![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 5, 2020, 5:36 AM IST
ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಈ ಬ್ಯಾಂಕ್ ಸಂಸ್ಥಾಪಕರು ಎಂದು ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ.ಉಮಾಶಂಕರ್ ಹೇಳಿದರು. ನಗರದ ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಪ್ರಯುಕ್ತ ಒಡೆಯರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ರಾಜರ್ಷಿಗಳು ಕೇವಲ ಬ್ಯಾಂಕ್ ಮಾತ್ರವಲ್ಲದೆ ಕನ್ನಂಬಾಡಿ ಕಟ್ಟೆ, ಮೈಸೂರು ವಿಶ್ವವಿದ್ಯಾನಿಲಯ, ವಾಣಿವಿಲಾಸ ಹೀಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್, ಬಸವಣ್ಣನವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಬ್ಯಾಂಕ್‌ನ ಉಪಾಧ್ಯಕ್ಷ ರಾಮಕೃಷ್ಣ ಇತರರು ಇದ್ದರು.
ನಾಲ್ವಡಿ ಪ್ರತಿಮೆ ಎದುರು: ಮೈಸೂರು ಸಂಸ್ಥಾನವು ವಿಶ್ವಕ್ಕೆ ಮಾದರಿಯಾಗಿದೆ. ಮೈಸೂರು ನಿರ್ಮಾಣಕ್ಕೆ ನಾಲ್ವಡಿ ಅವರ ಕೊಡುಗೆ ಅಪಾರ ಎಂದು ನಾಲ್ವಡಿ ಅವರ ಪ್ರತಿಮೆಗೆ ಮಾಜಿ ಶಾಸಕ ಎಂ.ಕೆ.ಸೋಮ ಶೇಖರ್ ಮಾಲಾರ್ಪಣೆ ಮಾಡಿ ಮಾತನಾಡಿದರು. ನಾಲ್ವಡಿ ಅವರು ಮನುವಾದಕ್ಕೆ ಇತಿಶ್ರೀ ಹಾಡಿ ಗೆಜ್ಜೆಪೂಜೆ, ದೇವದಾಸಿಯಂತಹ ಅನಿಷ್ಠ ಪದಟಛಿತಿಗಳಿಂದ ವಿಮುಕ್ತಿಗೊಳಿಸಿದರು.
ಎಲ್ಲಾ ಸಮಾಜದವರು, ವರ್ಗದವರಿಗಾಗಿ ಶಿಕ್ಷಣದ ಧಾರೆ ಎರೆಯಲು ಹಾಗೂ ವಿದ್ಯುತcಕ್ತಿ ನೀಡಿ ಮನೆ, ಮನೆಗಳಿಗೂ ಬೆಳಕನ್ನು ಚೆಲ್ಲಿದ ಮಹಾನ್ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದರು. ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಅರಗು ಮತ್ತು ಬಣ್ಣದ ಕಾರ್ಖಾನೆ ಮಾಜಿ ಅಧ್ಯಕ್ಷ ವೆಂಕಟೇಶ್, ಮಾಜಿ ಭೋವಿ ನಿಗಮದ ಅಧ್ಯಕ್ಷ ಸೀತಾರಾಮು, ವಿಶ್ವ, ಗುಣ ಇತರರು ಉಪಸ್ಥಿತರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.