ಕೋವಿಡ್ ವಾರಿಯರ್ಸ್‌ಗೆ ಕಾಂಗ್ರೆಸ್‌ನಿಂದ ಸನ್ಮಾನ
Team Udayavani, Jun 20, 2020, 10:37 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಾಡಿ: ಪಟ್ಟಣ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳಿಂದ ಜೀವದ ಹಂಗು ತೊರೆದು ನಿರಂತರವಾಗಿ ಕೋವಿಡ್ ವೈರಸ್ ನಿಯಂತ್ರಣಕ್ಕಾಗಿ ಶ್ರಮಿಸುತ್ತ ಜನರ ಸೇವೆಯಲ್ಲಿರುವ ಕೋವಿಡ್ ವಾರಿಯರ್ಸ್‌ಗಳಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಅವರ 50ನೇ ಜನ್ಮ ದಿನಾಚರಣೆ ನಿಮಿತ್ತ ಶುಕ್ರವಾರ ಏರ್ಪಡಿಸಿದ್ದ ವೇದಿಕೆಯಲ್ಲಿ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ, ವೈದ್ಯರು, ಪೊಲೀಸರು ಹಾಗೂ ಪೌರ ಕಾರ್ಮಿಕರನ್ನು ಸಾಮೂಹಿಕವಾಗಿ ಸನ್ಮಾನಿಸಿ ಅವರ ಸೇವೆ ಸ್ಮರಿಸಲಾಯಿತು. ಈ ವೇಳೆ ಮಾತನಾಡಿದ ವಾಡಿ-ಶಹಾಬಾದ ನಗರ ಯೋಜನೆ ಪ್ರಾಧಿಕಾರ ಮಾಜಿ ಅಧ್ಯಕ್ಷ, ಬ್ಲಾಕ್ ಕಾಂಗ್ರೆಸ್ ಮುಖಂಡ ಚಂದ್ರಸೇನ ಮೇನಗಾರ, ಸಾಂಕ್ರಾಮಿಕ ರೋಗ ಕಟ್ಟಿಹಾಕಲು ಕೇಂದ್ರ ಸರಕಾರ ದೇಶದಲ್ಲಿ ಲಾಕ್‌ಡೌನ್ ಘೋಷಿಸಿದ್ದಾಗ ಇಡೀ ದೇಶದ ಜನರು ಮನೆಯಲ್ಲಿದ್ದರು. ಆದರೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ, ವೈದ್ಯರು, ಪೌರ ಕಾರ್ಮಿಕರು ಮತ್ತು ಪೊಲೀಸರು ಮನೆಯಿಂದ ಹೊರಬಂದು ಕೋವಿಡ್ ಕರ್ತವ್ಯದಲ್ಲಿದ್ದರು. ಪ್ರಾಣದ ಹಂಗು ತೊರೆದು ಸೋಂಕಿತರ ಮಧ್ಯೆ ಕರ್ತವ್ಯ ನಿರ್ವಹಿಸಿದ್ದಾರೆ. ಹಲವು ಕಡೆಗಳಲ್ಲಿ ಸೋಂಕಿತರ ಕುಟುಂಬಸ್ಥರ ದಾಳಿಗೆ ಗುರಿಯಾಗಿ ಜನರ ಆರೋಗ್ಯ ಸೇವೆಗೈದಿದ್ದಾರೆ. ಕ್ರಿಮಿನಾಶಕ ಸಿಂಪರಣೆ, ಸ್ವಚ್ಛತೆ, ಇತರ ಅಗತ್ಯತೆಗಳನ್ನು ಪೌರ ಕಾರ್ಮಿಕರು ಪೂರೈಸಿದ್ದಾರೆ. ಪೊಲೀಸರು ಅಚ್ಚುಕಟ್ಟಾಗಿ ಭದ್ರತೆ ಒದಗಿಸಿದ್ದಾರೆ. ಪರಿಣಾಮ ನಾವಿಂದು ಸುರಕ್ಷಿತರಾಗಿದ್ದೇವೆ ಎಂದು ಸ್ಮರಿಸಿದರು.
ಬ್ಲಾಕ್ ಕಾಂಗ್ರೆಸ್ ಹಿರಿಯ ಮುಖಂಡ ಟೋಪಣ್ಣ ಕೋಮಟೆ ಮಾತನಾಡಿದರು. ಕೇಂದ್ರ ಕಾರ್ಮಿಕ ಸಲಹಾ ಸಮಿತಿ ಮಾಜಿ ಸದಸ್ಯ ಭೀಮರಾವ ದೊರೆ, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುನಿತಾ ಸಾಲೋಮನ್, ಮುಸ್ಲಿಂ ಸಮಾಜದ ಅಧ್ಯಕ್ಷ ಮುಕ್ಬುಲ್ ಜಾನಿ, ಕೋಲಿ ಸಮಾಜದ ಅಧ್ಯಕ್ಷ ನಾಗೇಂದ್ರ ಜೈಗಂಗಾ, ಪುರಸಭೆ ಉಪಾಧ್ಯಕ್ಷ ಮಲ್ಲಯ್ಯ ಗುತ್ತೇದಾರ, ಸದಸ್ಯರಾದ ತಿಮ್ಮಯ್ಯ ಪವಾರ, ಮರಗಪ್ಪ ಕಲಕುಟಗಿ, ಸುಗಂಧಾ ಜೈಗಂಗಾ, ಡಾ.ಜುನೈದ್ ಖಾನ್, ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ, ಹಿರಿಯ ಆರೋಗ್ಯ ನೈರ್ಮಲ್ಯ ನಿರೀಕ್ಷಕ ಶರಣಪ್ಪ ಮಡಿವಾಳ, ಕಿರಿಯ ಆರೋಗ್ಯ ಸಹಾಯಕಿ ಅನಿತಾ ಮಲಗೊಂಡ, ಕಸಾಪ ಅಧ್ಯಕ್ಷ ಖೇಮಲಿಂಗ ಬೆಳಮಗಿ, ಸೂರ್ಯಕಾಂತ ರದ್ದೇವಾಡಿ, ಈಶ್ವರ ಅಂಬೇಕರ, ಕಾಶೀನಾಥ ಧನ್ನಿ, ಶೇಖ ಕರೀಮ ಪಾಲ್ಗೊಂಡಿದ್ದರು. ಇದೇ ವೇಳೆ ಸ್ಥಳೀಯ ಪತ್ರಕರ್ತರ ಸೇವೆಯನ್ನೂ ಗುರುತಿಸಿ ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.