Mysore: ರಾಮ ಮಂದಿರದಿಂದ ರಾಜಕೀಯ ಲಾಭದ ಬದಲು ಬಿಜೆಪಿಗೆ ತಿರುಗುಬಾಣವಾಗಲಿದೆ: ಸಿಎಂ
Team Udayavani, Jan 25, 2024, 11:51 AM IST
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಲಾಭವಾಗುತ್ತೆ ಎಂದು ಬಿಜೆಪಿ ಆತುರ ಆತುರದಲ್ಲಿ ರಾಮ ಮಂದಿರ ಉದ್ಘಾಟನೆ ಮಾಡಿದ್ದಾರೆ ಆದರೆ ಇದೇ ರಾಮಮಂದಿರ ಬಿಜೆಪಿಯವರಿಗೆ ತಿರುಗುಬಾಣವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜಕೀಯವಾಗಿ ಅನುಕೂಲ ಆಗುತ್ತೆ ಅಂತಾ ಆತುರವಾಗಿ ರಾಮ ಮಂದಿರ ಉದ್ಘಾಟನೆ ಮಾಡಿದ್ದಾರೆ. ರಾಮಂಮದಿರ ಪೂರ್ಣವಾಗಿ ನಿರ್ಮಾಣವಾಗಿಲ್ಲ. ರಾಮ ಮಂದಿರದಿಂದ ರಾಜಕೀಯ ಲಾಭ ಆಗುತ್ತೆ ಅನ್ನೋದು ಬಿಜೆಪಿಯವರ ಕನಸಿನ ಮಾತು ಇದರ ಬದಲಿಗೆ ರಾಮ ಮಂದಿರ ವಿಚಾರ ಬಿಜೆಪಿಗೆ ತಿರುಗುಬಾಣವಾಗಿ ಪರಿಣಮಿಸಲಿದೆ ಜನ ಅಭಿವೃದ್ಧಿಕಾರ್ಯಗಳನ್ನು ಗಮನಿಸುತ್ತಿದ್ದಾರೆ ಜೊತೆಗೆ ಪ್ರಜಾಪ್ರಭುತ್ವವನ್ನು ಒಪ್ಪಿಕೊಂಡಿದ್ದಾರೆ ಇದಕ್ಕೆ ಸರಿಯಾಗಿ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.
ಜಾತಿ ಗಣತಿ ವರದಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ‘ಜಾತಿಗಣತಿ ವರದಿ ನನಗೆ ಗೊತ್ತಿಲ್ಲ. ವರದಿ ಕೊಡಕ್ಕೆ ಅವರು ಸಮಯಕ್ಕೆ ಕೇಳಿಲ್ಲ. ಕೇಳಿದ್ರೆ ಸಮಯಕೊಡುತ್ತೇವೆ, ನಂತರ ವರದಿ ಪಡೆಯುತ್ತೇವೆ ಯಾರು ಆ ವರದಿಯನ್ನ ನೋಡಿಲ್ಲ ಹೀಗಾಗಿ ಅದರ ಬಗ್ಗೆ ಏನು ಮಾತನಾಡಲು ಸಾಧ್ಯವಾಗಿಲ್ಲ ವರದಿ ಕೊಟ್ಟ ಬಳಿಕ ಪರಿಶೀಲನೆ ಕೂಡ ಇರುತ್ತದೆ ಎಂದು ಹೇಳಿದರು.
ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಬರುತ್ತಾರೆ ಎಂಬ ವಿಚಾರಕ್ಕೆ ಸಂಬಂಧಿಸಿ ಹೇಳಿಕೆ ನೀಡಿದ ಅವರು. ಬಿಜೆಪಿ ಸೇರುವ ವಿಚಾರದಲ್ಲಿ ಈಗಾಗಲೇ ಜಗದೀಶ್ ಶೆಟ್ಟರ್ ಉತ್ತರ ನೀಡಿದ್ದಾರೆ. ನನಗೆ ಅವಮಾನವಾಗಿರುವ ಪಕ್ಷಕ್ಕೆ ಹೋಗಲ್ಲ ಅಂತಾ ಹೇಳಿದ್ದಾರೆ ಅಲ್ಲೇ ಉತ್ತರ ಇದೆಯಲ್ವ. ಯಾರು ಎಷ್ಟೇ ಪ್ರಯತ್ನ ಮಾಡಿದ್ರು ಜಗದೀಶ್ ಶೆಟ್ಟರ್ ಬಿಜೆಪಿಗೆ ಹೋಗಲ್ಲ ಎಂದು ಹೇಳಿದರು.
ನಿಗಮ ಮಂಡಳಿಗೆ ನೇಮಕಾತಿ ವಿಚಾರ ಕುರಿತು ಹೇಳಿಕೆ ನೀಡಿದ ಅವರು ಹೈಕಮಾಂಡ್ ನಿಗಮ ಮಂಡಳಿಗಳ ಪಟ್ಟಿಗೆ ಒಪ್ಪಿಗೆ ನೀಡಿದ ಬಳಿಕ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿಕೆ ನೀಡುವ ಮೂಲಕ ನಿಗಮ ಮಂಡಳಿಗಳ ಪಟ್ಟಿ ಹೈಕಮಾಂಡ್ ಬಳಿ ಇದೆ ಎಂಬುದನ್ನ ಸ್ಪಷ್ಟಪಡಿಸಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು ಮಡಿದ ವಿಚಾರದ ಕುರುತು ಹೇಳಿಕೆ ನೀಡಿದ ಸಿಎಂ ‘ತಪ್ಪು ಮಾಡಿದಾಗ ಮಾತ್ರ ಎಫ್‌ಐಆರ್ ಹಾಕಬೇಕು. ಆದರೆ ಉದ್ದೇಶಪೂರ್ವಕವಾಗಿ ಕೇಸ್ ಹಾಕಿದ್ದಾರೆ ರಾಹುಲ್ ಗಾಂಧಿ ಇದಕ್ಕೆಲ್ಲ ಕೇರ್ ಮಾಡಲ್ಲ ಎಂದು ಹೇಳಿದರು.
ಇದನ್ನೂ ಓದಿ: National Tourism Day: ಸಂತಾನ ಪ್ರಾಪ್ತಿ ಮಾಡುವ ಕೋಟದ ಹಲವು ಮಕ್ಕಳ ತಾಯಿ ಅಮೃತೇಶ್ವರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.