ಮೇಲಧಿಕಾರಿಗಳ ಕಿರುಕುಳ: ಆರೋಗ್ಯಾಧಿಕಾರಿ ಆತ್ಮಹತ್ಯೆ
Team Udayavani, Aug 21, 2020, 1:53 AM IST
ಸಾಂದರ್ಭಿಕ ಚಿತ್ರ
ಮೈಸೂರು: ನಂಜನಗೂಡು ತಾಲೂಕು ಪ್ರಭಾರ ಆರೋಗ್ಯಾಧಿಕಾರಿ, ಮೈಸೂರಿನ ಆಲನಹಳ್ಳಿ ಬಡಾವಣೆ ನಿವಾಸಿ ಡಾ| ಎಸ್. ಆರ್. ನಾಗೇಂದ್ರ (43) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋವಿಡ್-19 ಕೆಲಸದ ಒತ್ತಡ ಹಾಗೂ ಮೇಲಧಿ ಕಾರಿಗಳ ಕಿರುಕುಳವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅವರು ಜನವರಿ ಯಿಂದ ನಂಜನಗೂಡಿನಲ್ಲಿ ಸೇವೆ ಸಲ್ಲಿಸುತ್ತಿದ್ದರು.
ತಾಲೂಕು ಆರೋಗ್ಯಾಧಿಕಾರಿ ಯಾಗಿದ್ದ ಡಾ| ಕಲಾವತಿ ಅವರನ್ನು ಮೈಸೂರಿಗೆ ವರ್ಗಾಯಿಸಿದ ಬಳಿಕ ನಾಗೇಂದ್ರ ಅವರ ಕಾರ್ಯಕ್ಷಮತೆ ಮೆಚ್ಚಿ ಅವರನ್ನು ತಾಲೂಕು ಪ್ರಭಾರ ಆರೋಗ್ಯ ಅಧಿಕಾರಿಯನ್ನಾಗಿ ಮಾಡಲಾಗಿತ್ತು. ಚಿಕ್ಕ ವಯಸ್ಸಿಗೆ ಅಧಿಕಾರಿಯಾಗಿದ್ದ ಇವರಿಗೆ ಹಿರಿಯ ವೈದ್ಯರು ಸಹಕಾರ ನೀಡುತ್ತಿರಲಿಲ್ಲ ಹಾಗೂ ಕೋವಿಡ್ ಹಿನ್ನೆಲೆಯಲ್ಲಿ 6 ತಿಂಗಳುಗಳಿಂದ ನಿರಂತರವಾಗಿ ಕರ್ತವ್ಯ ನಿರ್ವಹಿಸಿ ಕೆಲಸದ ಒತ್ತಡ ಹೆಚ್ಚಾಗಿತ್ತು ಎನ್ನಲಾಗಿದೆ. ಈ ಎರಡು ಕಾರಣಗಳಿಂದ ತನ್ನನ್ನು ಕರ್ತವ್ಯದಿಂದ ಬಿಡುಗಡೆಗೊಳಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ಪತ್ರವನ್ನೂ ಬರೆದಿದ್ದರು ಎನ್ನಲಾಗಿದೆ.
30 ಲ. ರೂ. ಪರಿಹಾರ
ಆರೋಗ್ಯ ಅಧಿಕಾರಿ ಡಾ| ಎಸ್. ಆರ್. ನಾಗೇಂದ್ರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು, ವೈದ್ಯರ ಕುಟುಂಬಕ್ಕೆ 30 ಲ. ರೂ. ಪರಿಹಾರ ಹಾಗೂ ಕುಟುಂ ಓರ್ವ ಸದಸ್ಯನಿಗೆ ಉದ್ಯೋಗ ನೀಡು ವುದಾಗಿ ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.