂ ಸಣ್ಣ ಚರಂಡಿ ಬೇಡಿಕೆಗಾಗಿ ಸಲ್ಲಿಸಲಾದ ಮನವಿಪತ್ರಗಳ ರಾಶಿಯೇ ನಮ್ಮ ಹತ್ತಿರವಿದೆ. ಆಡಳಿತ ಎಷ್ಟೊಂದು ಜಡಗಟ್ಟಿದೆ ಎಂಬುದನ್ನು ನೆನಪಿಸಿಕೊಂಡರೆ ಬೇಸರವಾಗುತ್ತದೆ. ನಲವತ್ತು ವರ್ಷಗಳ ನಿರಂತರ ಹೋರಾಟದ ನಂತರವಾದರೂ ನಮ್ಮ ಚರ್ಚ್ ಬಡಾವಣೆಗೆ ಚರಂಡಿ ಸೌಲಭ್ಯ ಒದಗಿತಲ್ಲ ಎಂಬುದಷ್ಟೇ ಸಮಾಧಾನದ ಸಂಗತಿ ಎಂದು ಕ್ಯಾಥೋಲಿಕ್ ಚರ್ಚ್‌ನ ಹಾಲಿ ಪಾಧರ್ ರೆ.ವಿಲ್ಬರ್ಟ್ ನೋವಿನಿಂದ ಪ್ರತಿಕ್ರಿಯಿಸಿದ್ದಾರೆ.
ಪುರಸಭೆ ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ, ವಾರ್ಡ್ ಸದಸ್ಯೆ ಝರೀನಾ ಬೇಗಂ ಅವರ ಪ್ರಯತ್ನದ ಫಲವಾಗಿ ಅನುದಾನ ಬಿಡುಗಡೆಯಾಗಿದ್ದು, ಚರ್ಚ್ ಹಿಂಬದಿಯ ಗಲ್ಲಿಯಲ್ಲಿ ಸಿಸಿ ಚರಂಡಿ ಕಾಮಗಾರಿಗೆ ಚಾಲನೆ ದೊರೆತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.