ಯಾದಗಿರಿ: ತ್ರಿಶತಕದ ಗಡಿ ತಲುಪಿದ ಕೋವಿಡ್ ವೈರಸ್‌

ನಿನ್ನೆ9 ಜನರಲ್ಲಿ ಸೋಂಕು ಪತ್ತೆ , 299ಕ್ಕೆ ಏರಿಕೆಯಾದ ಸಂಖ್ಯೆ

Team Udayavani, Jun 4, 2020, 11:56 AM IST

04-June-08

ಯಾದಗಿರಿ: ಕೋವಿಡ್ ಮಹಾಮಾರಿ ಜಿಲ್ಲೆಯಲ್ಲಿ ರೌದ್ರ ನರ್ತನ ತೋರುತ್ತಿದ್ದು, ಬುಧವಾರ ಮತ್ತೆ 9 ಜನರಲ್ಲಿ ಒಕ್ಕರಿಸಿದೆ. ಇದೀಗ ಯಾದಗಿರಿಯಲ್ಲಿ ಸೋಂಕಿತರ ಸಂಖ್ಯೆ 299ಗೆ ಏರಿಕೆಯಾಗಿದ್ದು, ಈ ಹಿಂದೆ ಎರಡನೇ ಸ್ಥಾನಕ್ಕೇರಿದ್ದ ಜಿಲ್ಲೆ ಐದನೇ ಸ್ಥಾನಕ್ಕಿಳಿದು ತ್ರಿಶತಕದ ಹತ್ತಿರದಲ್ಲಿದೆ.

2 ವರ್ಷದ ಬಾಲಕ ಪಿ-3909 ಸೇರಿದಂತೆ 32 ವರ್ಷದ ಪುರುಷ ಪಿ-3901, 45 ವರ್ಷದ ಪುರುಷ ಪಿ-3902, 40 ವರ್ಷದ ಮಹಿಳೆ ಪಿ-3903, 28 ವರ್ಷದ ಮಹಿಳೆ ಪಿ-3904, 39 ವರ್ಷದ ಪುರುಷ ಪಿ-3905, 23 ವರ್ಷದ ಪುರು ಪಿ-3906, 46 ವರ್ಷದ ಪುರುಷ ಪಿ-3907 ಹಾಗೂ 36 ವರ್ಷದ ಮಹಿಳೆ ಪಿ-3908ರಲ್ಲಿ ಸೋಂಕು ಕಾಣಿಸಿದೆ. ಎಲ್ಲರೂ ಮಹಾರಾಷ್ಟ್ರದಿಂದ ಜಿಲ್ಲೆಗೆ ಹಿಂತಿರುಗಿದವರೇ ಆಗಿದ್ದಾರೆ.

ಬುಧವಾರದ 1040 ಜನರ ವರದಿ ನೆಗೆಟಿವ್‌ ಬಂದಿದ್ದು, ಈವರೆಗೆ 9114 ಮಾದರಿಗಳ ವರದಿ ನೆಗೆಟಿವ್‌ ಬಂದಿವೆ. 68 ಜನರ ಹೊಸ ಮಾದರಿ ಸಂಗ್ರಹಿಸಲಾಗಿದ್ದು, ಇನ್ನು 8621 ಜನರ ವರದಿ ಬರಬೇಕಿದೆ. ಜಿಲ್ಲೆಯಲ್ಲಿ ಕೋವಿಡ್‌19 ಖಚಿತಪಟ್ಟ ಸೋಂಕಿತರಲ್ಲಿ 28 ಜನ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 774 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2107 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 5 ಕಂಟೇನ್ಮೆಂಟ್‌ ಝೋನ್‌ ರಚಿಸಲಾಗಿದೆ.

ಹೊಸ ಜಿಲ್ಲಾಸ್ಪತ್ರೆಯಲ್ಲಿ 95 ಜನರು, ಶಹಾಪುರ ಕೊರೊನಾ ಕೇರ್‌ ಸೆಂಟರ್‌ನಲ್ಲಿ 61 ಜನ, ಸುರಪುರ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 14 ಹಾಗೂ ಏಕಲವ್ಯ ಕೊರೊನಾ ಕೇರ್‌ ಸೆಂಟರ್‌ನಲ್ಲಿ 90 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 67 ಸಾಂಸ್ಥಿಕ ಕ್ವಾರಂಟೈನ್‌ ಸೆಂಟರ್‌ಗಳಲ್ಲಿ ಒಟ್ಟು 3405 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ ತಿಳಿಸಿದ್ದಾರೆ.

ಸೋಂಕಿತರೆಲ್ಲರೂ ಜಿಲ್ಲೆಯ ಶಹಾಪುರ ತಾಲೂಕಿನವರಾಗಿದ್ದಾರೆ. ಕ್ರಮವಾಗಿ ನಾಲ್ವರು ದಾರಿಗುಡ್ಡ ಉಕ್ಕಿನಾಳ ತಾಂಡಾದವರಾಗಿದ್ದು, 2
ವರ್ಷದ ಬಾಲಕ ಸೇರಿದಂತೆ ಐವರು ಹಾಲಗೇರಾ ಗ್ರಾಮದವರಾಗಿದ್ದಾರೆ.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.