ಐವರಲ್ಲಿ ಕೋವಿಡ್ 19 ಸೋಂಕು ಪತ್ತೆ
Team Udayavani, Jun 12, 2020, 5:43 AM IST
ಮೈಸೂರು: ಮಹಾರಾಷ್ಟ್ರದಿಂದ ವಾಪಸ್ಸಾಗಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದ ಐವರ ಪುರುಷರಿಗೆ ಸೋಂಕು ದೃಢಪಟ್ಟಿದ್ದು, ಮೈಸೂರಿನಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 106ಕ್ಕೇರಿದೆ. ಕಳೆದೆರಡು ದಿನಗಳಿಂದ ಮೈಸೂರಿನಲ್ಲಿ ಯಾವುದೇ ಹೊಸ ಪ್ರಕರಣ ದಾಖಲಾಗಿರಲಿಲ್ಲ. ಇದೀಗ ಒಂದೇ ದಿನ ಐವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಮಹಾರಾಷ್ಟ್ರದಿಂದ ವಾಪಸ್ಸಾಗಿ ಕ್ವಾರಂಟೈನ್‌ನಲ್ಲಿದ್ದ ಐವರು ಪುರುಷರಲ್ಲಿ ಸೋಂಕು ಪತ್ತೆಯಾಗಿದೆ.
ಐವರನ್ನೂ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಐವರು ಕ್ವಾರಂಟೈನ್‌ನಲ್ಲಿದ್ದರಿಂದ ಸಮುದಾಯಕ್ಕೆ ಸೋಂಕು ಹರಡುವ ಭೀತಿ ಇಲ್ಲ. ಹೀಗಾಗಿ ಸಾರ್ವಜನಿಕರು ಆತಂಕ ಪಡಬೇಕಿಲ್ಲ. ಜಿಲ್ಲೆಯಲ್ಲಿ ಈವರೆಗೆ 106 ಸೋಂಕು ಪ್ರಕರಣಗಳು ವರದಿಯಾಗಿವೆ. ಈಗಾಗಲೇ 96 ಮಂದಿ ಗುಣಮುಖರಾಗಿ ಮನೆ ಸೇರಿದ್ದಾರೆ. ಸದ್ಯ 10 ಮಂದಿ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಸೂರಿಗೂ ಮುಂಬೈ ಕಂಟಕ: ರಾಜ್ಯದಲ್ಲಿ ಸೋಂಕು ಕಾಣಿಸಿಕೊಂಡಾಗ ಬೆಂಗಳೂರಿನ ಬಳಿಕ ಮೈಸೂರಿನಲ್ಲಿ ಹೆಚ್ಚು ಸೋಂಕಿತರಿದ್ದರು. ಆದರೆ ಜಿಲ್ಲಾ ಡಳಿತ ಕೈಗೊಂಡ ಕಟ್ಟುನಿಟ್ಟಿನ ಕ್ರಮ ಗಳಿಂದಾಗಿ ಸೋಂಕಿತರ ಸಂಖ್ಯೆ ನೂರರ ಗಡಿ ದಾಟದಂತೆ ನೋಡಿಕೊಳ್ಳಲಾಗಿತ್ತು. ಎರಡೇ ತಿಂಗಳಲ್ಲಿ ಎಲ್ಲಾ 90 ಮಂದಿ ಗುಣಮುಖವಾಗಿ ಜಿಲ್ಲೆ ಕೊರೊನಾ ಮುಕ್ತವಾಗಿತ್ತು.
ಆದರೆ, ಮೈಸೂರು ಭಾಗದ ಹಾಸನ, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಿಗೆ ಕಂಟಕವಾಗಿದ್ದ ಮಹಾರಾಷ್ಟ್ರದಿಂದ ಆಗಮಿಸುವ ವಲಸಿಗರ ಸೋಂಕು ಈಗ ಮೈಸೂರಿಗೂ ಕಂಟಕವಾಗುತ್ತಿದೆ. ಈಗಿರುವ ಸಕ್ರಿಯ ಸೋಂಕಿತರಲ್ಲಿ ಹೆಚ್ಚಿನವರು ಮಹಾರಾಷ್ಟ್ರ ದಿಂದ ವಾಪಸಾದವರಾಗಿದ್ದಾರೆ. ಇದ ರಿಂದ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.