Hunsur: ಕಾರು, ಬೈಕ್, ಸೈಕಲ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಮೂವರ ಬಂಧನ
ಹಳೇ ದ್ವೇಶದ ಹಿನ್ನೆಲೆ ವಾಹನಗಳಿಗೆ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು
Team Udayavani, Nov 9, 2024, 2:31 PM IST
ಹುಣಸೂರು: ವೈಯಕ್ತಿಕ ದ್ವೇಶದಿಂದ ಕಾರು, ಬೈಕ್, ಸೈಕಲ್‌ಗೆ ಬೆಂಕಿ ಹಚ್ಚಿದ್ದ ಪ್ರಕರಣವನ್ನು ಬೇಧಿಸಿರುವ ಹುಣಸೂರು ಗ್ರಾಮಾಂತರ ಠಾಣಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮುತ್ತುರಾಯನಹೊಸಹಳ್ಳಿ ಗ್ರಾಮದ ಕುಮಾರ, ಚಂದ್ರೇಗೌಡ ಈತನ ಬಾವ-ಮೈದುನ ಮೈಸೂರು ತಾಲೂಕಿನ ಆನಂದೂರು ಕೊಪ್ಪಲಿನ ಮಂಜು ಬಂಧಿತ ಆರೋಪಿಗಳು.
ಪ್ರಕರಣದ ವಿವರ:
ಮುತ್ತುರಾಯನಹೊಸಹಳ್ಳಿಯ ಮನುಕುಮಾರ್ ಮನೆಯವರೊಂದಿಗೆ ಅಕ್ಟೋಬರ್ 16 ರಂದು ರಾತ್ರಿ ದಸರಾ ಲೈಟಿಂಗ್ ವೀಕ್ಷಣೆಗೆ ಹೋಗಿದ್ದ ವೇಳೆ ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕ್, ಸೈಕಲ್‌ಗೆ ಹಾಗೂ ಸಿ.ಸಿ.ಕ್ಯಾಮರಾಗೆ ಬೆಂಕಿ ಹಚ್ಚಿ ಆರೋಪಿಗಳು ಪರಾರಿಯಾಗಿದ್ದರು.
ಮನೆಯ ಕೆಲ ಭಾಗ ಸೇರಿದಂತೆ ವಾಹನಗಳು ಸಂಪೂರ್ಣ ಸುಟ್ಟು ಸುಮಾರು 3.25 ಲಕ್ಷ ರೂ. ನಷ್ಟ ಉಂಟಾಗಿತ್ತು. ಈ ಸಂಬಂಧ ಮನುಕುಮಾರ್ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಜಿಲ್ಲಾ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಡಿಷನಲ್ ಎಸ್‌ಪಿ ನಾಗೇಶ್, ಡಿವೈಎಸ್ಪಿ ಗೋಪಾಲಕೃಷ್ಣ ಮಾರ್ಗದರ್ಶನದಲ್ಲಿ ಹುಣಸೂರು ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಮುನಿಯಪ್ಪ ನೇತೃತ್ವದಲ್ಲಿ ತಂಡ ರಚಿಸಿ ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಲಾಗಿತ್ತು.
ಬಾತ್ಮೀದಾರರು ಹಾಗೂ ಮೈಸೂರಿನ ಎಸ್.ಪಿ.ಕಚೇರಿಯ ತಾಂತ್ರಿಕ ತಜ್ಞರ ನೆರವಿನಿಂದ ಸಿಡಿಆರ್ ಮತ್ತು ಮೊಬೈಲ್ ಟವರ್ ಲೊಕೇಷನ್ ಜಾಡು ಹಿಡಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಳೇ ದ್ವೇಶದ ಹಿನ್ನೆಲೆ ಹಿಂದೆ ಎರಡೂ ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ಈ ಬಗ್ಗೆ ಇಬ್ಬರ ಮೇಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೈಮನಸ್ಸಿನ ಹಿನ್ನೆಲೆ ಆರೋಪಿಗಳು ಕೃತ್ಯವೆಸಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸಬ್ ಇನ್ಸ್ ಪೆಕ್ಟರ್‌ಗಳಾದ ರಾಧಾ, ಎಸ್.ಐ. ಪಾಂಡು, ಸಿಬ್ಬಂದಿಗಳಾದ ಮಂಜು, ಹರೀಶ್, ಪ್ರಕಾಶ್, ಮಹದೇವಮ್ಮ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lahore; ಭಗತ್ ಸಿಂಗ್ ಉಗ್ರವಾದಿ: ಕೋರ್ಟ್‌ಗೆ ಪಾಕ್ ವರದಿ
Ripponpete: ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
Gangolli: ಪಿಸ್ತೂಲ್ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು
Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್.ಎಸ್.ಬಲ್ಲಾಳ್
Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್ ಸಿ. ಡಿ’ಸೋಜಾ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.