ಬಡವರ ಮೇಲೆ ಆರ್ಥಿಕ ಹೊರೆ: ಸಿದ್ದು


Team Udayavani, Jun 20, 2020, 5:37 AM IST

petrol poor

ಮೈಸೂರು: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾಗಿದ್ದರೂ ಕೇಂದ್ರ ಸರ್ಕಾರ ಕಳೆದ 15 ದಿನಗಳಿಂದ ತೈಲ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ 25 ರೂ. ಗಳಿಗೆ ಪೆಟ್ರೋಲ್‌ ನೀಡಿ ನೂತನವಾಗಿ ಪ್ರತಿಭಟನೆ ನಡೆಸಲಾಯಿತು.  ಕುವೆಂಪುನಗರದ ಪೆಟ್ರೋಲ್‌ ಬಂಕ್‌ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್‌ ತುಂಬಿಸುವ ಮೂಲಕ ತೈಲ ಬೆಲೆ ಏರಿಕೆ ಖಂಡಿಸಿದರು.

ಬಳಿಕ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯಾಗುತ್ತಲೇ ಇದೆ. ಆದರೆ ಕೇಂದ್ರ ಸರ್ಕಾರ ಕಳೆದ 15 ದಿನಗಳಿಂದಲೂ ತೈಲ ಬೆಲೆ ಏರಿಕೆ ಮಾಡುತ್ತಲೇ ಇದೆ. ಕಚ್ಚಾತೈಲ 18.60 ರೂ.ಗಳಿಗೆ ಸಿಗುತ್ತಿರುವುದರಿಂದ 30ರಿಂದ 35 ರೂ.  ಗಳಿಗೆ ಮಾರಾಟ ಮಾಡಬಹುದು. ಆದರೆ, ಕೇಂದ್ರ ಸುಂಕ ಹಾಗೂ ರಾಜ್ಯ ಸರ್ಕಾರ ವಿಧಿಸುವ ಮಾರಾಟ ತೆರಿಗೆಯಿಂದ 79 ರೂ. ಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಕಿಡಿ ಕಾರಿದರು.

ಆರ್ಥಿಕ ಹೊರೆ: ಡಾ.ಮನಮೋಹನ್‌ ಸಿಂಗ್‌ ನೇತೃತ್ವದ ಯುಪಿಎ ಸರ್ಕಾರದಲ್ಲಿ ಪ್ರತಿ ಬ್ಯಾರಲ್‌ಗೆ 125ರಿಂದ 140 ಡಾಲರ್‌ ಇತ್ತು. ಈಗ 39 ಡಾಲರ್‌ಗೆ ಇಳಿದಿದೆ. ಅದರ ಆಧಾರದ ಮೇಲೆ 35 ರೂ. ಒಳಗೆ ಮಾರಾಟ ಮಾಡಬಹುದು. ಆದರೆ,  ಕೇಂದ್ರ ಸರ್ಕಾರ ಬೆಲೆ ಇಳಿಕೆ ಮಾಡದೇ ಬಡವರ ಮೇಲೆ ಆರ್ಥಿಕ ಹೊರೆ ಹೊರೆಸುತ್ತಿದೆ ಎಂದು ಆರೋಪಿಸಿದರು.

ಬಿಎಸ್‌ವೈಗೆ ತಾಕತ್ತಿಲ್ಲ: ಕೇಂದ್ರ ಸರಕಾರ ಹೇಳಿದಂತೆ ತಲೆಯಾಡಿಸುವ ಸಿಎಂ ಯಡಿಯೂರಪ್ಪ ಅವರಿಗೆ ಮೋದಿ ಮುಂದೆ ಮಾತನಾಡಲು ತಾಕತ್ತಿಲ್ಲ. 15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ್ದ 5049 ಕೋಟಿ ರೂ. ಬಿಡುಗಡೆ  ಮಾಡದೇ ಇದ್ದರೂ ಈವರೆಗೆ ಕೇಳಿಲ್ಲ. ಅವರ ಎದುರು ಮಾತನಾಡುವ ತಾಕತ್ತು ಎಲ್ಲಿದೆ ಎಂದು ಯಡಿಯೂರಪ್ಪನವರ ಕಾಲೆಳೆದರು.

ಮರಣ ಶಾಸನ: ಭೂಸ್ವಾಧೀನ ಕಾಯಿದೆ ತಿದ್ದುಪಡಿ ಮಾಡುತ್ತಿರುವುದು ಮರಣ ಶಾಸನವಾಗಿದೆ. ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ ದಿ.ದೇವರಾಜ ಅರಸು ಉಳುವವನೇ ಭೂ ಒಡೆಯ ಎಂದರು, ಈಗ ಉಳ್ಳವನೇ ಭೂ ಮಾಲೀಕ  ಎನ್ನುವಂತೆ ಮಾಡಲು ಹೊರಟಿದೆ ಬಿಜೆಪಿ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸೆಕ್ಷನ್‌ 144 ಬಳಸಿಕೊಂಡು ಎಲ್ಲಾ ಕಾಯಿದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ. ಇನ್ನು ನಮ್ಮ  ಮುಂದಿರುವುದು ಜೈಲ್‌ ಭರೋ ಳವಳಿ ಒಂದೇ ಎಂದರು.

ವಿಶ್ವನಾಥ್‌ ಪೆದ್ದನೋ, ಜಾಣನೋ ಗೊತ್ತಿಲ್ಲ: ಎಂಎಲ್‌ಸಿ ಟಿಕೆಟ್‌ ಕೈತಪ್ಪಿದ ಸಂಬಂಧ ವಿಶ್ವನಾಥ್‌ ಆರೋಪಕ್ಕೆ ಪ್ರತಿಕ್ರಿಯಿಸಿ, ವಿಶ್ವನಾಥ್‌ ಪೆದ್ದನೋ, ಜಾಣನೋ ಗೊತ್ತಿಲ್ಲ. ನಾನು ಕಾಂಗ್ರೆಸ್‌ ನಲ್ಲಿದ್ದೇನೆ, ವಿಶ್ವನಾಥ್‌ ಬಿಜೆಪಿಯಲ್ಲಿದ್ದಾರೆ. ನಾನು ಹೇಗೆ ಟಿಕೆಟ್‌ ತಪ್ಪಿಸಲು ಸಾಧ್ಯ? ಹತಾಶೆಯಿಂದ ಏನೇನೋ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್‌ ನೀಡಿದರು. ಈ ವೇಳೆ ಮಾಜಿ ಶಾಸಕ ಸೋಮಶೇಖರ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ. ವಿಜಯ್‌ ಕುಮಾರ್‌,  ನಗರಾಧ್ಯಕ್ಷ ಮೂರ್ತಿ, ವೆಂಕಟೇಶ್‌ ಇತರರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.