ದೇಗುಲಗಳ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

Team Udayavani, Jun 25, 2020, 5:07 AM IST

kota poojary

ಮೈಸೂರು: ದೇವಸ್ಥಾನಗಳಲ್ಲಿ ಜೀರ್ಣೋದ್ಧಾರ ಸೇರಿದಂತೆ ಇನ್ನಿತರ ಕಾಮಗಾರಿಗಳು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ  ಅಧಿಕಾರಿಗಳಿಗೆ ಸೂಚಿಸಿದರು. ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ವಾರ್ಷಿಕವಾಗಿ 25 ಲಕ್ಷಕ್ಕಿಂತ ಹೆಚ್ಚು ಆದಾಯ ಗಳಿಸುವ ದೇವಸ್ಥಾನಗಳನ್ನು ಬಿ ದರ್ಜೆಯಿಂದ ಎ ದರ್ಜೆಗೆ  ಒಳಪಡಿಸಬೇಕು.

ಈ ನಿಟ್ಟಿನಲ್ಲಿ ತಿ.ನರಸೀಪುರ ತಾಲೂಕು ಮೂಗೂರಿನ ತ್ರಿಪುರ ಸುಂದರಮ್ಮ ದೇವಸ್ಥಾನ ಸೇರಿಸಲು ಅಧಿಕಾರಿಗಳಿಗೆ ಸೂಚಿಸಿದರು. ಮುಜರಾಯಿ ಇಲಾಖೆಗೆ ಒಳಪಟ್ಟ ಪ್ರತಿಯೊಂದು ದೇವಸ್ಥಾನದಲ್ಲಿ  ವಂಶಪಾರಂಪರ್ಯವಾಗಿ ಪೂಜೆ ಮಾಡುತ್ತಿರುವ ಅರ್ಚಕರಿಗೆ ಆಗಮಶಾಸOಉ ಕಲಿಯಬೇಕೆಂಬ ಕಡ್ಡಾಯ ನೀತಿ ರದ್ದುಗೊಳಿಸಲು ಚಿಂತಿಸಲಾಗಿದೆ. ಇದರಿಂದ “ಸಿ’ ದರ್ಜೆಗೆ ಒಳಪಡುವ ಸಣ್ಣಪುಟ್ಟ ದೇವಾಲಯದ ಆರ್ಚಕರಿಗೆ  ಉಪಯೋಗವಾಗಲಿದೆ ಎಂದು ತಿಳಿಸಿದರು.

ಎಲ್ಲಾ ದೇವಸ್ಥಾನಗಳಿಗೂ ಆಡಳಿತಾಧಿಕಾರಿ: ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ 34 ಸಾವಿರ ಆಸ್ಪತ್ರೆಗಳಿಗೂ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ. ಆಷಾಢ ಮಾಸದಲ್ಲೂ ಎಲ್ಲಾ ದೇವಸ್ಥಾನಗಳೂ ಕಟ್ಟುನಿಟ್ಟಾಗಿ  ಮುಂಜಾಗ್ರತಾ ಕ್ರಮಗಳನ್ನು ಅನುಸರಿ ಸಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.

ಪಿಡಿಒ, ಇಒ ಉಸ್ತುವಾರಿ: ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕೆರೆಗಳನ್ನು ಪಂಚಾಯತಿ ಸುಪರ್ದಿಯಲ್ಲಿ ನಿರ್ವಹಣೆ ಮಾಡಬೇಕು. ಇದರ ಮೇಲ್ವಿಚಾರಕ ರಾಗಿ ಪಿಡಿಒ ಹಾಗೂ ಇಒಗಳ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸಬೇಕು. ಇದರಲ್ಲಿ ನಮ್ಮ ಇಲಾಖೆ  ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದರು. ಸಭೆಯಲ್ಲಿ ಶಾಸಕರಾದ ರಾಮದಾಸ್‌, ನಾಗೇಂದ್ರ, ಹರ್ಷವರ್ಧನ, ಅಶ್ವಿ‌ನ್‌ ಕುಮಾರ್‌, ಮಂಜುನಾಥ್‌, ಜಿಲ್ಲಾಧಿಕಾರಿ ಅಭಿರಾಮ್‌  ಶಂಕರ್‌, ಜಿಪಂ ಸಿಇಒ ಪ್ರಶಾಂತ್‌ ಕುಮಾರ್‌ ಮಿಶ್ರಾ, ಉಪ ವಿಭಾಗಾಧಿಕಾರಿ ಡಾ.ವೆಂಕಟರಾಜು ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಮೀನುಗಾರಿಗೂ ಕಿಸಾನ್‌ ಕಾರ್ಡ್‌: ಮೀನುಗಾರರಿಗೂ ಮೀನುಗಾರಿಕೆ ಕಿಸಾನ್‌ ಕಾರ್ಡ್‌ ನೀಡುವ ಯೋಜನೆ ಶೀಘ್ರದಲ್ಲೇ ಜಾರಿಗೆ ತರಲಾಗುತ್ತದೆ ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಸುದ್ದಿಗಾರರೊಂದಿಗೆ  ಮಾತನಾಡಿ, ಮೀನುಗಾರರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕಾರ್ಡ್‌ ಪಡೆಯಬಹುದು.

ಕರಾವಳಿ ಕರ್ನಾಟಕ, ಒಳನಾಡು ಸೇರಿದಂತೆ ಒಟ್ಟು ಸುಮಾರು 28 ಸಾವಿರ ಕೆರೆಗಳಿವೆ. ಆ ಕೆರೆಗಳನ್ನು ನಿರ್ವಹಣೆ ಮಾಡಲು ನಿರುದ್ಯೋಗಿಗಳು,  ಬಡವರು ನಿರ್ವಹಣೆ ಮಾಡಲು ಮುಂದೆ ಬಂದರೆ ಅವರಿಗೆ ಈ ಕಾರ್ಡ್‌ ನೀಡಿ ಉತ್ತೇಜನ ನೀಡಲಾಗುತ್ತದೆ. ಮೀನುಗಾರಿಕೆಯಲ್ಲಿ ತೊಡಗಿರುವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ 50 ಸಾವಿರ ರೂ.ವರೆಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ  ಸಾಲ ನೀಡಲಾಗುತ್ತದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.