ವಾಡಿಗಲ್ಲಿ ಸೀಲ್‌ಡೌನ್: ತಾಂಡಾಗಳಲ್ಲಿ ಆತಂಕ
Team Udayavani, Jun 5, 2020, 10:51 AM IST
ಸಾಂದರ್ಭಿಕ ಚಿತ್ರ
ವಾಡಿ: ಎರಡು ವರ್ಷದ ಮಗುವಿಗೆ ಕೋವಿಡ್ ಸೋಂಕು ದೃಢಪಟ್ಟು 21 ದಿನಗಳ ಸೀಲ್‌ಡೌನ್ ತೆಕ್ಕೆಗೆ ಜಾರಿದ್ದ ಪಟ್ಟಣಕ್ಕೆ ಮತ್ತೊಮ್ಮೆ ಸೀಲ್‌ಡೌನ್ ಸಂಕಟ ಎದುರಾಗಿದೆ.
ಪಟ್ಟಣದ ವಾರ್ಡ್ 11ರ ಪಿಲಕಮ್ಮಾ ದೇವಿ ಬಡಾವಣೆಯ ಮಹಿಳೆಯೊಬ್ಬರಿಗೆ ಸೋಂಕು ದೃಢಪಟ್ಟಿದ್ದು, ಗುರುವಾರ ಸೆಕ್ಟರ್ ಮ್ಯಾಜಿಸ್ಟ್ರೀಟ್
ವಿಠ್ಠಲ ಹಾದಿಮನಿ, ಪಿಎಸ್‌ಐ ವಿಜಯಕುಮಾರ ಭಾವಗಿ ಹಾಗೂ ಕಿರಿಯ ಆರೋಗ್ಯ ಸಹಾಯಕಿ ಸಿಬ್ಬಂದಿ ಸಮ್ಮುಖದಲ್ಲಿ ಸೋಂಕಿತರ ನಿವಾಸವಿರುವ ಗಲ್ಲಿಯೊಂದನ್ನು ಸೀಲ್‌ಡೌನ್ ಮಾಡಿ ಕಟ್ಟೆಚ್ಚರ ವಹಿಸಲಾಯಿತು.
ನಗರದ ಕಾಮ್ರೇಡ್ ಶ್ರೀನಿವಾಸಗುಡಿ ವೃತ್ತದ ಗಣೇಶ ಉಡುಪಿ ಹೋಟೆಲ್ ಹಿಂಭಾಗದ ಗಲ್ಲಿಯೊಂದು 14 ದಿನಗಳವರೆಗೆ ಪೊಲೀಸ್ ಮತ್ತು ಆರೋಗ್ಯ ಸಿಬ್ಬಂದಿ ನಿಗಾದಲ್ಲಿರಲಿದೆ. ಇಡೀ ಬಡಾವಣೆ ಸೀಲ್ ಡೌನ್ ಮಾಡದೆ ಕೇವಲ ಸೋಂಕಿತರ ಮನೆಯ ಸುತ್ತಲಿನ ಐದಾರು ಮನೆಗಳಷ್ಟೇ ಸೀಲ್‌ಡೌನ್ ಫಜೀತಿಗೆ ಒಳಗಾಗಿದ್ದು, ಪುರಸಭೆ ಸಿಬ್ಬಂದಿ ಕ್ರಿಮಿನಾಶಕ ಸಿಂಪಡಣೆಗೆ ಮುಂದಾಗಿದ್ದಾರೆ. ಸೋಂಕಿತರ ಪ್ರಾಥಮಿಕ ಸಂಪರ್ಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದವರು ಕಡ್ಡಾಯವಾಗಿ ಏಳು ದಿನಗಳವರೆಗೆ ಹೋಂ ಕ್ವಾರಂಟೈನ್ ಅನುಭವಿಸಬೇಕು. ಯಾವೂದೇ ಕಾರಣಕ್ಕೂ ಮನೆಯಿಂದ ಹೊರಗೆ ಬರುವಂತಿಲ್ಲ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ವಾಡಿ ಹಾಗೂ ನಾಲವಾರ ವಲಯದ ವಿವಿಧ ತಾಂಡಾಗಳಿಗೆ ಸೇರಿದ ಮಹಾರಾಷ್ಟ್ರದ ನೂರಾರು ಜನ ವಲಸಿಗರು ಸರಕಾರಿ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿ ಊರು ಸೇರಿಕೊಂಡಿದ್ದಾರೆ. ಇವರು ಊರೆಲ್ಲಾ ಓಡಾಡಿದ ನಂತರ ಪರೀಕ್ಷಾ ವರದಿ ಬಿಡುಗಡೆಯಾಗಿದ್ದು, ಹಲವರಲ್ಲಿ ಸೋಂಕು ದೃಢಪಟ್ಟಿದೆ. ಸೋಂಕಿತರು ಆಸ್ಪತ್ರೆಗೆ ದಾಖಲಾದ ಬಳಿಕ ಮನೆಯಲ್ಲಿದ್ದು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಿದ್ದ ತಾಂಡಾ ನಿವಾಸಿಗಳು, ವಿವಿಧ ಕೆಲಸ ಕಾರ್ಯಗಳಿಗಾಗಿ ನಗರ ಪಟ್ಟಣಗಳಿಗೆ ಹೋಗಿ ಬರುತ್ತಿದ್ದಾರೆ. 20ಕ್ಕೂ ಹೆಚ್ಚು ಪ್ರಕರಣಗಳಿರುವ ತಾಂಡಾಗಳಲ್ಲಿ ಬಿಂದಾಸ್ ಆಗಿ ಓಡಾಡಿಕೊಂಡಿದ್ದಾರೆ. ಇದು ಉಳಿದವರ ಆತಂಕಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್!
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Mangaluru: ಕೊಕ್ಕಡದ ʼಸಾಂತಾ ಕ್ಲಾಸ್ʼ ವಿನ್ಸೆಂಟ್ ಕ್ರಿಸ್ಮಸ್ ತಿರುಗಾಟಕ್ಕೆ 25 ವರ್ಷ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.