Hunsur: ಬೆಂಕಿ ರೋಗ, ಎಲೆ ಸುರುಳಿ ಹುಳುಗಳಿಂದ ಬೆಳೆಗಳನ್ನು ರಕ್ಷಿಸಲು ಕೀಟನಾಶಕ ಲಭ್ಯ
Team Udayavani, Oct 12, 2023, 2:19 PM IST
ಹುಣಸೂರು: ಇತ್ತೀಚಿನ ದಿನಗಳಲ್ಲಿ ಭತ್ತದ ಬೆಳೆಗೆ ಬೆಂಕಿ ರೋಗ, ಎಲೆ ಸುರುಳಿ ಹುಳಗಳು ಕಾಣಿಸಿಕೊಳ್ಳುತ್ತಿದ್ದು ಇವುಗಳು ಭತ್ತದ ಬೆಳೆಯನ್ನು ನಾಶ ಮಾಡುತ್ತಿರುವುದರಿಂದ ರೈತರು ಸಂಕಷ್ಟಗೀಡಾಗುತ್ತಿದ್ದಾರೆ. ಇದಕ್ಕೆ ಪರಿಹಾರವಾಗಿ ಬಣಕಲ್ ನ ರೈತ ಸಂಪರ್ಕ ಕೇಂದ್ರ ಕಚೇರಿ ಪ್ರಕಟಣೆಯೊಂದನ್ನು ನೀಡಿದೆ.
ಬೆಂಕಿ ರೋಗ: ಎಲೆಗಳ ಮೇಲೆ ಕಂದು ಬಣ್ಣದ ಚುಕ್ಕೆಗಳು ಕಾಣುತ್ತವೆ. ಇಂತಹ ಚುಕ್ಕೆಗಳ ಮಧ್ಯಭಾಗವೂ ನಂತರದ ದಿನಗಳಲ್ಲಿ ಬೂದಿ ಬಣ್ಣಕ್ಕೆ ತಿರುಗುತ್ತದೆ. ಹಾಗೂ ಇಂತಹ ಹಲವಾರು ಚುಕ್ಕೆಗಳು ಸೇರಿ ಎಲೆಗಳು ಸುಟ್ಟಂತೆ ಕಾಣುತ್ತವೆ.
ಬೆಂಕಿ ರೋಗದ ಹತೋಟಿಗೆ ಬರಲು TRICYCLAZOLE ಶಿಲೀಂದ್ರ ನಾಶಕವನ್ನು 0.6 ಗ್ರಾಂ ಅನ್ನು ಪ್ರತಿ ಲೀಟರಿಗೆ ಬೆರೆಸಿ ಸಿಂಪರಣೆ ಮಾಡಬೇಕು.
ಎಲೆ ಸುರುಳಿ ಹುಳು: ಮರಿ ಹುಳುಗಳು ಎಲೆಗಳನ್ನು ಸುರುಳಿ ಮಾಡಿ ಅದರೊಳಗೆ ಇದ್ದು ಹಸಿರು ಭಾಗವನ್ನು ಕೆರೆದು ತಿನ್ನುವುದರಿಂದ ಎಲೆಗಳ ಮೇಲೆ ಬಿಳಿ ಪಟ್ಟಿಗಳು ಕಾಣುತ್ತವೆ.
ಈ ಹುಳುಗಳನ್ನು ಹತೋಟಿಗೆ ತರಲು ಕ್ಲೋರೋಫೈರಿಪಾಸ್ ಕೀಟನಾಶಕವನ್ನು 2 ಮಿ.ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಣೆ ಮಾಡಬೇಕು.
Tricyclazole ಶಿಲೀಂದ್ರ ನಾಶಕ ಹಾಗೂ ಕ್ಲೋರೋಫೈರಿಫಾಸ್ ಕೀಟನಾಶಕ ಬಣಕಲ್ ನ ರೈತ ಸಂಪರ್ಕ ಕೇಂದ್ರದಲ್ಲಿ ಲಭ್ಯವಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಬಣಕಲ್ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ವೆಂಕಟೇಶ್ ಎಂ ಆರ್ ವಿನಂತಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.