ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ; ಜಿಂಕೆ ಮಾಂಸ ಅಕ್ರಮ ಸಾಗಾಟ; ಇಬ್ಬರ ಬಂಧನ
Team Udayavani, Sep 21, 2020, 7:46 PM IST
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದೊಳಗೆ ಅಕ್ರಮವಾಗಿ ಪ್ರವೇಶಿಸಿ ಜಿಂಕೆ ಭೆಟಿಯಾಡಿ ಮಾಂಸ ಸಾಗಾಟ ಮಾಡುತ್ತಿದ್ದಾಗ ಅಧಿಕಾರಿಗಳು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ.
ಉದ್ಯಾನದ ಆನೆಚೌಕೂರು ವಲಯದ ಕೆಂಬುಕೊಲ್ಲಿ ಆನೆ ತಡೆ ಕಂದಕದ ಬಳಿ ಘಟನೆ ನಡೆದಿದ್ದು. ಸೂಳಗೋಡು ಗ್ರಾಮದ ಎಸ್.ಬಿ.ಮನು, ಆಯರಹಳ್ಳಿ ಹಾಡಿಯ ಮಂಜು ಬಂಧಿತರು. ಬಂಧಿತರಿಂದ 20 ಕೆಜಿ ಜಿಂಕೆ ಮಾಂಸ, ಸೀಗಲ್ ಬ್ಯಾರಲ್ ಗನ್ ಮತ್ತಿತರ ಪರೀಕರಗಳನ್ನು ವಶಕ್ಕೆ ಪಡೆಯಲಾಗಿದೆ.
ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿ ಮೇರೆಗೆ ನಾಗರಹೊಳೆ ಉದ್ಯಾನದ ಹುಣಸೂರು ವಲಯದ ಎಸಿಎಫ್ ಸತೀಶ್ ರವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಸಿಬಂದಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸೂಳಗೋಡಿನ ರಾಜು, ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಪೂವಯ್ಯ ಪರಾರಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದ್ದು. ಪರಾರಿಯಾದವರ ಪತ್ತೆಗೆ ತಂಡ ರಚಿಸಲಾಗಿದೆ ಎಂದು ನಾಗರಹೊಳೆ ಉದ್ಯಾನವನದ ಹುಲಿಯೋಜನೆ ನಿರ್ದೇಶಕ ಡಿ ಮಹೇಶ್ ಕುಮಾರ್ ಉದಯವಾಣಿಗೆ ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.