ಡಿಕೆಶಿ ಪದಗ್ರಹಣ ಕಣ್ತುಂಬಿಕೊಂಡ ಕಾರ್ಯಕರ್ತರು
Team Udayavani, Jul 3, 2020, 5:26 AM IST
ಮೈಸೂರು: ನಗರ ಸೇರಿದಂತೆ ಜಿಲ್ಲೆಯ ಸಹಸ್ರಾರು ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರ ಸಮಾರಂಭ ನೇರ ಪ್ರಸಾರ ವೀಕ್ಷಣೆ ಜತೆಗೆ ಏಕಕಾಲದಲ್ಲಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ನಗರದ ಕಾಂಗ್ರೆಸ್ ಕಚೇರಿ ಸೇರಿದಂತೆ ಜಿಲ್ಲೆಯ 260ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ ಕಾರ್ಯಕ್ರಮವನ್ನು ಕಣ್ತುಂಬಿಕೊಂಡು ಜೈಕಾರ ಕೂಗಿ ಸಂಭ್ರಮ ಆಚರಿಸಿದರು. ಕಾಂಗ್ರೆಸ್ ಭವನದ ವೇದಿಕೆ ಮುಂಭಾಗದಲ್ಲಿ ಎರಡು ಬೃಹತ್ ಪರದೆ ಅಳವಡಿಸಲಾಗಿತ್ತು.
ಒಂದರಲ್ಲಿ ಜೂಮ್ ಆ್ಯಪ್ ಮೂಲಕ ಲೈವ್ ಕಾರ್ಯಕ್ರಮ ಹಾಗೂ ಇನ್ನೊಂದರಲ್ಲಿ ಟಿವಿ ಚಾನಲ್ ಗಳಲ್ಲಿ ಬಿತ್ತರವಾಗುತ್ತಿದ್ದ ನೇರ ಪ್ರಸಾರ ಕಾರ್ಯಕ್ರಮವೂ ಪ್ರದರ್ಶಿಸಲಾಯಿತು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ವಿಜಯಕುಮಾರ್ ಸಂವಿಧಾನದ ಪೀಠಿಕೆ ಹಾಗೂ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ ಪ್ರತಿಜ್ಞಾ ವಿಧಿ ಬೋಧಿಸಿದರು. ಸಮಾರಂಭದಲ್ಲಿ ಮಾಜಿ ಸಂಸದ ಕಾಗಲವಾಡಿ ಎಂ. ಶಿವಣ್ಣ, ಮಾಜಿ ಶಾಸಕ ವಾಸು, ಕೆಪಿಸಿಸಿ ವಕ್ತಾರರಾದ ವೆಂಕಟೇಶ್, ಲಕ್ಷ್ಮಣ, ಮಂಜುಳಾ ಮಾನಸ, ಮುಖಂಡರಾದ ಆತ್ಮಾನಂದ, ಶಿವಣ್ಣ, ಶಂಕರೇಗೌಡ, ಪುಷ್ಪಲತಾ ಚಿಕ್ಕಣ್ಣ ಇತರರು ಭಾಗವಹಿಸಿದ್ದರು.
ವಿಶೇಷ ಪೂಜೆ: ನಗರದ ಅಗ್ರಹಾರ ವೃತ್ತದಲ್ಲಿರುವ 101 ಗಣಪತಿ ದೇವಸ್ಥಾನದಲ್ಲಿ ಡಿಕೆಶಿ ಅಭಿಮಾನಿ ಬಳಗದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಶ್ರೀನಾಥ್ ಬಾಬು, ವಿಶೇಷ ಪೂಜೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.