ಡಿಕೆಶಿ ಅಧ್ಯಕ್ಷರಾದ ಮೇಲೆ ಹೊಸ ಹುರುಪು
Team Udayavani, Jun 29, 2020, 6:23 AM IST
ಮೈಸೂರು: ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿ ಕೊಂಡ ಮೇಲೆ ಪಕ್ಷಕ್ಕೆ ಮತ್ತಷ್ಟು ಚೈತನ್ಯ ಬರುವ ಜೊತೆಗೆ ಕಾರ್ಯಕರ್ತರಲ್ಲಿ ಮತ್ತಷ್ಟು ಹುರುಪು ಬರಲಿದೆ ಎಂದು ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದ ಹಿನ್ನೆಲೆ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಪೂರ್ವಸಿದ್ದತಾ ಸಭೆಯಲ್ಲಿ ಮಾತನಾಡಿದರು.
ಇಂದು ಈ ರಾಜ್ಯ ದೇಶವನ್ನು ಅಧೋಗತಿಗೆ ತಳ್ಳುತ್ತಿರುವ ಬಿಜೆಪಿ ಸರ್ಕಾರದ ಧೋರಣೆ, ತಪ್ಪು ನಿರ್ಧಾರಗಳನ್ನು ವಿರೋಧಪಕ್ಷವಾಗಿ ನಾವು ಖಂಡಿಸ ಬೇಕಿದೆ ಎಂದರು. ಬಿಜೆಪಿ ಸರ್ಕಾರ ಭೂ ಸುಧಾರಣಾ ಕಾಯ್ದೆ ತಿದ್ದು ಪಡಿ ತಂದು ಉಳ್ಳವರಿಗೆ ಭೂಮಿ ನೀಡಲು ಹೊರಟಿದೆ. ಇದು ರೈತರಿಗೆ ದ್ರೋಹ ಬಗೆದು ಉಳ್ಳವರು ಆಸ್ತಿ ಕಬಳಿಸುವ ತಂತ್ರವಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್ 19 ಪರಿಹರಿಸುವಲ್ಲಿ ಸಂಪೂರ್ಣವಾಗಿ ವಿಫಲ ವಾಗಿದ್ದು ಇವೆಲ್ಲವನ್ನೂ ನಮ್ಮ ಕಾರ್ಯಕರ್ತರು ಜನತೆಗೆ ತಿಳಿಸಬೇಕು ಎಂದು ಹೇಳಿದರು. ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಪದ ಗ್ರಹಣ ಕಾರ್ಯಕ್ರಮ ಪ್ರತಿ ಗ್ರಾಮ, ವಾರ್ಡ್‌ಗಳಲ್ಲಿ ಎಲ್ಲರೂ ನೋಡುವ ವ್ಯವಸ್ಥೆ ಮಾಡಲಾಗುವುದು. ಪ್ರತಿಯೊಬ್ಬರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶುಭ ಹಾರೈಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಆತ್ಮಾನಂದ, ಕಾಂಗ್ರೆಸ್ ಕೆ.ಆರ್.ಕ್ಷೇತ್ರದ ಉಸ್ತುವಾರಿ ಚಂದ್ರಶೇಖರ್, ರಾಘವೇಂದ್ರ, ನಗರಾಧ್ಯಕ್ಷ ಆರ್.ಮೂರ್ತಿ, ಎಂಸಿಡಿಸಿಸಿ ಮಾಜಿ ಅಧ್ಯಕ್ಷ ಚಂದ್ರಶೇಖರ್, ಪುಷ್ಪಲತಾ, ವೀಣಾ, ರವಿ ಶಂಕರ್, ಶ್ರೀನಾಥ್ ಬಾಬು, ಸುಜಾತ ರಾವ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.