ಯಾದಗಿರಿ ಜಿಲ್ಲಾಡಳಿತದಿಂದ ನಿಯಮ ಇನ್ನಷ್ಟು ಬಿಗಿ
ಆದೇಶ ಪಾಲಿಸಲು ಕಟ್ಟುನಿಟ್ಟಿನ ಸೂಚನೆಸಂಜೆ 4ರ ವರೆಗೆ ಮಾತ್ರ ತರಕಾರಿ-ದಿನಸಿ ಲಭ್ಯ ಜಿಲ್ಲಾದ್ಯಂತ ಎಲ್ಲೆಡೆ ಕಟ್ಟೆಚ್ಚರ
Team Udayavani, Apr 7, 2020, 12:13 PM IST
ಯಾದಗಿರಿ: ಜಿಲ್ಲಾ ಕೇಂದ್ರದಲ್ಲಿ ತಳ್ಳುಗಾಡಿಗಳಲ್ಲಿ ತರಕಾರಿ ಮಾರುತ್ತಿದ್ದ ವ್ಯಾಪಾರಿಗಳು ಸಂಜೆ 4 ಗಂಟೆ ಸುಮಾರಿಗೆ ವ್ಯಾಪಾರ ಬಂದ್ ಮಾಡಿದರು.
ಯಾದಗಿರಿ: ಕೊರೊನಾ ಪರಿಣಾಮಕಾರಿಯಾಗಿ ತಡೆಗಟ್ಟಲು ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದು, ಹಂತ ಹಂತವಾಗಿ ನಿಯಮ ಬಿಗಿಗೊಳಿಸಿದೆ. ಇದೀಗ ಏ.6ರಿಂದ ಕೆಲವು ನಿಯಮಗಳನ್ನು ಪರಿಷ್ಕರಿಸಿ ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶ ಹೊರಡಿಸಿದೆ. ಜಿಲ್ಲೆಯಾದ್ಯಂತ ಬೆಳಗ್ಗೆ 4ರಿಂದ ಸಂಜೆ 4 ಗಂಟೆಯವರೆಗೆ ಮಾತ್ರ ದಿನಬಳಕೆಯ ದಿನಸಿ, ತರಕಾರಿ, ಹಣ್ಣು-ಹಂಪಲುಗಳ ಅಂಗಡಿಗಳು ತೆರೆದಿರಲಿವೆ. ಇತರೆ ಅಂಗಡಿ-ಮುಂಗಟ್ಟುಗಳನ್ನು ತೆರೆಯುವುದನ್ನು ನಿಷೇಧಿ ಸಲಾಗಿದೆ.
ಕಲಬುರಗಿ ಜಿಲ್ಲೆಯಲ್ಲಿ ಕೋವಿಡ್-19ಗೆ ಒಬ್ಬರು ಮೃತಪಟ್ಟು ಹಾಗೂ ನಾಲ್ವರಲ್ಲಿ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹಾಗೂ ಜಿಲ್ಲೆಯ ನೆರೆ ರಾಜ್ಯಗಳ ಜಿಲ್ಲೆಗಳಲ್ಲಿ ಕೋವಿಡ್-19 ಕೊರೊನಾ ವೈರಾಣು ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವುದರಿಂದ ಏ.14ರ ಮಧ್ಯರಾತ್ರಿಯವರೆಗೆ ಜಿಲ್ಲೆಯ ಸಾರ್ವಜನಿಕರು ಅನುಸರಿಸಬೇಕಾದ ಅನುಸರಣ ಕ್ರಮಗಳನ್ನು ವಿಧಿಸಲಾಗಿದೆ.
