ಎಪಿಎಂಸಿಯಿಂದಲೇ ತರಕಾರಿ ಖರೀದಿಸಿ: ಸಚಿವ
Team Udayavani, Apr 16, 2020, 1:05 PM IST
ಸಾಂದರ್ಭಿಕ ಚಿತ್ರ
ಮೈಸೂರು: ಲಾಕ್‌ಡೌನ್ ಹಿನ್ನಲೆಯಲ್ಲಿ ಹಾಪ್‌ಕಾಮ್ಸ್ ಮತ್ತು ಎಂಪಿಎಂಸಿ ಮಾರುಕಟ್ಟೆಯಲ್ಲಿನ ತರಕಾರಿ ದರ ಸಮರ ದಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ತಪ್ಪಿಸಲಾಗುವುದು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಮೈಸೂರಿನ ಜಿಪಂ ಸಭಾಂಗಣದಲ್ಲಿ ಬುಧವಾರ ಎಂಪಿಎಂಸಿ ವರ್ತಕರು, ದಲ್ಲಾಳಿಗಳು ಮತ್ತು ರೈತ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿ, ಎಪಿಎಂಸಿಯಲ್ಲಿ ಮಾರಾಟವಾಗುವ ತರಕಾರಿ ದರಕ್ಕಿಂತ ಹಾಪ್‌ಕಾಮ್ಸ್‌ನಲ್ಲಿ ಮಾರಾಟವಾಗುವ ತರಕಾರಿ ಬೆಲೆ ದುಬಾರಿಯಾಗಿದ್ದು, ಇದರಿಂದ ಗ್ರಾಹಕರಿಗೆ ಸಮಸ್ಯೆಯಾಗಿದೆ. ಈ ಹಿನ್ನಲೆ ಯಲ್ಲಿ ಹಾಪ್‌ಕಾಮ್ಸ್ ಕೂಡ ರೈತರಿಂದ ನೇರವಾಗಿ ಖರೀದಿ ಮಾಡದೇ ಎಪಿಎಂಸಿ ಮೂಲಕ ಖರೀದಿ ಮಾಡಿ, ಆ ಮೂಲಕ ಹಾಪ್ ಕಾಮ್ಸ್‌ನ ಮಳಿಗೆಗಳಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಬೇಕು ಎಂದು ಸೂಚನೆ ನೀಡಿದರು. ಇದಕ್ಕೂ ಮುನ್ನ ಶಾಸಕ ರಾಮದಾಸ್ ಮಾತನಾಡಿ, ಹಾಪ್‌ಕಾಮ್ಸ್ ನಲ್ಲಿ ದುಬಾರಿ ಬೆಲೆಗೆ ತರಕಾರಿ, ಹಣ್ಣು ಮಾರಾಟವಾಗುತ್ತಿದ್ದು, ಎಂಪಿಎಂಸಿಯಲ್ಲಿನ ತರಕಾರಿ ದರಕ್ಕಿಂತ ಹೆಚ್ಚಾಗಿದೆ. ಇದರಿಂದ ಗ್ರಾಹಕರಿಗೆ
ತೊಂದರೆಯಾಗಿದೆ. ಆದ್ದರಿಂದ ಹಾಪ್ ಕಾಮ್ಸ್ ಕೂಡ ಎಪಿಎಂಸಿಯಿಂದಲ್ಲೇ ತರಕಾರಿ ಖರೀದಿ ಮಾಡಿ ಮಾರಾಟಬೇಕು ಎಂದು ಸಲಹೆ ನೀಡಿದರು.
ಮೈಸೂರಿನ ಎಂಪಿಎಂಸಿಯ ತರಕಾರಿ ಮಾರುಕಟ್ಟೆಗೆ ನಿತ್ಯ 50ರಿಂದ 60 ಸಾವಿರ ಟನ್ ತರಕಾರಿ ಬರುತ್ತಿದ್ದು, ಶೇ.90ರಷ್ಟು ಕೇರಳಕ್ಕೆ ರವಾನೆಯಾಗುತ್ತಿದೆ. ಕೇರಳಕ್ಕೆ ಸಂಚಾರ ನಿರ್ಬಂಧಿಸಿದರೆ ರೈತರಿಗೆ ಸಮಸ್ಯೆಯಾಗಲಿದೆ. ಬೆಲೆ ಪಾತಾಳಕ್ಕೆ ಇಳಿಯಲಿದೆ ಎಂದು ರೈತರು ಸೇರಿದಂತೆ ಕೆಲ ವರ್ತಕರು ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಸಚಿವರು, ಸದ್ಯಕ್ಕೆ ಕೇರಳಕ್ಕೆ ತರಕಾರಿ ರವಾನೆಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಆದರೆ ದೊಡ್ಡ ವಾಹನಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ತರಕಾರಿ ರವಾನಿಸುವ ಮೂಲಕ ವಾಹನ ಸಂಚಾರವನ್ನು ಕಡಿಮೆ ಮಾಡಬೇಕು. ಅಲ್ಲದೇ ಸೋಂಕು ತಡೆಗೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.