ಪಿರಿಯಾಪಟ್ಟಣ: ಗ್ರಾಮೀಣ ದಸರಾಕ್ಕೆ ನಿರಾಸದಾಯಕ ಪ್ರತಿಕ್ರಿಯೆ
ಸ್ಪರ್ಧಾರ್ಥಿಗಳಿಗಾಗಿ ಕಾದು ಕುಳಿತ ಅಧಿಕಾರಿಗಳು..!
Team Udayavani, Sep 28, 2022, 4:29 PM IST
ಪಿರಿಯಾಪಟ್ಟಣ: ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಗ್ರಾಮೀಣ ದಸರಾ ಕ್ರೀಡಾಕೂಟಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳದೆ ನಿರುತ್ಸಾಹ ತೋರುತ್ತಿರುವುದು ಕಂಡು ಬಂತು.
ಪಟ್ಟಣದ ಗೋಣಿಕೊಪ್ಪ ರಸ್ತೆಯ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ತಾಲೂಕು ಆಡಳಿತ ವತಿಯಿಂದ ಏರ್ಪಡಿಸಲಾಗಿದ್ದ ಗ್ರಾಮೀಣ ದಸರಾ ಕ್ರೀಡಾಕೂಟವನ್ನು ಶಾಸಕ ಕೆ. ಮಹದೇವ್ ಗುಂಡು ಎಸೆಯುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರೂ ಸ್ಪರ್ಧಾಳುಗಳ ಕೊರತೆಯಿಂದಾಗಿ ಕೆಲವೇ ಕ್ಷಣಗಳಲ್ಲಿ ಕ್ರೀಡಾಕೂಟ ಅಂತ್ಯವಾಯಿತು.
ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದ ಶಾಸಕರು, ಮೈಸೂರು ಸಂಸ್ಥಾನದ ಐತಿಹಾಸಿಕ ಪರಂಪರೆ ಬಿಂಬಿಸುವ ದಸರಾ ಉತ್ಸವ ಈಗ ಗ್ರಾಮೀಣ, ಸಂಸ್ಕೃತಿ, ಕ್ರೀಡೆ, ಕಲೆ ಪ್ರದರ್ಶಿಸುವ ಮೂಲಕ ಹಳ್ಳಿ ಜನರಲ್ಲಿ ದಸರಾ ಉತ್ಸವ ಕಾಣುವ ಅವಕಾಶ ದೊರಕಿದೆ. ಅದರಂತೆ ಗ್ರಾಮೀಣ ಭಾಗದ ಜನರಲ್ಲಿ ಗ್ರಾಮೀಣ ಕಲೆ, ಕ್ರೀಡೆಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಗ್ರಾಮೀಣ ದಸರಾ ಕ್ರೀಡೆಗಳು ಆಯೋಜಿಸಲಾಗಿದೆ. ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಇದರ ನಡುವೆಯೂ ಕ್ರೀಡೆಗಳಲ್ಲಿ ಭಾಗವಹಿಸುವುದು ಅತ್ಯಂತ ಮುಖ್ಯ ಎಂದರು.
ಗ್ರಾಮೀಣ ದಸರಾ ಕ್ರೀಡಾಕೂಟವು ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆಯಾಗಬೇಕಿತ್ತು ಆದರೆ ಸ್ಪರ್ಧಾಳುಗಳ ಕೊರತೆಯಿಂದಾಗಿ 12 ಗಂಟೆಯ ಆಸುಪಾಸಿನಲ್ಲಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರೂ ವಿವಿಧ ಸ್ಪರ್ಧೆಗಳಲ್ಲಿ ಸ್ಪರ್ಧಿಸಲು ಬೆರಳೆಣಿಕೆ ಮಂದಿ ಸ್ಪರ್ಧಾಳುಗಳು ಕಾಣುತ್ತಿದರು. ತಾಲ್ಲೂಕು ಆಡಳಿತ ಆಯೋಜಿಸಿದ ದಸರಾ ಕ್ರೀಡಾಕೂಟದಲ್ಲಿ ಕೆಲವೇ ಮಂದಿ ಭಾಗವಹಿಸಿದ್ದರಿಂದ ಕ್ರೀಡಾಕೂಟವು 2 ಗಂಟೆ ವೇಳೆಗೆ ನಿರಾಶದಾಯಕವಾಗಿ ಮುಕ್ತಾಯವಾಯಿತು.
ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಚಂದ್ರಮೌಳಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕೃಷ್ಣಕುಮಾರ್, ಕೃಷಿ ಸಹಾಯಕ ನಿರ್ದೇಶಕ ವೈ. ಪ್ರಸಾದ್, ಸಹಾಯಕ ತೋಟಗಾರಿಕೆ ನಿರ್ದೇಶಕಿ ಭಾರತಿ, ಸಹಾಯಕ ಅಧಿಕಾರಿ ಪ್ರಸಾದ್, ಬಿಸಿಎಂ ವಿಸ್ತರಾಣಧಿಕಾರಿ ಪ್ರೇಮ ಕುಮಾರ್, ಸಮಾಜ ಕಲ್ಯಾಣಾಧಿಕಾರಿ ಸಿದ್ದೇಗೌಡ, ಪಶು ಇಲಾಖೆಯ ಸೋಮಯ್ಯ, ಟಿಎಪಿಸಿಎಂಸ್ ಅಧ್ಯಕ್ಷ ನಾಗೇಂದ್ರ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್.ರವಿ, ಪುರಸಭಾ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.