Hunsur: ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಇನ್ಸ್ಪೆಕ್ಟರ್ ಮುನಿಯಪ್ಪ
Team Udayavani, Sep 4, 2024, 12:47 PM IST
ಹುಣಸೂರು: ಗಣಪತಿ ಪ್ರತಿಷ್ಠಾಪನಾ ಸಮಿತಿಯವರು ಇಲಾಖೆಯ ನಿಯಮಗಳನ್ನು ಪಾಲಿಸುವ ಜೊತೆಗೆ ಇತರರಿಗೆ ತೊಂದರೆಯಾಗದಂತೆ ಎಚ್ಚರ ವಹಿಸಬೇಕೆಂದು ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಮುನಿಯಪ್ಪ ಸೂಚಿಸಿದರು.
ಗ್ರಾಮಾಂತರ ಠಾಣೆಯ ಆವರಣದಲ್ಲಿ ಮುಂಬರುವ ಗಣಪತಿ ಹಬ್ಬ ಮತ್ತು ಈದ್ ಮಿಲಾದ್ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
1 ವಾರದ ಅಂತರದಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯಗಳ ಹಬ್ಬ ಬರುತ್ತಿದೆ. ಗ್ರಾಮೀಣ ಭಾಗದಲ್ಲಿ ಗಣಪತಿ ಪ್ರತಿಷ್ಠಾಪಿಸುವ ಸಮಿತಿಯವರು ಕಡ್ಡಾಯವಾಗಿ ಅನುಮತಿ ಪಡೆದಿರಬೇಕು ಎಂದು ಹೇಳಿದರು.
ಮುಂದುವೆರದು ಮಾತನಾಡಿ, ನಿರ್ದಿಷ್ಟ ಸ್ಥಳದಲ್ಲೇ ವಿಸರ್ಜನೆ ಮಾಡಬೇಕು. ತಡರಾತ್ರಿವರೆಗೆ ಮೈಕ್ ಹಾಕುವಂತಿಲ್ಲ. ಮನರಂಜನಾ ಕಾರ್ಯಕ್ರಮಗಳಿದ್ದಲ್ಲಿ ಮುಂಚಿತವಾಗಿ ಬೀಟ್ ಪೊಲೀಸ್ ಅಥವಾ ಠಾಣೆಗೆ ಮಾಹಿತಿ ನೀಡಬೇಕು. ಹೆಚ್ಚು ಶಬ್ದದ ಪಟಾಕಿ, ಡಿ.ಜೆ.ಗೆ ನಿಷೇಧ ಎಂದು ತಿಳಿಸಿದರು.
ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ಸಮಿತಿಯವರ ವಿರುದ್ದ ಕಾನೂನು ಕ್ರಮವಾಗಲಿದೆ ಎಂದು ಎಚ್ಚರಿಸಿ, ವಾರದ ಅಂತರದಲ್ಲೇ ಈದ್ ಮಿಲಾದ್ ಹಬ್ಬ ಬರಲಿದ್ದು, ಈ ವೇಳೆ ನಿಗದಿತ ಸಮಯದಲ್ಲಿ ಪ್ರಾರ್ಥನೆ, ಮೆರವಣಿಗೆ ನಡೆಸಬೇಕು. ಎರಡೂ ಧರ್ಮದವರು ಕಾನೂನು ಸುವ್ಯವಸ್ಥೆ, ಶಾಂತಿ, ಸಾಮರಸ್ಯ ಕಾಪಾಡಲು ಸಹಕಾರ ನೀಡಬೇಕು ಎಂದು ಹೇಳಿದರು.
ಈ ವೇಳೆ ಎಸ್.ಐ.ರಾಮು, ನಗರಸಭಾ ಸದಸ್ಯ ಗಣೇಶ್ ಕುಮಾರ ಸ್ವಾಮಿ, ನಿಲುವಾಗಿಲು ಪ್ರಭಾಕರ್, ರತ್ನಪುರಿ ಡೇವಿಡ್ ಸೇರಿದಂತೆ ಅನೇಕ ಮುಖಂಡರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.