ಕೋವಿಡ್‌ 19 ವೈರಸ್‌ನಿಂದ ಉದ್ಯಮಕ್ಕೆ ಸಂಕಷ್ಟ


Team Udayavani, May 20, 2020, 6:09 AM IST

sankashat

ಮೈಸೂರು: ಲಾಕ್‌ಡೌನ್‌ ಪರಿಣಾಮ ಹೋಟೆಲ್‌ ಉದ್ಯಮಕ್ಕೆ ನಷ್ಟ ಎದುರಾಗಿರುವ ಬೆನ್ನಲ್ಲೆ ಮೈಸೂರಿನ ಪ್ರತಿಷ್ಠಿತ ಸದರನ್‌ ಸ್ಟಾರ್‌ ಹೋಟೆಲ್‌ ಸ್ಥಗಿತವಾಗಿದೆ. ಇದರಿಂದ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ನೌಕರರು ಕೆಲಸ  ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೋಟೆಲ್‌ ಮಾಲೀಕ ಜೈರಾಜ್ ಮಾತನಾಡಿ, ಕೋವಿಡ್‌ 19ದಿಂದ ಹೋಟೆಲ್‌ಗೆ ಹೊಡೆತ ಬಿದ್ದಿದೆ.

ಇದರಿಂದ ಸದ್ಯಕ್ಕೆ ಚೇತರಿಸಿ ಕೊಳ್ಳುವುದು ಕಷ್ಟ. ಅಲ್ಲದೆ, ಸರ್ಕಾರ ನಮಗೆ ಸಹಾಯ  ಮಾಡುವ ಸ್ಥಿತಿಯಲ್ಲಿ ಇಲ್ಲ. ಹೋಟೆಲ್‌ ನಡೆಸಿದರೂ ಸಾಕಷ್ಟು ನಿಬಂಧನೆಗಳು, ಅಪ್ರಸ್ತುತ ಮಾರ್ಗಸೂಚಿಗಳನ್ನು ಅನುಸರಿಸ ಬೇಕಿರುವುದ ರಿಂದ ಮತ್ತಷ್ಟು ನಷ್ಟ ಅನುಭವಿಸಬೇಕಾಗುತ್ತದೆ. ಹೀಗಾಗಿ ಹೋಟೆಲ್‌ ಮುಚ್ಚಲಾಗುತ್ತಿದೆ ಎಂದು  ತಿಳಿಸಿದ್ದಾರೆ.

ಬಾಗಿಲು ಮುಚ್ಚಿದ ರೀಡ್‌ ಅಂಡ್‌ ಟೇಲರ್‌: ಆರ್ಥಿಕ ಸಂಕಷ್ಟದಿಂದ ನಂಜನಗೂಡು ತಾಲೂಕಿನ ತಾಂಡ್ಯ ಕೈಗಾರಿಕಾ ವಲಯದಲ್ಲಿರುವ ಆರ್‌ ಟಿಐಎಲ್‌ (ರೀಡ್‌ ಅಂಡ್‌ ಟೇಲರ್‌) ಬಟ್ಟೆ ಕಾರ್ಖಾನೆ ಬಾಗಿಲು ಮುಚ್ಚಿದೆ. ಇದರಿಂದ ಸಾವಿರಾರು ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ. ಎಸ್‌.ಕುಮಾರ್‌ ಈ ಕಾರ್ಖಾನೆಯನ್ನು ಆರ್‌ ಟಿಐಎಲ್‌ಗೆ ಮಾರಾಟ ಮಾಡಿದ್ದರು. ನಿತಿನ್‌ ಎಸ್‌.ಕಾಸ್ಥಿವಾಲ್‌ ಈ ಕಾರ್ಖಾನೆ ಮಾಲೀಕರಾಗಿದ್ದರು.

ಕಳೆದ 3 ವರ್ಷಗಳ ಹಿಂದೆ ಕಾರ್ಖಾನೆಯನ್ನು 4500 ಕೋಟಿಗೆ ಮಾರಾಟಕ್ಕೆ ಮುಂದಾಗಿದ್ದರು. ಆದರೆ, ಖರೀದಿಸಲು ಯಾರೂ ಬಾರದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಲಿಕ್ವಿಡೇಟರ್‌ ಆಗಿ ರವಿ ಶಂಕರ್‌ ದೇವರಕೊಂಡ ನೇಮಕವಾಗಿದ್ದರು. ಅವರ ಆಡಳಿತದಲ್ಲೇ ಕಳೆದ 3  ವರ್ಷಗಳಿಂದ ಕಾರ್ಖಾನೆ ನಡೆಯುತ್ತಿದ್ದರೂ, ಆರ್ಥಿಕ ಸಂಕಷ್ಟದಿಂದ ಪಾರಾ ಗಲು ಸಾಧ್ಯವಾಗಲಿಲ್ಲ. ಹೀಗಾಗಿ, ಕಾರ್ಖಾನೆ ಮುಚ್ಚುವಂತೆ ಲಿಕ್ವಿಡೇಟರ್‌ ಆದೇಶಿಸಿದ್ದಾರೆ.

ಕಾರ್ಖಾನೆ ಸ್ಥಗಿತಕ್ಕೆ ಅಸಮಾಧಾನ: ಈ ಕಾರ್ಖಾನೆಯಲ್ಲಿ 850 ಕಾಯಂ ನೌಕರರು ಸೇರಿದಂತೆ 1400 ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು. ಕಾರ್ಖಾನೆ ಮುಚ್ಚಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ರೀಡ್‌ ಅಂಡ್‌ ಟೇಲರ್‌ ನೌಕರರ ಸಂಘದ ಪದಾಧಿಕಾರಿ ಹಾಗೂ ಖಜಾಂಚಿ ಎಂ.ಶಿವಪ್ಪ ಈ ಸಂಬಂಧ ದೂರು ನೀಡಲು ಮುಂದಾಗಿದ್ದಾರೆ. ಹೋರಾಟಕ್ಕೆ ಕಾನೂನು ತೊಡಕಾಗುವುದರಿಂದ ಪ್ರತಿಭಟನೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

2-hunsur

Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Kaup: ರಿಕ್ಷಾ ಚಾಲಕ ನೇಣಿಗೆ ಶರಣು

12

Mangaluru: ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಗುದ್ದಿದ ಕಾರು

5

Karkala: ಜಾಗದ ವಿಚಾರ; ಮಹಿಳೆಗೆ ಹಲ್ಲೆ; ಪ್ರಕರಣ ದಾಖಲು

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

complaint

Manipal: ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.