ಈ ಹಿಂದೆ ಕೊರೊನಾ ವೈರಸ್ ಸೋಂಕಿನಿಂದಾಗಿ ಸಂಭವಿಸಬಹುದಾದ ಅನಾಹುತ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮಾ.21ರಿಂದ 31ರ ವರೆಗೆ ಕೈಗೊಳ್ಳಲಾಗಿದ್ದ ಕ್ರಮಗಳನ್ನು ಏ.14ರ ಮಧ್ಯರಾತ್ರಿಯವರೆಗೆ ಮುಂದುವರಿಸಲಾಗಿದೆ. ಪೆಟ್ರೋಲ್ ಬಂಕ್‌ಗಳು ಖಾಸಗಿ ವಾಹನಗಳಿಗೆ ಬೆಳಗ್ಗೆ 4 ಗಂಟೆಯಿಂದ ಸಂಜೆ 4ರ ವರೆಗೆ ಮಾತ್ರ ಇಂಧನ ವಿತರಿಸಬೇಕು. ಸರಕು ಸಾಗಾಣಿಕೆ ವಾಹನಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ.
ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಪ್ರತಿ ಮನೆಯಿಂದ ಓರ್ವ ಆರೋಗ್ಯವಂತ ವ್ಯಕ್ತಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಗುಂಪುಗೂಡದೇ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.
ಸಮಯ ನಿಗದಿಪಡಿಸಲಾಗಿದ್ದರೂ ನಿಷೇಧಾಜ್ಞೆ ಸಮಯದಲ್ಲಿ ಸಾರ್ವಜನಿಕರು ವಿನಾಕಾರಣ ತಿರುಗಾಡುವುದು, ಗುಂಪುಗೂಡುವಂತಿಲ್ಲ. ಅಂಗಡಿ ಮುಂದೆ ಜನಸಂದಣಿ ಸೇರದಂತೆ ವ್ಯಕ್ತಿಯಿಂದ ವ್ಯಕ್ತಿಗೆ 1 ಮೀ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಗುರುತು ಮಾಡುವ ಬಗ್ಗೆ ಕ್ರಮ ವಹಿಸುವುದು. ಇಲ್ಲದಿದ್ದಲ್ಲಿ ಅಂತಹ
ಅಂಗಡಿ ಮಾಲೀಕರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಈ ಆದೇಶವು ಆಸ್ಪತ್ರೆ ಸೇವೆಗಳು, ಪಶು ಆಸ್ಪತ್ರೆಗಳು, ಔಷಧ ಅಂಗಡಿಗಳು, ಸಿಲಿಂಡರ್ ವಿತರಣಾ ವ್ಯವಸ್ಥೆ, ದಿನ ಪತ್ರಿಕೆಗಳ ವಿತರಣೆ, ಬ್ಯಾಂಕ್/ಎ.ಟಿ.ಎಂ. ಗಳು, ಗೃಹ ಬಳಕೆಯ ಇಂಧನದ ಟ್ಯಾಂಕರ್ ಗಳು, ಪಡಿತರ ವಿತರಣೆ ಹಾಗೂ ಶವ ಸಂಸ್ಕಾರ ಇತ್ಯಾದಿ ಸೇವೆಗಳು ಹಾಗೂ ತುರ್ತು ಸೇವೆಗಳಿಗೆ ಅನ್ವಯವಾಗಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಮೈಕ್ ಮೂಲಕ ಜಾಗೃತಿ: ಜಿಲ್ಲಾಡಳಿತ ನಿಯಮಗಳನ್ನು ಸಾರ್ವಜನಿಕರು ಪಾಲಿಸುವ ನಿಟ್ಟಿನಲ್ಲಿ ಅಧಿ ಕಾರಿಗಳು ವಾಹನದಲ್ಲಿ ಮೈಕ್ ಮೂಲಕ ಜಾಗೃತಿ ಮೂಡಿಸಿದರು. ಪೆಟ್ರೋಲ್ ಬಂಕ್‌ನಲ್ಲಿ ಸಂಜೆ 4 ಗಂಟೆವರೆಗೆ ಮಾತ್ರ ಇಂಧನ ವಿತರಿಸುವಂತೆ ಸೂಚಿಸಿದರು. ತರಕಾರಿ ಮಾರಾಟ ಸ್ಥಳಕ್ಕೆ ತೆರಳಿ ತಿಳಿಸಿದ ಬಳಿಕ ಎಲ್ಲಾ ತರಕಾರಿ ಮಾರಾಟಗಾರರು ತಳ್ಳುಗಾಡಿಗಳನ್ನು ಬಂದ್ ಮಾಡುತ್ತಿರುವುದು ಕಂಡು ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.