ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ
Team Udayavani, Jun 7, 2020, 5:14 AM IST
ತಿ.ನರಸೀಪುರ: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ, ಎರಡು ಜಿಲ್ಲೆಯ ಹಾಲು ಒಕ್ಕೂಟದ ಸಹಕಾರದೊಂದಿಗೆ ಜಿಲ್ಲೆಯ ಆಶಾ ಕಾರ್ಯ ಕರ್ತೆಯರಿಗೆ 75 ಲಕ್ಷ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹರೀಶ್‌ಗೌಡ ತಿಳಿಸಿದರು.
ಪಟ್ಟಣದಲ್ಲಿ ನಡೆದ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಗಳಿಂದ ಆಶಾ ಕಾರ್ಯಕರ್ತ ರಿಗೆ ಪ್ರೋತ್ಸಾಹ ಧನ ವಿತರಣೆ, ರೈತರಿಗೆ ಹಾಗೂ ಸ್ವಸಹಾಯ ಸಂಘಗಳ ಸಾಲ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ತಾಲೂಕಿನಲ್ಲಿ 87 ಕೋಟಿ ವಿತರಿಸಲಾಗಿದೆ. ಸಾಲ ಮನ್ನಾ ಯೋಜನೆಯಡಿ ಸರ್ಕಾರದಿಂದ ಇನ್ನೂ 5 ಕೋಟಿ ಹಣ ಬರಬೇಕಿದ್ದು, ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಸಹಕಾರ ಸಚಿವರು ಆಶಾ ಕಾರ್ಯಕರ್ತೆಯ ರಿಗೆ ಪ್ರೋತ್ಸಾಹ ಧನ ನೀಡುವ ಮೂಲಕ ಅವರ ಸೇವೆಗೆ ಗೌರವ ಸಲ್ಲಿಸುವ ಕೆಲಸ ಮಾಡಿದ್ದಾರೆ. ಸಿಎಂ ಪರಿಹಾರ ನಿಧಿಗೆ ಬಂದ ಅನುದಾನದಲ್ಲಿ ಶೇ.50 ರಷ್ಟು ಅನುದಾ, ಪ್ರಾಣಿ ಪಕ್ಷಿಗಳ ಹಿತರಕ್ಷಣೆಗೂ ಬದರಾಗಿ 2.85 ಕೋಟಿ ದೇಣಿಗೆ ಕೊಡಿಸಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸೋಮ ಶೇಖರ್, ಶಾಸಕ ಅಶ್ವಿನ್ ಕುಮಾರ್ ಆಶಾ ಕಾರ್ಯ ಕರ್ತೆಯರಿಗೆ ಪ್ರೋತ್ಸಾಹ ಧನದ ಚೆಕ್ ವಿತರಿಸಿದರು. ಕಾರ್ಯ ಕ್ರಮದಲ್ಲಿ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ಎಸ್‌ಪಿ ರಿಷ್ಯಂತ್, ಜಿಪಂ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ, ಎಂಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸದಾನಂದ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.