Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

ಅತ್ತಿಕುಪ್ಪೆಯಲ್ಲಿ ಕೆರೆಕೋಡಿ ಒಡೆದು ಬೆಳೆನಾಶ, ಕೊಚ್ಚಿ ಹೋದ ತೆಂಗಿನ ಸಸಿಗಳು

Team Udayavani, May 21, 2024, 12:42 PM IST

10-hunsur

ಹುಣಸೂರು: ಸೋಮವಾರವೂ ತಾಲೂಕಿನಾದ್ಯಂತ ಭಾರೀ ಮಳೆ ಮುಂದುವರೆದಿದ್ದು, ತಂಬಾಕು ಹದ ಮಾಡುವ ಎರಡು ಬಾರನ್ ಹಾಗೂ ಮನೆಯೊಂದು ಕುಸಿದು ಬಿದ್ದಿದೆ. ಕೆರೆಯೊಂದರ ಕೋಡಿ ಒಡೆದಿದೆ. ತಂಬಾಕು ಹಾಗೂ ಶುಂಠಿ ಹೊಲಗಳಲ್ಲಿ ಅಪಾರ ಪ್ರಮಾಣದ ನೀರು ನಿಂತಿದ್ದು, ಬೆಳೆಗಳು ಕೊಳೆಯುವ ಭೀತಿ ಎದುರಾಗಿದೆ.

ಹನಗೋಡು ಹೋಬಳಿಯ ಕಚುವಿನಹಳ್ಳಿ ಗ್ರಾಮದ ಲೇ.ಜವರೇಗೌಡರ ಪತ್ನಿ ಜಯಮ್ಮ ಮತ್ತು ಹರೀನಹಳ್ಳಿಯ ರುದ್ರಾರಾಧ್ಯರ ಪತ್ನಿ ಲಲಿತಮ್ಮರಿಗೆ ಸೇರಿದ ತಂಬಾಕು ಹದಗೊಳಿಸುವ ಬ್ಯಾರನ್ ಕಟ್ಟಡದ ಗೋಡೆ ಕುಸಿದು ಬಿದ್ದು  ಸಂಪೂರ್ಣ ಹಾನಿಯಾಗಿದೆ. ಅರಸುಕಲ್ಲಹಳ್ಳಿಯ ಕುಮಾರ್‌ ಎಂಬವರಿಗೆ ಸೇರಿದ ಮನೆ ಬಿದ್ದು ಹೋಗಿದೆ.

ಹಾರಿ ಹೋದ ಮೇಲ್ಛಾವಣಿ:

ಚಿಲ್ಕುಂದದಲ್ಲಿ ಸೋಮವಾರ ಸಂಜೆ ಬೀಸಿದ ಬಿರುಗಾಳಿಗೆ ರಾಮಶೆಟ್ಟರ ಮನೆ ಮೇಲ್ಚಾವಣಿ ಹಾಗೂ ಚಂದ್ರು ಎಂಬವರ ಕೊಟ್ಟಿಗೆಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿ ಹೋಗಿ ಮನೆಯೊಳಗಿದ್ದ ದವಸ-ಧಾನ್ಯ, ಬಟ್ಟೆ, ಮತ್ತಿತರ ವಸ್ತುಗಳು ನೀರಿನಲ್ಲಿ ತೋಯ್ದು ಹಾಳಾಗಿದೆ.

ಜೋಳದ ಬಿತ್ತನೆ ನಾಶ:

ಗುರುಪುರ ಗ್ರಾ.ಪಂ. ವ್ಯಾಪ್ತಿಯ ಕಾಳೇನಹಳ್ಳಿಯ ತಗ್ಗು ಪ್ರದೇಶದ ಜಮೀನುಗಳಲ್ಲಿ ಅಪಾರ ಪ್ರಮಾಣದ ಮಳೆ ನೀರು ನಿಂತಿದ್ದು, ಇತ್ತೀಚೆಗೆ ಬಿತ್ತನೆ ಮಾಡಿದ್ದ ನಟೇಶ್, ಶ್ರೀನಿವಾಸ್, ಆನಂದ, ಕಲೀಂ ಮತ್ತಿತರ ರೈತರಿಗೆ ಸೇರಿದ ಮುಸುಕಿನ ಜೋಳ ಹಾಗೂ ರಸಗೊಬ್ಬರ ಸಹಿತ ನೀರು ಪಾಲಾಗಿದೆ.

ಕೋಡಿ ಒಡೆದ ಅತ್ತಿಕುಪ್ಪೆ ಕೆರೆ:

ಅತ್ತಿಕುಪ್ಪೆಯ 7 ಎಕರೆ ವಿಸ್ತೀರ್ಣದ ಸರಕಾರಿ ಕೆರೆಯ ಕೋಡಿ ಒಡೆದು ಅಪಾರ ಪ್ರಮಾಣದ ನೀರು ಜಮೀನಿನ ಮೇಲೆ ಹರಿದಿದ್ದು, ಕೆರೆ ಕೆಳಬಾಗದ ಅಡಿಕೆ, ತೆಂಗಿನ ತೋಟ, ಶುಂಠಿ, ತಂಬಾಕು ಜಮೀನು ಜಲಾವೃತವಾಗಿದ್ದು, ಕಣ್ಣು ಹಾಯಿಸಿದೆಲ್ಲೆಡೆ ಜಮೀನು ಕೆರೆಗಳಂತೆ ಗೋಚರಿಸುತ್ತಿವೆ.

ಕಂದಾಯಾಧಿಕಾರಿಗಳ ಭೇಟಿ:

ಹನಗೋಡು ನಾಡಕಚೇರಿಯ ರಾಜಸ್ವ ನಿರೀಕ್ಷಕ ಪ್ರಶಾಂತ ರಾಜೇ ಅರಸ್, ಗ್ರಾಮ ಆಡಳಿತಾಧಿಕಾರಿಗಳಾದ ಸುನಿಲ್ ಅಂತೋಣಿರಾಜ್, ಮಲ್ಲೇಶ್, ಸುಮಂತ್‌, ಅತ್ತಿಕುಪ್ಪೆಯ ಕೆರೆ ಕೋಡಿ ಒಡೆದು ಹಾನಿಗೊಳಗಾಗಿರುವ ಪ್ರದೇಶ ಹಾಗೂ ಕಲ್ಲಹಳ್ಳಿ, ತಟ್ಟೆಕೆರೆ, ಹೊಸಕೋಟೆ, ಕಚುವಿನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ, ಮನೆ, ಬಾರನ್ ಹಾನಿ ಪರಿಶೀಲಿಸಿದರು.

ಇಷ್ಟೊಂದು ಬೆಳೆ ನಷ್ಟವಾಗಿದ್ದರೂ ಯಾವುದೇ ಜನಪ್ರತಿನಿಧಿಗಳಾಗಲಿ ಹಿರಿಯ ಅಧಿಕಾರಿಗಳಾಗಲಿ ಹಾನಿ ಪ್ರದೇಶಕ್ಕೆ ಭೇಟಿ ನೀಡದಿರುವುದು ರೈತರಲ್ಲಿ ಆಕ್ರೋಶ ಮಡುಗಟ್ಟಿದೆ.

ಟಾಪ್ ನ್ಯೂಸ್

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.