ಕುಡಿವ ನೀರು ಯೋಜನೆ ಅನುಷ್ಠಾನ
Team Udayavani, May 21, 2020, 5:17 AM IST
ಹುಣಸೂರು: ನಗರಕ್ಕೆ ಮುಂದಿನ 20 ವರ್ಷಗಳ ಅವಧಿಯ ದೂರದೃಷ್ಟಿಯಿಂದ ನಗರೋತ್ಥಾನ ಯೋಜನೆಯಡಿ 3ನೇ ಹಂತದ 5.50 ಕೋಟಿ ರೂ, ನಗರಸಭೆ 14ನೇ ಹಣಕಾಸು ಯೋಜನೆಯಡಿ 2 ಕೋಟಿ, ಎಸ್‌ಎಫ್‌ಸಿ ವಿಶೇಷ ಅನುದಾನ 1.50 ಕೋಟಿ ಸೇರಿದಂತೆ ಒಟ್ಟು 9 ಕೋಟಿ ವೆಚ್ಚದಲ್ಲಿ ಸಮಗ್ರ ಯೋಜನೆ ಇದಾಗಿದ್ದು, ಸುಮಾರು ಒಂದು ಲಕ್ಷ ಮಂದಿಗೆ ಸಮರ್ಪಕ ನೀರು ಪೂರೈಸಲು ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಮಂಜುನಾಥ್ ಹೇಳಿದರು.
ನಗರಸಭೆ ಸಭಾಂಗಣದಲ್ಲಿ ಯೋಜನೆ ಅನುಷ್ಠಾನ ಸಂಬಂಧ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ, ನಗರಸಭೆ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ಸಭೆ ನಂತರ ಮಾತನಾಡಿ, ನೀರು ಪೂರೈಸುವ ಕಾವೇರಿ ನೀರು ಸರಬರಾಜು ಯೋಜನೆಯ ಹಾಲಿ 270 ಎಚ್ .ಪಿಯಿಂದ 350 ಎಚ್.ಪಿಯ ಎರಡು ಮೋಟಾರ್ ಅಳವಡಿಸುವುದು. ನೂತನವಾಗಿ ನಿರ್ಮಿಸಿರುವ ಟ್ಯಾಂಕ್‌ಗಳಿಗೆ ಹೊಸ ಪೈಪ್‌ಲೈನ್ ಸಂಪರ್ಕ ಕಲ್ಪಿಸುವ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.
ಟ್ಯಾಂಕ್ ನಿರ್ಮಾಣ: ನಗರೋತ್ಥಾನ ಯೋಜನೆಯಡಿ ನಗರದ ಕಲ್ಕುಣಿಕೆ ಅಯ್ಯಪ್ಪಸ್ವಾಮಿ ಬೆಟ್ಟ, ನರಸಿಂಹಸ್ವಾಮಿ ತಿಟ್ಟಿನ ದೇವಾಲಯದ ಬಳಿ ಹಾಗೂ ಶಬ್ಬೀರ್ ನಗರದಲ್ಲಿ 5 ಲಕ್ಷ ಲೀಟರ್ ಸಾಮರ್ಥ್ಯದ ದೊಡ್ಡ ಟ್ಯಾಂಕ್ ನಿರ್ಮಿಸಲಾಗುವುದು. ಈಗಾಗಲೇ ಕಾಮಗಾರಿಗೆ ಅನುಮೋದನೆ ಸಿಕ್ಕಿದೆ. 2021ರ ಮಾರ್ಚ್ ಒಳಗೆ ಕಾಮಗಾರಿ ಮುಗಿಸಿ ನೀರು ಪೂರೈಸಬೇಕು ಎಂದು ಹೇಳಿದರು. ನಗರಸಭಾ ಪೌರಾಯುಕ್ತ ಮಂಜುನಾಥ್, ಎಇಇ ಮಂಜುನಾಥ್, ಎಂಜಿನಿಯರ್‌ಗಳಾದ ಸದಾಶಿವಪ್ಪ, ಅನುಪಮ, ರೂಪ, ದೀಪಕ್, ಸಮನ್ವಯಾಧಿಕಾರಿ ಸುದರ್ಶನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.