![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 18, 2020, 5:19 AM IST
ಹುಣಸೂರು: ಶಾಸಕ ಮಂಜುನಾಥ್ ಹುಟ್ಟುಹಬ್ಬದ ಪ್ರಯುಕ್ತ ಬಿಳಿಕೆರೆಯ ಬಲಮುರಿ ಗಣಪತಿ, ಪಟ್ಟಣದ ಶಿರಡಿ ಸಾಯಿಬಾಬಾ ಮಂದಿರ, ಆಂಜನೇಯಸ್ವಾಮಿ, ಸುಬ್ರಹ್ಮಣ್ಯ, ಮಂಜುನಾಥ ದೇವಾಲಯ, ಕಟ್ಟೆಮಳಲ ವಾಡಿಯ ಕೋಡಿ ಗಣಪತಿ, ಕೆಂಡಗಣ್ಣಸ್ವಾಮಿ ಗದ್ದಿಗೆಯ ಕೆಂಡಗಣ್ಣೇಶ್ವರ-ಮಹದೇಶ್ವರ ದೇವಾಲ ಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ನಗರದ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಸ್ನೇಹ ಜೀವಿ ಬಳಗದವರು 25 ಕೇಜಿ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿದರು. ಅಲ್ಲದೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಾಗೂ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಿದರು. ಇಂದಿರಾ ಕ್ಯಾಂಟೀನ್‌ನಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಬೆಳಗಿನ ಉಪಾಹಾರ ಮತ್ತು ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿತ್ತು.
ಡಿಎಲ್ ವಿತರಣೆ: ನಗರದ 50 ಆಟೋ ಚಾಲಕರಿಗೆ ಸ್ನೇಹಜೀವಿ ಬಳಗದಿಂದ ಉಚಿತ ಚಾಲನಾ ಪರವಾನಗಿ ಮಾಡಿಸಿಕೊಟ್ಟ ಆದೇಶಪತ್ರ ವಿತರಿಸಿದರು. ಜಿಪಂ ಉಪಾಧ್ಯಕ್ಷೆ ಗೌರಮ್ಮ, ಸದಸ್ಯರಾದ ಡಾ.ಪುಷ್ಪಾ, ಕಟ್ಟನಾಯಕ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶೋಭಾ, ನಗರಸಭಾ ಸದಸ್ಯರು ಹಾಜರಿದ್ದರು.
ಬಟ್ಟೆ ವಿತರಣೆ: ತಾಲೂಕಿನ ಮರದೂರು ಗ್ರಾಪಂ ವ್ಯಾಪ್ತಿಯ ದೊಂಬರ ಕಾಲೋನಿಯಲ್ಲಿ ಶಾಸಕರ ಹುಟ್ಟು ಹಬ್ಬದ ಅಂಗವಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಬನ್ನಿಕುಪ್ಪೆ ಜಿಪಂ ಸದಸ್ಯೆ ಹಾಗೂ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ನೇತೃತ್ವದಲ್ಲಿ ನಂದಿನಿ ಸಿಲ್ಕ್ ಹಾಗೂ ಜಿಯಾಜಿ ಬಟ್ಟೆ ಅಂಗಡಿಗಳವರು ಮಕ್ಕಳು ಮಹಿಳೆಯರಿಗೆ ನೀಡಿರುವ ಬಟ್ಟೆ ವಿತರಿಸಿದರು. ಈ ವೇಳೆ ಮಹಿಳಾ ಕಾಂಗ್ರೆಸ್‌ನ ಶೋಭಾ, ನಂದಿನಿ, ಮಂಜುಳ, ಯಶೋಧಾ, ರೇಣುಕಾ, ಸುಕನ್ಯಾ ಮತ್ತಿತರರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.