![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 1, 2020, 6:16 AM IST
ಮೈಸೂರು: ತಿ.ನರಸೀಪುರ ಪುರಸಭೆಯಲ್ಲಿ ಖಾಯಂ ಪೌರಕಾರ್ಮಿಕರ ಹುದ್ದೆಗೆ ಅಕ್ರಮವಾಗಿ ನೇಮಕವಾಗಿರುವ ಸವರ್ಣೀಯರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದಸಂಸ ಪುನರ್ ಅವಲೋಕನ ರಾಜ್ಯ ಸಮಿತಿ, ಪೌರಕಾರ್ಮಿಕರ ಅಸಂಘಟಿತ ಕಾರ್ಮಿಕ ವಿಭಾಗದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸಮಾವೇಶ ಗೊಂಡ ಪ್ರತಿಭಟನಾಕಾರರು, 16 ಖಾಯಂ ಹುದ್ದೆಗಳಲ್ಲಿ 10 ಖಾಯಂ ಪೌರಕಾರ್ಮಿಕ ಹುದ್ದೆಗಳ ಪೈಕಿ ನಾಲ್ವರು ಆದಿದ್ರಾವಿಡ ಜನಾಂಗಕ್ಕೆ ಸೇರಿದವರಾ ಗಿದ್ದು, ಹಾಲಿ ಸ್ವತ್ಛತಾ ಕೆಲಸವನ್ನು ಪುರಸಭೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಉಳಿದ ನಟರಾಜು, ಸವಿತಾ, ಆರ್. ಬಸವರಾಜು, ಎಂ.ಲಿಂಗರಾಜು, ಬಿ.ಬಿ.ಗೋಪಾಲಕೃಷ್ಣ, ಸೋಮಣ್ಣ ಸವರ್ಣಿàಯರಾ ಗಿದ್ದು ಖಾಯಂ ಪೌರ ಕಾರ್ಮಿಕ ಹುದ್ದೆ ಪಡೆದುಕೊಂಡಿದ್ದಾರೆ.
ಆದರೆ ಇವರು ಸ್ವತ್ಛತಾ ಕೆಲಸ ಮಾಡದೆ, ಪ್ರತಿ ತಿಂಗಳು ವೇತನ ಪಡೆದು ಸರ್ಕಾರವನ್ನು ವಂಚಿಸುತ್ತಿದ್ದಾರೆಂದು ಆರೋಪಿಸಿದರು. ತಿ.ನರಸೀಪುರ ಪುರಸಭೆಯ ಮುಖ್ಯಾಧಿಕಾರಿ ಅಶೋಕ್ ನಿಯಮಾವಳಿ ಉಲ್ಲಂ ಸಿ ನೇಮಕಗೊಂ ಡಿರುವ ಖಾಯಂ ಪೌರಕಾರ್ಮಿಕರ ಕೆಲಸ ಮಾಡಿಸದೇ ತಮಗೆ ಬೇಕಾದ ಸ್ಥಳಗಳಿಗೆ ನಿಯೋಜನೆ ಮಾಡುತ್ತಿದ್ದಾರೆ ಎಂದು ದೂರಿದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಈ 6 ಮಂದಿಯನ್ನು ವಜಾಗೊಳಿಸಬೇಕು.
ಈ ಹುದ್ದೆಗಳಿಗೆ ಸರ್ಕಾರದ ಆದೇಶದಂತೆ ಹೊಸದಾಗಿ 6 ಮಂದಿಯನ್ನು ಪೌರಕಾರ್ಮಿಕ ಹುದ್ದೆಗಳಿಗೆ ಪುನರ್ ನೇಮಿಸಬೇಕು. ಮುಖ್ಯಾಧಿಕಾರಿ ಅಶೋಕ್‌ರನ್ನು ಅಮಾನತುಗೊಳಿಸ ಬೇಕು. 9 ಮಂದಿಗೆ ಬಾಕಿ ಉಳಿಸಿಕೊಂಡಿರುವ ತುಟ್ಟಿ ಭತ್ಯೆ, ವೇತನ ಮಂಜೂರು ಮಾಡಬೇಕೆಂದರು. ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ಆಲಗೂಡು ಡಾ.ಚಂದ್ರಶೇಖರ್, ಅಶೋಕಪುರಂ ಫೈಲ್ವಾನ್ ಕೃಷ್ಣ, ಆರ್ಟಿಸ್ಟ್ ನಾಗರಾಜು, ಬಾಬು, ಚಕ್ರಪಾಣಿ, ಮೈಸೂರು ಮಹದೇವು, ಗುರುಮೂರ್ತಿ, ಮಾದ, ಸೋಮ ಮತ್ತಿತರರು ಭಾಗವಹಿಸಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.