ವಾಡಿ: ಹೆಚ್ಚಿನ ದರ ಪಡೆದ ಖಾಸಗಿ ವಾಹನಗಳು

ವಾಡಿ-ಯಾದಗಿರಿ ಮಧ್ಯೆ ಪ್ರಯಾಣ ದರ 50ರೂ.ಗಳನ್ನು ಸರ್ಕಾರವೇ ನಿಗದಿಪಡಿಸಿದೆ.

Team Udayavani, Apr 8, 2021, 6:08 PM IST

Bus

ವಾಡಿ: ರಾಜ್ಯಾದ್ಯಂತ ಸಾರಿಗೆ ಸಂಸ್ಥೆ ನೌಕರರು ಬುಧವಾರದಿಂದ ಮುಷ್ಕರ ಹಮ್ಮಿಕೊಂಡಿದ್ದರಿಂದ ಖಾಸಗಿ ವಾಹನಗಳ ದರ್ಬಾರ್‌ ಹೆಚ್ಚಿತ್ತು. ಪಟ್ಟಣದ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ಮೇಲೆ ಸಾರಿಗೆ ಸಂಸ್ಥೆ ಬಸ್‌ಗಳ ಓಡಾಟ ಸ್ಥಗಿತವಾಗಿತ್ತು. ಹೀಗಾಗಿ ಖಾಸಗಿ ವಾಹನಗಳ ಪ್ರಯಾಣ ದರ ಸಾಮಾನ್ಯವಾಗಿ ಗಗನಕ್ಕೇರಿತ್ತು.

ಬಸ್‌ಗಳು ನಿಲ್ಲುತ್ತಿದ್ದ ಸ್ಥಳದಲ್ಲಿ ಕ್ರೂಸರ್‌, ಆಟೋ, ಕಾರುಗಳ ದರ್ಭಾರ್‌ ಕಂಡು ಬಂತು. ಕಲಬುರಗಿ, ಯಾದಗಿರಿ ನಗರಗಳಿಗೆ ಹೋಗಲು ಅಣಿಯಾಗಿದ್ದ ನೂರಾರು ಪ್ರಯಾಣಿಕರು, ಖಾಸಗಿ ವಾಹನಗಳ ದರ ಕೇಳಿ ಧಂಗಾಗಿ ಹೋದರು.

ಪ್ರತಿದಿನದಂತೆ ನಿಗದಿತ ಸಾರಿಗೆ ವೆಚ್ಚ ಪಡೆಯಬೇಕಾದ ಕ್ರೂಸರ್‌ ಚಾಲಕರು, ದುಪ್ಪಟ್ಟು ಹಣಕ್ಕೆ ಬೇಡಿಕೆಯಿಡುತ್ತಿದ್ದರು. 45 ಕಿ.ಮೀ ಅಂತರದ ವಾಡಿ-ಕಲಬುರಗಿ, ವಾಡಿ-ಯಾದಗಿರಿ ಮಧ್ಯೆ ಪ್ರಯಾಣ ದರ 50ರೂ.ಗಳನ್ನು ಸರ್ಕಾರವೇ ನಿಗದಿಪಡಿಸಿದೆ. ಆದರೆ ಬುಧವಾರ ಕ್ರೂಸರ್‌ ಚಾಲಕರು ವಾಡಿ-ಕಲಬುರಗಿಗೆ ತಲುಪಿಸಲು 100ರೂ. ಪೀಕಿದರು.

ದೇವರಿಗೆ ಬಂದವರು ದಾರಿ ಕಾಣದಾದರು: ಈ ಭಾಗದ ಪ್ರತಿಷ್ಠಿತ ಭಕ್ತಿ ಕೇಂದ್ರಗಳಾದ ಬಳವಡಗಿ ಏಲಾಂಬಿಕೆ, ಕೊಂಚೂರು ಶ್ರೀ ಹನುಮಾನ, ನಾಲವಾರದ ಶ್ರೀ ಕೋರಿಸಿದ್ಧೇಶ್ವರ, ರಾವೂರ ಶ್ರೀ ಸಿದ್ಧಲಿಂಗೇಶ್ವರ, ಸನ್ನತಿಯ ಶ್ರೀ ಚಂದ್ರಲಾಂಬಿಕೆ, ಲಾಡ್ಲಾಪುರದ ಹಾಜಿ ಸರ್ವರ್‌, ಹಳಕರ್ಟಿಯ ಶ್ರೀ ವೀರಭದ್ರೇಶ್ವರ ದೇವರ ದರ್ಶನಕ್ಕಾಗಿ ವಿವಿಧೆಡೆಯಿಂದ ಬಂದಿದ್ದ ಭಕ್ತರು ಸಾರಿಗೆ ಸೌಲಭ್ಯವಿಲ್ಲದೇ ತೊಂದರೆ ಅನುಭವಿಸುವಂತೆ ಆಯಿತು. ಬಳವಡಗಿ ಏಲಾಂಬಿಕೆ ದರ್ಶನಕ್ಕಾಗಿ ಮಹಾರಾಷ್ಟ್ರದ ಸೊಲ್ಲಾಪುರದಿಂದ ಮಂಗಳವಾರವೇ ಆಗಮಿಸಿದ್ದ ಶಿವಗಂಗಾ, ಇಮಲಾಬಾಯಿ ಎನ್ನುವವರು ಬುಧವಾರ ವಾಪಸ್‌ ಊರಿಗೆ ಹೊರಡಲು ಬಸ್‌ ಇಲ್ಲ ಎನ್ನುವುದನ್ನು ಅರಿತು ಪರದಾಡಿದರು. ಕ್ರೂಸರ್‌ ಏರಿದವರು ಪ್ರಯಾಣ ದರ ಕೇಳಿ ಕೆಳಗಿಳಿದರು.

ಕರ್ನಾಟಕದಲ್ಲಿ ಬಸ್‌ ಬಂದ್‌ ಇರ್ತಾವ ಅಂತ ಗೊತ್ತಿರಲಿಲ್ಲ. ಪಾದುಕೆ ಕಟ್ಟಿಕೊಂಡವರು ನಾವು. ಬಳವಡಗಿ ಯಲ್ಲಮ್ಮನ ಬಳಿ ಬಂದಿದ್ದೆವು. ಬಸ್‌ ಬಂದ್‌ ಅವಾ ಅಂದ್ರ 10ರಿಂದ 20ರೂ. ಹೆಚ್ಚಿಸಬೇಕು. ನೂರು ರೂ. ಕೇಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳೀಯ ಬಹುತೇಕ ವ್ಯಾಪಾರಿಗಳು, ಕಾಲೇಜು ವಿದ್ಯಾರ್ಥಿಗಳು ಕಲಬುರಗಿಗೆ ಹೋಗುವುದನ್ನೇ ಕೈಬಿಟ್ಟರು. ಬಸ್‌ ಬಂದ್‌ ದಿನವನ್ನು ಖಾಸಗಿ ವಾಹನಗಳು ಸುಲಿಗೆ ದಿನವನ್ನಾಗಿ ಆಚರಿಸಿದ್ದು ಸ್ಪಷ್ಟವಾಗಿ ಗೋಚರಿಸಿತು.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.