![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 8, 2020, 5:54 AM IST
ಮೈಸೂರು: ವ್ಯಾಪಾರ ವಹಿವಾಟು ಸಂದರ್ಭದಲ್ಲಿ ವರ್ತಕರು, ಗ್ರಾಹಕರು ಕಡ್ಡಾಯ ಮಾಸ್ಕ್ ಹಾಕುವ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಶಾಸಕ ರಾಮದಾಸ್ ಹೇಳಿದರು. ನಂಜುಮಳಿಗೆ ತರಕಾರಿ ಮಾರುಕಟ್ಟೆಯಲ್ಲಿ ಕೋವಿಡ್ 19 ಸೋಂಕು ಹರಡದಂತೆ ಥರ್ಮಲ್ ಸ್ಕ್ಯಾನಿಂಗ್ ಮತ್ತು ಮಾಸ್ಕ್ ಹಾಕುವಂತೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ವ್ಯಾಪಾರ ವಹಿವಾಟು ನಡೆಸುವ ಸಂದರ್ಭದಲ್ಲಿ ಎಲ್ಲರೂ ಎಚ್ಚರಿಕೆ ತೆಗೆದುಕೊಳ್ಳಬೇಕಾದ ಅವಶ್ಯಕತೆ ಇದೆ. ಅದರಲ್ಲೂ ಬೀದಿ ಬದಿಯಲ್ಲಿ ಕುಳಿತು ವ್ಯಾಪಾರ ಮಾಡುವವರು ಪ್ರತಿದಿನ ನೂರಾರು ಜನರ ಜತೆ ಸಂಪರ್ಕ ಹೊಂದಿರುತ್ತಾರೆ. ಹಾಗಾಗಿ ವರ್ತಕರು, ಗ್ರಾಹಕರಿಗೆ ಪ್ರಾಥಮಿಕ ಪರೀಕ್ಷೆ ಮಾಡುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಿದ್ದೇವೆ ಎಂದರು.
ಪ್ರತಿದಿನ ವ್ಯಾಪಾರ ಮಾಡುವ ಒಂದೊಂದು ಪ್ರದೇಶದಲ್ಲಿ ಜಾಗೃತಿ ಮೂಡಿಸ ಲಾಗುವುದು. ಮೈಸೂರು ಜನತೆ ಅನಾವ ಶ್ಯಕವಾಗಿ ಓಡಾಡುವುದು ಕಡಿಮೆ ಮಾಡಬೇಕು. ಮಕ್ಕಳಲ್ಲಿ, ವಯಸ್ಸಾದವರಲ್ಲಿ ಕೋವಿಡ್ 19 ಕೇಸ್‌ಗಳು ಹೆಚ್ಚಾಗುತ್ತಿದ್ದು, ಈ ಬಗ್ಗೆ ಜನರು ಎಚ್ಚರ ವಹಿಸಬೇಕು ಎಂದರು. ಕಾರ್ಯಕ್ರಮದಲ್ಲಿ ನಗರ ಪಾಲಿಕೆ ಸದಸ್ಯೆ ಪಲ್ಲವಿ ಬೇಗಂ, ಎಸಿಪಿ ಪೂರ್ಣಚಂದ್ರ ತೇಜಸ್ವಿ, ಪೊಲೀಸ್ ನಿರೀಕ್ಷಕರಾದ ಶ್ರೀನಿವಾಸ್, ವೆಂಕಟೇಶ್, ವಿನಯ್ ಇತರರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.