![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 30, 2020, 5:56 AM IST
ಮೈಸೂರು: ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯ ರೈತ ವಿರೋಧಿ ಕಾಯ್ದೆಗಳ ಹೋರಾಟ ಸಮಿತಿ ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ಬಾರುಕೋಲು ಚಳವಳಿ ನಡೆಸಿದರು.
ನಗರದ ಗನ್‌ಹೌಸ್ ವೃತ್ತದಿಂದ ಹೊರಟ ರೈತರ ಬೈಕ್ ರ್ಯಾಲಿ ಮೈಸೂರು ಮಹಾನಗರ ಪಾಲಿಕೆ, ಹಳೇ ಸಂತೆಪೇಟೆ, ಡಿ.ದೇವರಾಜು ಅರಸು ರಸ್ತೆ, ಜೆಎಲ್‌ಬಿ ರಸ್ತೆ ಹಾಗೂ ಹುಣಸೂರು ರಸ್ತೆ ಮಾರ್ಗದಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಅಂತ್ಯವಾಯಿತು. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಜಾರಿ ಮಾಡದಂತೆ ಹಕ್ಕೊತ್ತಾಯ ಪತ್ರವನ್ನು ರಾಜ್ಯಪಾಲರಿಗೆ ಪ್ರಾದೇಶಿಕ ಆಯುಕ್ತರ ಮೂಲಕ ಸಲ್ಲಿಸಲಾಯಿತು.
ರೈತರಿಗೆ ಅನ್ಯಾಯ: ಈ ವೇಳೆ ಮಾತನಾಡಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ರಾಜ್ಯ ಸರ್ಕಾರಕ್ಕೆ ರೈತರ ಹೋರಾಟದ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ, ಭೂ ಸುಧಾರಣೆ ಕಾಯ್ದೆ ಜಾರಿಗೆ ತರಬಾರದೆಂದು ಒಂದು ತಿಂಗಳಿನಿಂದ ಹೋರಾಡುತ್ತಿದ್ದೇವೆ. ಆದರೆ ಸರ್ಕಾರ ಇದಕ್ಕೆ ಕಿಮ್ಮತ್ತು ನೀಡದೇ ನಿರ್ಲಕ್ಷ ಮಾಡುತ್ತಿದೆ. ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ರೈತರನ್ನು ಮೂಲೆಗುಂಪು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಿದ್ದುಪಡಿ ಬೇಡ: ಕರ್ನಾಟಕ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಹೊರಟಿರುವ ಭೂ ಸುಧಾರಣಾ ತಿದ್ದುಪಡಿ ಕಾಯಿದೆಗೆ ರಾಜ್ಯಪಾಲರು ಸಹಿ ಹಾಕಬಾರದು. ರಾಜ್ಯದಲ್ಲಿ ಶೇ.80ರಷ್ಟು ಸಣ್ಣ ಹಿಡುವಳಿ ದಾರರಿದ್ದು, ವ್ಯವಸಾಯವನ್ನೇ ನಂಬಿ ಜೀವನ ನಡೆಸುತ್ತಿದ್ದಾರೆ. ಕೊರೊನಾ ಲಾಕ್‌ಡೌನ್‌ನಿಂದ ರೈತರು ಬೆಳೆದ ಉತ್ಪನ್ನಗಳಿಗೆ ಸಮರ್ಪಕ ಮಾರುಕಟ್ಟೆ ಸಿಗದೇ ಬೆಲೆ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇಂತಹ ಸಮಯ ಬಳಸಿಕೊಂಡು ಕಾಯ್ದೆ ತಿದ್ದುಪಡಿ ಮಾಡುವುದು ಸರಿಯಲ್ಲ ಎಂದು ಹೇಳಿದರು. ರ್ಯಾಲಿಯಲ್ಲಿ ರೈತ ಮುಖಂಡರಾದ ಹೊಸೂರು ಕುಮಾರ್, ವಿದ್ಯಾಸಾಗರ್, ಸುಧೀರ್ ಕುಮಾರ್, ಅತ್ತಹಳ್ಳಿ ದೇವರಾಜ್, ಗುರುಪ್ರಸಾದ್, ಹಳ್ಳಿಕೆರೆ ಹುಂಡಿ ಭಾಗ್ಯರಾಜ್, ರೈತರು ಭಾಗವಹಿಸಿದ್ದರು.
ಕೃಷಿ ಭೂಮಿಗೆ ಅಪಾಯ: ಈಗಾಗಲೇ ರಾಜ್ಯದಲ್ಲಿ 22 ಲಕ್ಷ ಹೆಕ್ಟೇರ್ ಉದ್ದಿಮೆ ನೆಪದಲ್ಲಿ ಕೃಷಿ ಭೂಮಿ ಮಹಾನಗರಗಳ ಸುತ್ತಮುತ್ತ ಭೂ ಮಾಫಿಯಾದವರ ಕೈಗೆ ಸಿಲುಕಿದೆ. ಈ ಜಮೀನುಗಳನ್ನು ಮಾರಿದ ರೈತರು ಹಣ ಮತ್ತು ಭೂಮಿ ಎರಡನ್ನು ಕಳೆದುಕೊಂಡು ನಗರಗಳಲ್ಲಿ ಕೂಲಿ ಕಾರ್ಮಿಕರಾಗಿ ಬದುಕುತ್ತಿದ್ದಾರೆ. ಈ ಕಾಯ್ದೆ ಜಾರಿಯಾ ದರೆ ಕಾರ್ಪೋರೆಟ್ ಕಂಪನಿ ಕೃಷಿ ನಡೆಸಲು ಮುಂದಾಗುತ್ತದೆ.
ಕಾರ್ಪೋರೆಟ್ ಕೃಷಿಯಲ್ಲಿ ಹೆಚ್ಚು ರಸಗೊಬ್ಬರ, ಕೀಟನಾಶಕ ಬಳಸುವುದ ರಿಂದ ಭೂಮಿಯ ಫಲವತ್ತತೆ ಕಡಿಮೆ ಯಾಗಿ ಪರಿಸರ ಹದಗೆಟ್ಟು ಬರಡು ಭೂಮಿಯಾಗುತ್ತದೆ. ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಈ ಭೂ ಸುಧಾರಣಾ ತಿದ್ದುಪಡಿ ಕಾಯಿದೆ ಕೈಬಿಡದಿದ್ದರೆ, ಮುಂದೆ ಸರ್ಕಾರಕ್ಕೆ ಉಗಿಯುವ ಚಳವಳಿ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.